“ಪ್ರತಿ ಮನೆಯಲ್ಲಿ ಮಳೆಕೊಯ್ಲು ಅಳವಡಿಸಿ’
ಕಲ್ಲಡ್ಕ: ಮಳೆಕೊಯ್ಲು ಘಟಕ ಉದ್ಘಾಟನೆ
Team Udayavani, Jul 16, 2019, 5:37 AM IST
ಬಂಟ್ವಾಳ : ಜಿಲ್ಲೆಯಲ್ಲಿ ನೀರಿನ ಕೊರತೆ ಎದುರಾಗಿದ್ದು, ಭವಿಷ್ಯದಲ್ಲಿ ನೀರಿನ ಕೊರತೆ ಪರಿಹಾರವಾಗಿ ಈಗಿನಿಂದಲೇ ಪ್ರತಿ ಮನೆಯಲ್ಲಿ ಮಳೆಕೊಯ್ಲು ಅಳವಡಿಸಿಕೊಳ್ಳಬೇಕು ಎಂದು ಬಾಳ್ತಿಲ ಗ್ರಾ.ಪಂ. ಅಧ್ಯಕ್ಷ ವಿಟuಲ್ ನಾಯ್ಕ ಹೇಳಿದರು.
ಜು. 15ರಂದು ಕಲ್ಲಡ್ಕ ಶ್ರೀ ರಾಮ ಹಿ.ಪ್ರಾ. ಶಾಲೆಯಲ್ಲಿ ಜಲಸಂರಕ್ಷಣೆಯನ್ನು ಉತ್ತೇಜಿಸುವುದಕ್ಕಾಗಿ ನಿರ್ಮಿಸಿದ ಮಳೆಕೊಯ್ಲು ಘಟಕವನ್ನು ಅವರು ಉದ್ಘಾಟಿಸಿ, ಶ್ರೀರಾಮ ಶಾಲೆಯಲ್ಲಿ ಮಳೆಕೊಯ್ಲು ಆರಂಭಿಸಿದ್ದು ಬಾಳ್ತಿಲ ಗ್ರಾಮಕ್ಕೇ ಹೆಮ್ಮೆ ಎಂದರು.
ಮಳೆಕೊಯ್ಲು ವೈಯಕ್ತಿಕವಾಗಿ ಅಳವಡಿಸಿಕೊಳ್ಳಲು, ಖಾಸಗಿ ಬೋರ್‌ವೆಲ್‌ಗಳಿಗೆ ಜಲಮರುಪೂರಣ ಹಾಗೂ ಕೃಷಿ ಹೊಂಡದಂತಹ ಕಾರ್ಯಕ್ಕೆ ನರೇಗಾದಡಿಯಲ್ಲಿ ಸಿಗುವ ಅನುದಾನದ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ.ನಿಂದ ಸಿಗುವ ಎಲ್ಲÉ ಸಹಕಾರವನ್ನು ಒದಗಿಸುವುದಾಗಿ ತಿಳಿಸಿದರು.
ನಮ್ಮೆಲ್ಲ ವಿದ್ಯಾರ್ಥಿ ಸಮೂಹಕ್ಕೆ ಮಳೆಕೊಯ್ಲು ಯೋಜನೆ ಪ್ರೇರಣೆಯಾಗಿದೆ. ಈ ಸಂಗತಿಯನ್ನು ಮನೆಯಲ್ಲಿಯೂ ಕಡಿಮೆ ಖರ್ಚಿನಲ್ಲಿ ಅಳವಡಿಸುವ ಬಗ್ಗೆ ಹೆತ್ತವರೊದಿಗೆ ಚರ್ಚಿಸುತ್ತೇನೆ ಎಂದು ಶಾಲಾ ನಾಯಕ ದೀಕ್ಷಿತ್ ಅಭಿಪ್ರಾಯ ಹಂಚಿಕೊಂಡನು.
ತಾ.ಪಂ. ಸದಸ್ಯರಾದ ಲಕ್ಷ್ಮೀ ಗೋಪಾಲಾಚಾರ್, ಕುಲ್ಯಾರು ನಾರಾಯಣ ಶೆಟ್ಟಿ, ಮಾಣಿ ಗ್ರಾ.ಪಂ. ಅಧ್ಯಕ್ಷ ಮಮತಾ ಶೆಟ್ಟಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್, ಶಾಲೆಯ ಕುಡಿಯುವ ನೀರಿನ ಉಸ್ತುವಾರಿ ಸುಧನ್ವ ಶಾಸ್ತ್ರಿ ಹಾಗೂ ಶಾಲಾ ಮುಖ್ಯಶಿಕ್ಷಕ ರವಿರಾಜ್ ಕಣಂತೂರು ಉಪಸ್ಥಿತರಿದ್ದರು. ವೇದಾವತಿ ಸ್ವಾಗತಿಸಿ, ರೇಷ್ಮಾ ವಂದಿಸಿದರು. ಶಾಲಾ ಅಧ್ಯಾಪಕ ಸುಮಂತ್ ಆಳ್ವ ನಿರೂಪಿಸಿದರು.
ಸಾಕಷ್ಟು ನೀರಿನ ಸಂಗ್ರಹ
ಜು. 1ರಿಂದ ಆರಂಭಗೊಂಡ ಪ್ರಧಾನಿ ಮೋದಿಯವರ ಜಲಶಕ್ತಿ ಅಭಿಯಾನಕ್ಕೆ ಪೂರಕವಾಗಿ ಹನಿ ನೀರೂ ಪೋಲಾಗದಂತೆ ಶಾಲಾ ಕಟ್ಟಡದ ಮೇಲ್ಛಾವಣಿಗೆ ತಡೆಗೋಡೆ ನಿರ್ಮಿಸಿ 1,00,000 ಲೀ.ನಷ್ಟು ನೀರು ಸಂಗ್ರಹಿಸಲಾಗಿದೆ. ಇದನ್ನು ಇದ್ದಿಲು, ಮರಳು, ಜಲ್ಲಿ ಬಳಸಿ ಮಾಡಿದ ಸಾಂಪ್ರದಾಯಿಕ ಶುದ್ಧೀಕರಣ ಘಟಕದ ಮೂಲಕ ನೀರನ್ನು ಸಂಪ್‌ಗೆ ಹಾಯಿಸಲಾಗುತ್ತದೆ.
ಹೆಚ್ಚುವರಿ ನೀರು ಸಂಗ್ರಹಕ್ಕಾಗಿ 1,25,000 ಲೀ. ಸಾಮರ್ಥ್ಯದ ಪ್ರತ್ಯೇಕ ಸಂಪನ್ನು ಶಾಲಾ ಆವರಣದೊಳಗೆ ನಿರ್ಮಿಸಲಾಗಿದೆ. ಸಂಪು ಭರ್ತಿಯಾದ ಅನಂತರ 2 ಎಚ್.ಪಿ. ಪಂಪ್‌ನ ಮೂಲಕ ನೀರು ಶೇಖರಿಸಲು 5,000 ಲೀ.ನ ಪ್ರತ್ಯೇಕ ಟ್ಯಾಂಕ್ ವ್ಯವಸ್ಥೆ ಮಾಡಲಾಗಿದೆ. ಈ ಮಳೆಕೊಯ್ಲು ಘಟಕದ ಮೂಲಕ ಅಲ್ಪ ಮಳೆಯಾದರೂ ಸಾಕಷ್ಟು ನೀರಿನ ಸಂಗ್ರಹವಾಗುತ್ತದೆ. ಮಳೆಗಾಲ ಪೂರ್ತಿಯಾಗಿ ಅಂತರ್ಜಲ ಬಳಸದ ರೀತಿಯಲ್ಲಿ ಯೋಜಿಸಲಾಗಿದೆ.
ಮೊದಲ ಹಂತದ ಯೋಜನೆಗೆ ಪೋಷಕರಿಂದ ಮತ್ತು ಗ್ರಾಮಸ್ಥರಿಂದ ಮೆಚ್ಚುಗೆ ಪಡೆದು ಮುಂದಿನ ಹಂತದಲ್ಲಿ ವಿದ್ಯಾಕೇಂದ್ರದ ಎಲ್ಲ ವಿಭಾಗಕ್ಕೂ ಸಮರ್ಪಕವಾಗಿ ಬಳಸಿಕೊಳ್ಳುವ ಚಿಂತನೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.