ಅಕ್ರಮ ಮರಳುಗಾರಿಕೆ: ಕಂದಾಯ ಅಧಿಕಾರಿಗಳಿಂದ ಪರಿಶೀಲನೆ
Team Udayavani, Feb 17, 2018, 11:03 AM IST
ಉಪ್ಪಿನಂಗಡಿ : ಬಜತ್ತೂರು ಗ್ರಾಮದ ಬೆದ್ರೋಡಿ ಮತ್ತು ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಉಪ್ಪಿನಂಗಡಿ ಕಂದಾಯ ಇಲಾಖೆ ಅಧಿಕಾರಿಗಳು, ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಕ್ರಮ ಮರಳುಗಾರಿಕೆ ಬಗ್ಗೆ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಉಪ್ಪಿನಂಗಡಿ ಕಂದಾಯ ನಿರೀಕ್ಷಕ ಪ್ರಸನ್ನ ಪಕ್ಕಳ ಮತ್ತು ಸಿಬಂದಿ ಮರಳು ಅಡ್ಡೆಯಲ್ಲಿ ಮರಳು ತೆಗೆದಿರುವ ಬಗ್ಗೆ ಖಾತ್ರಿಪಡಿಸಿಕೊಂಡು ಮಹಜರು ನಡೆಸಿದರು.
ಮೇಲಧಿಕಾರಿಗೆ ವರದಿ
ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗೆಗೆ ಕುರುಹುಗಳು ಕಂಡು ಬರುತ್ತಿವೆ. ಅದಾಗ್ಯೂ ನದಿ ಬದಿಯಲ್ಲಿ ರಸ್ತೆ ಮಾಡಿಕೊಂಡಿದ್ದಾರೆ. ಈಗಾಗಲೇ ಬಹಳಷ್ಟು ಪ್ರಮಾಣದಲ್ಲಿ ಮರಳು ಸಾಗಿಸಲಾಗಿದೆ. ಈ ಬಗ್ಗೆ ಮೇಲಧಿಕಾರಿಗೆ ಸಮಗ್ರ ವರದಿ ಸಲ್ಲಿಸುತ್ತೇನೆ ಮತ್ತು ಇಲ್ಲಿನ ಬಗ್ಗೆ ನಿಗಾ ಇಡಲಾಗುವುದು. ಹಠಾತ್ ದಾಳಿ ನಡೆಸಿ ಕಾರ್ಮಿಕರು ಮತ್ತು ವಾಹನಗಳನ್ನು ಪತ್ತೆ ಹಚ್ಚಲಾಗುವುದು ಎಂದು ಉಪ್ಪಿನಂಗಡಿ ಕಂದಾಯ ನಿರೀಕ್ಷಕ ಪ್ರಸನ್ನ ಪಕ್ಕಳ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.