ಬೆಳ್ತಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ

ಏಳು ಮಂದಿ ಸೆರೆ; 2 ವಾಹನ, 17 ಜಾನುವಾರು ವಶ

Team Udayavani, Jul 14, 2019, 9:18 AM IST

dana

ಬೆಳ್ತಂಗಡಿ: ಕೊಲ್ಲಾಪುರ ದಿಂದ ಕೇರಳದ ಕಾಸರಗೋಡಿಗೆ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಎರಡು ವಾಹನಗಳನ್ನು ಶನಿವಾರ ಮುಂಜಾನೆ ಬೆಳ್ತಂಗಡಿ ಸಬರಬೈಲಿನಲ್ಲಿ ತಡೆದ ಪೊಲೀಸರು 7 ಮಂದಿಯನ್ನು ಬಂಧಿಸಿ, 17 ಜಾನುವಾರುಗಳು, ಕಂಟೈನರ್‌ ಹಾಗೂ ಆಲ್ಟೋ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಂಟೈನರ್‌ ಚಾಲಕ ವೇಣೂರು ನಿವಾಸಿ ಹೈದರ್‌, ಕಂಟೈನರ್‌ನಲ್ಲಿದ್ದ ಕಾಸರಗೋಡಿನ ಆಲಂಬಾಡಿ ನಿವಾಸಿ ಅಬ್ದುಲ್‌ ರಹಿಮಾನ್‌, ಪಡ್ರೆ ನಿವಾಸಿ ಬಾಬು ಹಾಗೂ ಹಾಸನ ಮೂಲದ ಮಂಜೇಗೌಡ, ಕಾರಿನಲ್ಲಿದ್ದ ಕಾಸರಗೋಡು ಆಲಂಬಾಡಿ ನಿವಾಸಿ ಗಳಾದ ಅಬ್ದುಲ್‌ ರಹಿಮಾನ್‌, ಮಹಮ್ಮದ್‌ ಮುಸ್ತಫಾ, ಚಾಲಕ ಮಹಮ್ಮದ್‌ ಅಕºರ್‌ ಬಂಧಿತರು.

ಈ ತಂಡವು ನಿರಂತರವಾಗಿ ಈ ದಂಧೆಯಲ್ಲಿ ನಿರತವಾಗಿದ್ದ ಮಾಹಿತಿಯನ್ನು ಸಂಗ್ರಹಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸುಮಾರು 2 ಕಿ. ಮೀ. ಅಂತರದಲ್ಲಿ ಕಂಟೈನರ್‌ನ ಮುಂಭಾಗದಲ್ಲಿ ಬೆಂಗಾವಲಾಗಿ ಕಾರು ತೆರಳುತ್ತಿತ್ತು.

3ನೇ ಟ್ರಿಪ್‌ಗೆ ಸಿಕ್ಕಿ ಬಿದ್ದರು
ಕೊಲ್ಲಾಪುರದಲ್ಲಿ ಅತ್ಯಂತ ಕನಿಷ್ಠ ಬೆಲೆಗೆ ಜಾನುವಾರುಗಳು ಲಭ್ಯವಾಗುತ್ತಿದ್ದು, ಮಾಂಸದ ಉದ್ದೇಶದಿಂದ ಅದನ್ನು ಖರೀದಿಸಿ ಕಾಸರಗೋಡಿಗೆ ಸಾಗಿಸಿ ಅಲ್ಲಿ ದುಪ್ಪಟ್ಟು ಬೆಲೆಗೆ ಮಾರಲಾಗುತ್ತದೆ. ಆರೋಪಿಗಳು ಕೆಲವು ದಿನಗಳ ಹಿಂದೆ ಎರಡು ಟ್ರಿಪ್‌ ಜಾನುವಾರುಗಳನ್ನು ಯಶಸ್ವಿಯಾಗಿ ಸಾಗಾಟ ನಡೆಸಿದ್ದು, ಮೂರನೇ ಟ್ರಿಪ್‌ ಸಾಗಿಸುವ ಸಂದರ್ಭದಲ್ಲಿ ಸಿಕ್ಕಿ ಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವಾಧೀನಪಡಿಸಿರುವ ವಾಹನ ಹಾಗೂ ಜಾನುವಾರುಗಳ ಮೌಲ್ಯ ಸುಮಾರು 15 ಲ.ರೂ.ಎಂದು ಅಂದಾಜಿಸಲಾಗಿದೆ. ವಶಕ್ಕೆ ಪಡೆದಿರುವ 16 ಕೋಣಗಳು ಹಾಗೂ ಒಂದು ಎಮ್ಮೆಯನ್ನು ಶನಿವಾರ ಬೆಳ್ತಂಗಡಿ ಠಾಣೆಯ ವಠಾರದಲ್ಲಿ ಕಟ್ಟಿಹಾಕಲಾಗಿತ್ತು. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ.ಕ.ಜಿಲ್ಲಾ ಎಸ್‌ ಪಿ ಅವರ ನಿರ್ದೇಶನದಂತೆ ಬಂಟ್ವಾಳ ಉಪವಿಭಾಗ ಎಎಸ್ಪಿ ಸೈದುಲ್‌ ಅದಾವತ್‌ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬೆಳ್ತಂಗಡಿ ಸಿಐ ಸಂದೇಶ್‌ ಪಿ.ಜಿ., ಧರ್ಮಸ್ಥಳ ಪಿಎಸ್‌ಐ ಅವಿನಾಶ್‌, ಬೆಳ್ತಂಗಡಿ ಪಿಎಸ್‌ಐ ರವಿ ಬಿ.ಎಸ್‌. ಹಾಗೂ ಸಿಬಂದಿ ಕಾರ್ಯಾಚರಣೆ ನಡೆಸಿದ್ದರು.

ದಾರಿ ಬದಲಿಸಿದರೂ ಸಿಕ್ಕಿ ಬಿದ್ದರು!
ಎರಡು ದಿನಗಳ ಹಿಂದೆ ಸಾಸ್ತಾನದ ಟೋಲ್‌ಗೇಟ್‌ ಬಳಿ ಜಾನುವಾರು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಕೋಟ ಪೊಲೀಸರು ಪತ್ತೆ ಹಚ್ಚಿದ್ದರು. ಇದನ್ನು ಅರಿತು ಆರೋಪಿಗಳು ದಾರಿ ಬದಲಿಸಿ, ಚಿಕ್ಕಮಗಳೂರಿನಿಂದ ಬೆಳ್ತಂಗಡಿ ಮೂಲಕ ಕಾಸರಗೋಡಿಗೆ ಸಾಗುತ್ತಿದ್ದರು ಎಂದು ಬೆಳ್ತಂಗಡಿ ಸಿಐ ಸಂದೇಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

7

Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.