![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Nov 29, 2017, 10:38 AM IST
ಹಂಪನಕಟ್ಟೆ: ಮಗು ಜನಿಸುವ ಮೊದಲೇ ಭ್ರೂಣ ಲಿಂಗ ಪತ್ತೆ ಮಾಡಿ ಹೆಣ್ಣು ಮಕ್ಕಳ ಜೀವನಕ್ಕೆ ತಡೆಯೊಡ್ಡದಂತೆ ಪ್ರತಿಯೊಬ್ಬರೂ ಜಾಗೃತರಾಗಬೇಕು. ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ತಡೆ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಂಬಂಧ ಪಟ್ಟವರು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಸಿಕಂದರ್ ಪಾಶಾ ಹೇಳಿದರು.
ಜಿಲ್ಲಾ ಸಕ್ಷಮ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ‘ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ-1996’ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಅವರು ಮಂಗಳವಾರ ಉದ್ಘಾಟಿಸಿದರು. 2011ರ ಜನಗಣತಿ ಪ್ರಕಾರ 1,000 ಗಂಡು ಮಕ್ಕಳಿಗೆ ಕೇವಲ 948 ಹೆಣ್ಣು ಮಕ್ಕಳಿದ್ದಾರೆ. ಗಂಡು ಮತ್ತು ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ 52ರಷ್ಟು ಏರುಪೇರಿದೆ. ಇದು ಹೀಗೆ ಮುಂದುವರಿದಲ್ಲಿ ಗಂಡಿಗೆ ಹೆಣ್ಣು ಸಿಗದೇ ಇರುವಲ್ಲಿವರೆಗೆ ಪರಿಸ್ಥಿತಿ ಮುಟ್ಟಬಹುದು ಎಂದರು.
ಪ್ರತಿಯೊಬ್ಬರೂ ಕಂಕಣಬದ್ಧರಾಗಿ
ಪ್ರಸವಪೂರ್ವ ಲಿಂಗ ಪತ್ತೆ ಮಾಡುವ ಪ್ರಕ್ರಿಯೆಯನ್ನು ತಡೆಗಟ್ಟುವ ಸಲುವಾಗಿಯೇ ಕಾಯ್ದೆ ರೂಪುಗೊಂಡಿದೆ. ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತಿಯೊಬ್ಬರೂ ಕಂಕಣಬದ್ಧರಾಗಬೇಕು ಎಂದು ಅವರು ಹೇಳಿದರು. ಡಾ| ಪೂರ್ಣಿಮಾ ಉಪಸ್ಥಿತರಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ| ನವೀನ್ ಕುಲಾಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಡಾ| ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ
Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್ ಗುಂಡೂರಾವ್
Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.