“ವಿವೇಕಾನಂದರ ಚಿಂತನೆ ಅರ್ಥೈಸಿದರೆ ಸಾಧನೆ ಸುಲಭ’
Team Udayavani, Apr 25, 2017, 6:40 PM IST
ನೆಹರೂನಗರ: ಸಮರ್ಪಿತ ಮನೋಭಾವದ ವಿವೇಕಾನಂದರ ಚಿಂತನೆಗಳನ್ನು ಯುವ ಸಮೂಹ ಅರ್ಥ ಮಾಡಿಕೊಂಡರೆ ಜೀವನದಲ್ಲಿ ಬಹುದೊಡ್ಡ ಸಾಧನೆಯನ್ನು ಮಾಡಲು ಸಾಧ್ಯ ಎಂದು ರಾಷ್ಟ್ರೀಯ ವಿಚಾರವಾದಿ, ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ನೂತನವಾಗಿ ಆರಂಭಗೊಂಡ ಚಾರಿತ್ರ್ಯ ನಿರ್ಮಾಣ ಸಂಘಟನೆ “ವಿವೇಕ ಸಂಕಲ್ಪ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಾರದೇ ಬದುಕನ್ನು ಬದಲಾಯಿಸುವ ಶಕ್ತಿ ಇರುವ ವಿವೇಕಾನಂದರ ಚಿಂತನೆಯ ಪ್ರೇರಣೆಯಂತೆ ಭಾರತ ಈಗ ಸಾಗುತ್ತಿದೆ ಎಂದರು.
ಅದ್ಭುತ ಚಿಂತನೆ
ಸ್ವಾಮಿ ವಿವೇಕಾನಂದರ ಭಾವಚಿತ್ರದ ಮುಂದೆ ನಿಂತು ವಿವೇಕಾನಂದರ ಕಣ್ಣುಗಳನ್ನು ನೋಡಿದಾಗ ಅವರ ಶಕ್ತಿಯ ಅರಿವಾಗುತ್ತದೆ. ಮಾತೃಪ್ರೇಮ ಮತ್ತು ಮಾತೃ ಭೂಮಿ ಪ್ರೇಮವನ್ನು ಶ್ರೇಷ್ಠವಾಗಿ ಅಂಗೀಕರಿಸಿಕೊಂಡ ವಿವೇಕಾನಂದರ ಚಿಂತನೆಗಳನ್ನು ಓದಿದವರ ಮನಸ್ಸು ಸುಮ್ಮನಿರುವುದಿಲ್ಲ. ಅಂತವರು ಜೀವನದಲ್ಲಿ ಯಾವುದಾದರೊಂದು ದೊಡ್ಡ ಸಾಧನೆಯನ್ನು ಮಾಡುತ್ತಾರೆ. ಖ್ಯಾತ ಹೋರಾಟಗಾರ ಅಣ್ಣಾ ಹಜಾರೆಯವರ ಮೇಲೂ ವಿವೇಕಾನಂದರ ಚಿಂತನೆಗಳು ಪ್ರಭಾವ ಬೀರಿವೆ ಎಂದರು.
ಅಧ್ಯಕ್ಷತೆ ವಹಿಸಿದ ವಿವೇಕಾನಂದ ಎಂಜಿನಿಯರಿಂಗ್ ಕಾಲೇ ಜಿನ ಸಂಚಾಲಕ ಕೆ. ರಾಧಾಕೃಷ್ಣ ಭಕ್ತ ಮಾತನಾಡಿ, ಕಾಲೇಜಿನ ಗ್ರಂಥಾಲಯದಲ್ಲಿ ವಿವೇಕಾನಂದರ ಚಿಂತನೆಗಳನ್ನು ಒಳಗೊಂಡ ಪುಸ್ತಕಗಳಿರುವ ವಿಭಾಗ ತೆರೆಯಲಾಗಿದೆ. ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಾರದಲ್ಲಿ 1 ದಿನ ವಿವೇಕಾನಂದರ ಕುರಿತು ಪಾಠವನ್ನು ಆರಂಭಿಸಲಾಗುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಎಂ. ಎಸ್. ಗೋವಿಂದೇ ಗೌಡ, ಕ್ಯಾಂಪಸ್ ನಿರ್ದೇಶಕ ವಿವೇಕ್ ರಂಜನ್ ಭಂಡಾರಿ ಉಪಸ್ಥಿತರಿದ್ದರು. ವಿವೇಕ ಸಂಕಲ್ಪದ ಸಂಯೋಜಕ ಪ್ರೊ| ಗಿರೀಶ್ ಹೆಗ್ಡೆ ಪ್ರಸ್ತಾವನೆಗೈದು ಸ್ವಾಗತಿಸಿದರು. ವಿದ್ಯಾರ್ಥಿ ಶರಣ್ ವಂದಿಸಿದರು. ಪ್ರೊ| ಸಾಯಿ ಸೌಜನ್ಯಾ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ
Bantwal: ಸಾಮಾನ್ಯ ಸೈಕಲನ್ನೇ ಎಲೆಕ್ಟ್ರಿಕ್ ಆಗಿ ಪರಿವರ್ತಿಸಿದ ಬಾಲಕ!
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ
Sri Kukke Subrahmanya ಕ್ಷೇತ್ರದಲ್ಲಿ ವಿಶೇಷ ಪುಷ್ಪಾಲಂಕಾರ ಸೇವೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು
America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.