ನೆಲ್ಯಾಡಿ: ಅಕ್ರಮ ಜಾನುವಾರು ಸಾಗಾಟ ಪತ್ತೆ: ಓರ್ವನ ಬಂಧನ

ಪೊಲೀಸರ ಕಾರ್ಯಾಚರಣೆ

Team Udayavani, Oct 19, 2019, 9:18 PM IST

1910nld-002-januvaru-3

ನೆಲ್ಯಾಡಿ: ಹಾಸನ ಕಡೆಯಿಂದ ಮಂಗಳೂರಿನ ಕಸಾಯಿಖಾನೆಗೆ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದುದನ್ನು ಅ.19ರಂದು ಬೆಳಗ್ಗೆ ನೆಲ್ಯಾಡಿಯಲ್ಲಿ ಪತ್ತೆ ಹಚ್ಚಿದ ಪೊಲೀಸರು ಓರ್ವನನ್ನು ಬಂಧಿಸಿ, ಜಾನುವಾರು ಹಾಗೂ ಸಾಗಾಟಕ್ಕೆ ಬಳಸಿದ್ದ ಈಚರ್‌ ವಾಹನ ವಶಕ್ಕೆ ತೆಗೆದುಕೊಂಡಿದ್ದಾರೆ.

ಮಂಗಳೂರು ತಾಲೂಕು ಶಾಂತಿಗುಡ್ಡೆ ನಿವಾಸಿ ಮೊಯಯಿದ್ದಿ ಎಂಬವರ ಮಗ, ಈಚರ್‌ ಚಾಲಕ ನವಾಜ್‌ (32)ಬಂಧಿತ. ಲಾರಿಯಲ್ಲಿದ್ದ ಹಸೈನಾರ್‌, ನಿಝಾರ್‌ ಜೋಕಟ್ಟೆ, ಹನೀಫ್ ಜೋಕಟ್ಟೆ, ಮುಸ್ತಾಕ್‌ ಅಡ್ಯಾರ್‌ ಕಣ್ಣೂರು ಎಂಬವರು ಪರಾರಿಯಾಗಿದ್ದಾರೆ.

ವಾಹನದಲ್ಲಿದ್ದ 17 ದನ, 3 ಗಂಡು ಕರು ಹಾಗೂ 2 ಎಮ್ಮೆ ಸೇರಿ ಒಟ್ಟು 22 ಜಾನುವಾರುಗಳನ್ನು ನೆಲ್ಯಾಡಿ ಹೊರ ಠಾಣಾ ಪೊಲೀಸರು ರಕ್ಷಿಸಿದ್ದಾರೆ. ಜಾನುವಾರುಗಳನ್ನು ಅಮಾನುಷವಾಗಿ ತುಂಬಿಸಲಾಗಿದ್ದು, ಪರಿಣಾಮ 1 ಜಾನುವಾರು ಉಸಿರುಗಟ್ಟಿ ಮೃತಪಟ್ಟಿದೆ.

ಘಟನೆ ವಿವರ:
ಶನಿವಾರ ಬೆಳಗ್ಗೆ ಸುಮಾರು 6 ಗಂಟೆಗೆ ಗುಂಡ್ಯ ಚೆಕ್‌ಪೋಸ್ಟ್‌ನಲ್ಲಿ ಈ ವಾಹನವನ್ನು ನಿಲ್ಲಿಸಲು ಸೂಚಿಸಿದರೂ ಧಿಕ್ಕರಿಸಿ ಮಂಗಳೂರು ಕಡೆಗೆ ವೇಗವಾಗಿ ಸಾಗಿದೆ. ಅನುಮಾನಗೊಂಡ ಚೆಕ್‌ಪೋಸ್ಟ್‌ ಸಿಬಂದಿ ನೆಲ್ಯಾಡಿ ಹೊರಠಾಣೆಯ ಎಸ್‌ಐ ಸೀತಾರಾಮ ಗೌಡರಿಗೆ ಮಾಹಿತಿ ನೀಡಿದ್ದರು. ಕೂಡಲೇ ಎಸ್‌ಐ ಹಾಗೂ ಕಾನ್‌ಸ್ಟೆಬಲ್‌ ಪ್ರತಾಪ್‌ ಅವರು ಈಚರ್‌ ಲಾರಿಯನ್ನು ನೆಲ್ಯಾಡಿಯಲ್ಲಿ ತಡೆಯಲು ಮುಂದಾದರು. ಅಲ್ಲಿಂದಲೂ ತಪ್ಪಿಸಿಕೊಂಡು ಪರಾರಿಯಾದ ವಾಹನವನ್ನು ಪೊಲೀಸರು ಬೆನ್ನಟ್ಟಿಕೊಂಡು ಹೋಗಿ ಕೊಣಾಲು ಗ್ರಾಮದ ಕೋಲ್ಪೆಯಲ್ಲಿ ತಡೆಯುವಲ್ಲಿ ಸಫ‌ಲರಾದರು.

ಜಾನುವಾರುಗಳನ್ನು ನೆಲ್ಯಾಡಿ ಹೊರಠಾಣೆಗೆ ತಂದು ಆರೈಕೆ ಮಾಡಲಾಗುತ್ತಿದೆ.ಎರಡು ವಾರದ ಹಿಂದೆಯೂ ನೆಲ್ಯಾಡಿ ಹೊರಠಾಣೆ ಪೊಲೀಸರು ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯ ಸಮೀಪದ ಈಚರ್‌ ಲಾರಿಯೊಂದನ್ನು ತಡೆದು 20ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿದ್ದರು.

ನಿರಂತರ ನಡೆಯುತ್ತಿದೆ ಅಕ್ರಮ ದನಸಾಗಾಟ:
ಒಂದೆಡೆ ಪೊಲೀಸರ ಕಾರ್ಯಾಚರಣೆುಂದ ಅಕ್ರಮ ಸಾಗಾಟಗಳನ್ನು ಪತ್ತೆಹಚ್ಚುವ ಘಟನೆ ನಡೆಯುತ್ತಿದ್ದ ಹಾಗೆಯೇ ಅಕ್ರಮ ಸಾಗಾಟಗಾರರು ಐಶಾರಾಮಿ ವಾಹನಗಳಲ್ಲಿ ಅಮಾನುಷವಾಗಿ ತುಂಬಿಸಿಕೊಂಡು ಹೋಗುವ ಘಟನೆಗಳು ನಡೆಯುತ್ತಿದ್ದು ಇದನ್ನು ಪತ್ತೆ ಮಾಡುವುದೂ ಕೂಡಾ ಸವಾಲಿನ ಕಾರ್ಯವೇ ಆಗಿದೆ. ವಶಪಡಿಸಿಕೊಂಡ ವಾಹನಗಳು ಹಾಗೂ ಆರೋಪಿಗಳು ತಕ್ಷಣ ಜಾಮೀನಿನ ಮೇಲೆ ಹೊರಬರುತ್ತಿದ್ದು ಮತ್ತೆ ಅದೇ ಚಾಳಿ ಮುಂದುವರಿಸುತ್ತಿದ್ದಾರೆ ಎಂದು ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಕ್ರಮವಾಗಿ ಸಾಗಾಟಕ್ಕೆ ಬಳಸಲಾಗುವ ವಾಹನಗಳ ದಾಖಲೆ ಪತ್ರಗಳನ್ನು ಬೇರೊಂದು ವ್ಯಕ್ತಿಗೆ ಜಿಪಿಎ ಮಾಡಿಕೊಳ್ಳುವ ಮೂಲಕ ಕಾನೂನಿನ ಕಣ್ಣಿಗೆ ಮಣ್ಣೆರಚಿ ತಕ್ಷಣ ವಾಹನಗಳನ್ನು ಬಿಡುಗಡೆಗೊಳಿಸಿ ಮತ್ತದೇ ದಂಧೆಗೆ ಬಳಸಲಾಗುತ್ತಿದೆ ಅನ್ನು ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಅಕ್ರಮ ಸಾಗಾಟ ನಡೆದಾಗ ಆರೋಪಿಗಳ ಹಾಗೂ ವಾಹನದ ಮೇಲೆ ಕಠಿಣ ಸೆಕ್ಷನ್‌ ಹಾಕಿ ವಾಹನ ಬಿಡುಗಡೆಯಾಗದಂತೆ ಕ್ರಮ ತೆಗೆದುಕೊಂಡಲ್ಲಿ ಮಾತ್ರ ಅಕ್ರಮ ಸಾಗಾಟ ನಿಯಂತ್ರಣಕ್ಕೆ ಬರಬಹುದಷ್ಟೇ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Puttur: ಬಸ್‌ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ

byndoor

Guttigaru: ಕಮರಿಗೆ ಉರುಳಿದ ಕಾರು; ಗಾಯ

Kadaba ಕೋಡಿಂಬಾಳ ಮರಬಿದ್ದು ವ್ಯಕ್ತಿ ಸಾವು ಪ್ರಕರಣ: 2 ದಿನವಾದರೂ ಸ್ಥಳ ಬಿಟ್ಟು ಕದಲದ ಕೋಳಿ!

Kadaba ಕೋಡಿಂಬಾಳ ಮರಬಿದ್ದು ವ್ಯಕ್ತಿ ಸಾವು ಪ್ರಕರಣ: 2 ದಿನವಾದರೂ ಸ್ಥಳ ಬಿಟ್ಟು ಕದಲದ ಕೋಳಿ!

Farangipete Devaki Krishna Ravalnath Temple: ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

Farangipete Devaki Krishna Ravalnath Temple: ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

Puttur:ನಾಪತ್ತೆಯಾಗಿದ್ದ ಅಸ್ಥಿಪಂಜರ ಪತ್ತೆ; ಸಾವಿನ ಬಗ್ಗೆ ಅನುಮಾನ ಆತ್ಮಹ*ತ್ಯೆಯೋ,ಕೊ*ಲೆಯೋ

Puttur:ನಾಪತ್ತೆಯಾಗಿದ್ದ ಅಸ್ಥಿಪಂಜರ ಪತ್ತೆ; ಸಾವಿನ ಬಗ್ಗೆ ಅನುಮಾನ ಆತ್ಮಹ*ತ್ಯೆಯೋ,ಕೊ*ಲೆಯೋ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-wqqwewq

Australia ಗೆಲುವಿಗೆ ಕಮಿನ್ಸ್‌  ನೆರವು: ಪಾಕಿಸ್ಥಾನ 203; ಆಸೀಸ್‌  8 ವಿಕೆಟಿಗೆ 204

crime

Trasi: ಕಾರು ಢಿಕ್ಕಿಯಾಗಿ ಗಾಯ; ಪ್ರಕರಣ ದಾಖಲು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.