ಬಂಟ್ವಾಳ ತಾ| ಆಸ್ಪತ್ರೆಯಲ್ಲಿ ಅರ್ಧದಷ್ಟೂ ಸಿಬಂದಿ ಇಲ್ಲ
Team Udayavani, Jun 24, 2018, 10:18 AM IST
ಬಂಟ್ವಾಳ : ಹಲವು ವೈದ್ಯಕೀಯ ಸೌಲಭ್ಯಗಳೊಂದಿಗೆ ನೂರು ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲ್ಪಟ್ಟ ಬಂಟ್ವಾಳ ತಾ| ಸಾರ್ವಜನಿಕ ಆಸ್ಪತ್ರೆ ಸಿಬಂದಿ ಕೊರತೆ ಸಮಸ್ಯೆ ಎದುರಿಸುತ್ತಿದೆ. ಇಲ್ಲಿಗೆ 82 ಹುದ್ದೆಗಳು ಮಂಜೂರಾಗಿದ್ದರೂ ಈಗ ಇರುವುದು 38 ಸಿಬಂದಿ ಮಾತ್ರ. ನಿಗದಿತ ಸಂಖ್ಯೆಯ ಅರ್ಧಕ್ಕಿಂತಲೂ ಕಡಿಮೆ ಸಿಬಂದಿ ಇದ್ದಾರೆ. ಅಂದರೆ 44 ಹುದ್ದೆಗಳು ಖಾಲಿಯಾಗಿವೆ. ಕಳೆದ ಐದು ವರ್ಷಗಳಿಂದ ಇದೇ ಪರಿಸ್ಥಿತಿ ಮುಂದುವರಿದು ಬಂದಿದೆ.
ಸುಮಾರು 6.15 ಕೋಟಿ ರೂ. ವೆಚ್ಚದಲ್ಲಿ ಬಂಟ್ವಾಳದ ಸಮುದಾಯ ಆರೋಗ್ಯ ಕೇಂದ್ರವನ್ನು ನೂರು ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ ಕಟ್ಟಡ ಸಹಿತ ಇತರ ಸೌಲಭ್ಯಗಳನ್ನು ಒದಗಿಸಲಾಗಿತ್ತು. 2017ರಲ್ಲಿ ಮೇಲ್ದರ್ಜೆಗೇರಿದ ಆಸ್ಪತ್ರೆಯನ್ನು ಸಿಎಂ ಉದ್ಘಾಟಿಸಿದ್ದರು. ಆದರೆ ಸಾಕಷ್ಟು ಹುದ್ದೆಗಳನ್ನು ತುಂಬುವಲ್ಲಿ ಮಾತ್ರ ವಿಫಲವಾಗಿತ್ತು. ಇದ ರಿಂದ ಗುರಿ ಸಾಧಿಸುವಲ್ಲಿ ವಿಫಲವಾಗಿದೆ.
ರೋಗಿಗಳು
ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ಮೇ ತಿಂಗಳೊಂದರಲ್ಲಿ 749 ಮಂದಿ ಒಳರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. 10,494 ಮಂದಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಸಹಸ್ರಾರು ಸಂಖ್ಯೆಯ ರೋಗಿಗಳು ಇಲ್ಲಿನ ಆಸ್ಪತ್ರೆಯ ಸದುಪಯೋಗ ಪಡೆಯುತ್ತಿದ್ದಾರೆ. ಆದರೆ ಸಾಕಷ್ಟು ಸಂಖ್ಯೆಯಲ್ಲಿ ಸಿಬಂದಿ ನೇಮಿಸದ
ಕಾರಣ ಎಲ್ಲವೂ ಗುತ್ತಿಗೆ ಗ್ರೂಪ್ ಡಿ. ನೌಕರರ ಕೊರತೆ ನೀಗಿಸಲು 18 ಮಂದಿ ಹೊರಗುತ್ತಿಗೆ ಸಿಬಂದಿಯನ್ನು ನೇಮಿಸಲಾಗಿದೆ. ಇಬ್ಬರು ಚಾಲಕರು ಹೊರಗುತ್ತಿಗೆಯವರು, ವೈದ್ಯರನ್ನು ಹೊರಗುತ್ತಿಗೆಯಲ್ಲಿ ನೇಮಿಸಿದ್ದರೂ ಅವರು ಬರಲು ಒಪ್ಪದ ಕಾರಣ ಸ್ತ್ರೀರೋಗ ವೈದ್ಯರ ಹುದ್ದೆ ಖಾಲಿಯಾಗಿದೆ. ಇದರಿಂದ ಪ್ರಸವ ಉದ್ದೇಶಕ್ಕೆ ಬರುವ ಮಹಿಳೆಯರ ಸಂಖ್ಯೆ ಸಾಕಷ್ಟು ಕಡಿಮೆ ಆಗಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.
ಜನೌಷಧ ಕೇಂದ್ರ
ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜನೌಷಧ ಕೇಂದ್ರವನ್ನು ಒದಗಿಸಲಾಗಿದೆ. ಇದರಿಂದ ದೊಡ್ಡ ಸಂಖ್ಯೆಯ ರೋಗಿಗಳಿಗೆ ಪ್ರಯೋಜನ ಆಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಸಿಗದ ಔಷಧಗಳು ಇಲ್ಲಿ ಲಭ್ಯವಿವೆ. ಅನೇಕ ಸಂದರ್ಭಗಳಲ್ಲಿ ರೋಗ್ಯ ಇಲಾಖೆ ಇಲ್ಲಿಂದಲೇ ಔಷಧಗಳನ್ನು ಖರೀದಿಸುವ ಸಂದರ್ಭವೂ ಎದುರಾಗಿದೆ. ಅತ್ಯಂತ ಕಡಿಮೆ ದರದಲ್ಲಿ, ಅಂದರೆ ಶೇ. 80ರಷ್ಟು ಕಡಿಮೆ ದರದಲ್ಲಿ ಇಲ್ಲಿ ಔಷಧಗಳು ಲಭ್ಯವಾಗುತ್ತವೆ.
ಗಮನಕ್ಕೆ ತರಲಾಗಿದೆ
ಆರೋಗ್ಯ ಕೇಂದ್ರದಲ್ಲಿ ದೊಡ್ಡ ಸಂಖ್ಯೆಯ ಸಿಬಂದಿ ಕೊರತೆ ಇದ್ದರೂ ಅದನ್ನು ಹೊರಗುತ್ತಿಗೆ ಮತ್ತು ಎರವಲು ಸೇವೆಯ ಮೂಲಕ ತುಂಬುವ ಕೆಲಸ ಆಗಿದೆ. ರೋಗಿಗಳಿಗೆ ಸಮಸ್ಯೆಯಾಗದಂತೆ ಕ್ರಮ ಮಾಡಿದೆ. ಸಿಬಂದಿ ಕೊರತೆಯನ್ನು ತುಂಬುವಲ್ಲಿ ಸರಕಾರಕ್ಕೆ ಬರೆಯಲಾಗಿದೆ. ಮುಂದಿನ ದಿನಗಳಲ್ಲಿ ಸರಕಾರದಿಂದ ಸೂಕ್ತ ಕ್ರಮ ಆಗಬಹುದು.
– ಡಾ| ಸದಾಶಿವ
ಮುಖ್ಯ ವೈದ್ಯಾಧಿಕಾರಿ,
ಬಂಟ್ವಾಳ ತಾ| ಸಾರ್ವಜನಿಕ ಆಸ್ಪತ್ರೆ
ರಾಜಾ ಬಂಟ್ವಾಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.