ಅಕ್ರಮ ಮರ ಸಾಗಾಟ: ಸೊತ್ತು ಸಹಿತ ಆರೋಪಿಗಳ ಬಂಧನ
Team Udayavani, Jul 24, 2020, 8:45 PM IST
ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಕಲ್ಲಡ್ಕ ಎಂಬಲ್ಲಿ ಸರಕಾರಿ ಜಾಗದ ಅಕೇಶಿಯಾ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಸೊತ್ತುಗಳ ಸಹಿತ ಬಂಟ್ವಾಳ ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುತ್ತಾರೆ.
ಘಟನೆಯಲ್ಲಿ ಆರೋಪಿಗಳಾದ ಶೇಖರ ಸಪಲ್ಯ, ಗಣೇಶ್ ಪೂಜಾರಿ, ಮೋನಪ್ಪ ಹಾಗೂ ಐವನ್ ಅವರನ್ನು ಬಂಧಿಸಲಾಗಿದೆ. ಬಳಿಕ ಅವರಿಂದ ಮುಚ್ಚಳಿಕೆ ಬರೆಸಿ ಬಿಡುಗಡೆಗೊಳಿಸಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ಮೂರು ಲಕ್ಷ ರೂಪಾಯಿಗಳು ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಧಿಕಾರಿ ಪ್ರೀತಮ್, ಯಶೋಧರ, ಅರಣ್ಯ ರಕ್ಷಕರಾದ ಜಿತೇಶ್ ಪಿ, ರೇಖಾ, ದಯಾನಂದ, ವೀಕ್ಷಕ ಪ್ರವೀಣ್ ಹಾಗೂ ವಾಹನ ಚಾಲಕ ಜಯರಾಮ ಪಾಲ್ಗೊಂಡಿದ್ದರು.
ಈ ಪ್ರಕರಣ ತನಿಖೆಯನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.