ಅಮಲು ಪದಾರ್ಥಗಳ ದುಷ್ಪರಿಣಾಮ: ಮಾಹಿತಿ
Team Udayavani, Aug 3, 2017, 5:55 AM IST
ಬಂಟ್ವಾಳ: ಧ.ಗ್ರಾ. ಯೋಜನೆ ಬಂಟ್ವಾಳ, ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ,ರೋಟರಿ ಕ್ಲಬ್ ಬಂಟ್ವಾಳ, ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲಾ ಇಂಟರ್ಯಾಕ್ಟ್ ಕ್ಲಬ್ ಆಶ್ರಯದಲ್ಲಿ ಜು. 28ರಂದು ಅಮಲು ಪದಾರ್ಥಗಳ ದುಷ್ಪರಿಣಾಮ ಕುರಿತ ಮಾಹಿತಿ ಕಾರ್ಯಾಗಾರ ನಡೆಯಿತು.
ಜಿಲ್ಲಾ ಮಲೇರಿಯಾ ಪರಿವೀಕ್ಷಕ ಜಯರಾಮ ಪೂಜಾರಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ಕಾರ್ಯಕ್ರಮ ನೆರವೇರಿಸಿ ಸಾಕ್ಷ್ಯಚಿತ್ರ ಮೂಲಕ ಪ್ರದರ್ಶನ ನೀಡಿ ಇದರಿಂದ ಹೇಗೆ ದೂರ ವಿರಬೇಕು ಎಂದು ವಿವರಿಸಿದರು. ಒಟ್ಟು 220 ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು.
ಶಾಲಾ ಮುಖ್ಯ ಶಿಕ್ಷಕ ಪರಮೇಶ್ವರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ರೋಟರಿ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ಮುಖ್ಯ ಅತಿಥಿಯಾಗಿದ್ದು ಕಾರ್ಯದರ್ಶಿ ಕೆ. ನಾರಾಯಣ ಹೆಗ್ಡೆ, ವಲಯ ಮೇಲ್ವಿಚಾರಕ ಶಶಿಧರ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.