ಅಗತ್ಯ ಬಿದ್ದರೆ ಗುಂಡುಹಾರಿಸಿ ಪೊಲೀಸರಿಗೆ ಐಜಿಪಿ ಸೂಚನೆ
Team Udayavani, Jul 10, 2017, 3:45 AM IST
ಮಂಗಳೂರು: ಪೊಲೀಸರು ಇಲ್ಲವೇ ನಾಗರಿಕರ ಮೇಲೆ ಹಲ್ಲೆಗೆ ಮುಂದಾದರೆ ಅಂತಹ ಸಮಾಜಘಾತಕ ಶಕ್ತಿಗಳ ವಿರುದ್ಧ ಅಗತ್ಯ ಬಿದ್ದರೆ ಕಾನೂನಿನ ವ್ಯಾಪ್ತಿಯಲ್ಲಿ ಗುಂಡು ಹಾರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಂತೆ ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಸೂಚನೆ ನೀಡಿ¨ªಾರೆ.
ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹಿಂದೆ ಮುಂದೆ ನೋಡಬಾರದು. ಕಾನೂನು ಕೈಗೆತ್ತಿಕೊಂಡವರು ಯಾರೇ ಇರಲಿ. ಅಂತಹವರ ವಿರುದ್ಧ ಕಾನೂನಿನಡಿಯಲ್ಲೆ ಕ್ರಮ ಜರಗಿಸಿ ಎಂದು ಪೊಲೀಸರಿಗೆ ಆದೇಶಿಸಿ¨ªಾರೆ.
ಶಾಂತಿ ನೆಲೆಸುವುದು ಮುಖ್ಯ
“ನಮಗೆ ಜಿಲ್ಲೆಯಲ್ಲಿ ಶಾಂತಿ ನೆಲೆಸುವುದು ಮುಖ್ಯ. ಕಳೆದೆರಡು ದಿನಗಳಿಂದ ನಿರಂತರವಾಗಿ ಸಭೆಗಳನ್ನು ನಡೆಸಲಾಗಿದೆ. ಜಿಲ್ಲೆಯಲ್ಲಿ ಏಳು ಕಡೆ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು’ ಎಂದು ಹರಿಶೇಖರನ್ ಮನವಿ ಮಾಡಿದರು.
ಜೈಲಿಗಟ್ಟುವೆವು: ಎಸ್‌ಪಿಸಮಾಜಘಾತುಕ ಶಕ್ತಿಗಳು ಕೂಡಲೇ ತಮ್ಮ ಅಟಾಟೋಪಗಳನ್ನು ನಿಲ್ಲಿಸದಿದ್ದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರಗಿಸಿ ಜೈಲಿಗಟ್ಟಲಾಗುವುದು ಎಂದು ಜಿÇÉಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿ¨ªಾರೆ.
“ಪರಿಸ್ಥಿತಿಯನ್ನು ನಿಯಂತ್ರಿಸಲು ನಾವು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಕೆಲವು ದುಷ್ಟಶಕ್ತಿಗಳು ಪರಿಸ್ಥಿತಿಯ ದುರ್ಲಾಭ ಪಡೆಯಲು ಯತ್ನಿಸುತ್ತಿವೆ. ಇನ್ನು ಮುಂದೆ ಯಾರಾದರೂ ಗಲಭೆ ನಡೆಸಲು ಮುಂದಾದರೆ ಜೈಲಿಗೆ ಹೋಗಲು ಸಿದ್ಧರಾಗಿರಿ’ ಎಂಬ ಕಠಿನ ಸಂದೇಶವನ್ನು ರವಾನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ಮತ್ತು ಬಿ.ಸಿ.ರೋಡ್ ಸೇರಿದಂತೆ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಶನಿವಾರಕ್ಕೆ ಹೋಲಿಸಿದರೆ ಇಂದು ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ ಎಂದು ವಿವರಿಸಿದರು.
ಆಯಕಟ್ಟಿನ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಸಾರ್ವ ಜನಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ
ಮಾಡಿದ ಅವರು, ವದಂತಿ ಹಬ್ಬಿಸುವವರ ವಿರುದ್ಧವೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬಂಟ್ವಾಳ, ಬಿ.ಸಿ. ರೋಡ್, ಕೈಕಂಬ ಹಾಗೂ ಸುತ್ತಮುತ್ತ ನಿಷೇಧಾಜ್ಞೆ ಮುಂದುವರಿದಿದೆ. ಬಂಟ್ವಾಳ ತಾಲೂಕಿನಾದ್ಯಂತ ನಾಕಾಬಂದಿ ಏರ್ಪಡಿಸಿದ್ದು, ತಾಲೂಕಿನ ಒಳಬರುವ ಮತ್ತು ಒಳಹೋಗುವ ಎಲ್ಲ ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ ಎಂದರು.
ಅಪರಿಚಿತ ವಾಹನಗಳಲ್ಲಿ ಕೆಲವರು ಶಸ್ತ್ರಾಸ್ತ್ರಗಳನ್ನು ತುಂಬಿಕೊಂಡು ಬಂಟ್ವಾಳ ತಾಲೂಕನ್ನು ಪ್ರವೇಶಿಸುತ್ತಿ¨ªಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ನಾಕಾಬಂದಿ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಯನ್ನು ಪ್ರವೇಶಿಸುವ ಹಾಗೂ ಹೊರ
ಹೋಗುವ ವಾಹನಗಳನ್ನು ಬಿಗಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಭದ್ರತೆಗಾಗಿ 1,300ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಗತ್ಯ ಬಿದ್ದರೆ ಇನ್ನು ಹೊರ ಜಿಲ್ಲೆಗಳಿಂದ ಪಡೆಗಳನ್ನು ಕರೆಸಿಕೊಳ್ಳಲಾಗುವುದು. ಜಿಲ್ಲೆ ಸಹಜ ಸ್ಥಿತಿಗೆ ಮರಳುವವರೆಗೂ ಭದ್ರತಾ ಪಡೆ ಮೊಕ್ಕಾಂ ಹೂಡಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Mangaluru: ಕರಾವಳಿಯಲ್ಲಿ ಈ ಬಾರಿ ವಾಡಿಕೆಯಂತೆ ಚಳಿ
Fraud Case: ಎಪಿಕೆ ಫೈಲ್ ಕಳುಹಿಸಿ 1.31 ಲ.ರೂ. ವಂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.