ಕಡಬ ಪರಿಸರದಲ್ಲಿ ಮತ್ತೆ ಡೆಂಗ್ಯೂ ಜ್ವರ ಪೀಡಿತರು ಕಂಗಾಲು
Team Udayavani, May 31, 2017, 12:40 PM IST
ಕಡಬ: ಕಳೆದ ವರ್ಷ ಕಡಬ ಪರಿಸರದ ಜನರನ್ನು ಇನ್ನಿಲ್ಲದಂತೆ ಪೀಡಿಸಿದ್ದ ಡೆಂಗ್ಯೂ ಜ್ವರ ಈ ಬಾರಿ ಮತ್ತೆ ವಕ್ಕರಿಸಿದೆ. ಕಡಬದ ಸರಕಾರಿ ಆಸ್ಪತ್ರೆ ಹಾಗೂ ಖಾಸಗಿ ಚಿಕಿತ್ಸಾಲಯಗಳ ಮುಂದೆ ಶಂಕಿತ ಡೆಂಗ್ಯೂ ಜ್ವರ ಪೀಡಿತರು ಚಿಕಿತ್ಸೆಗಾಗಿ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ ಒಂದು ತಿಂಗಳಿನಿಂದ ಕಾಣಿಸಿಕೊಂಡಿರುವ ಜ್ವರದ ಬಾಧೆ ಕಡಬ ಸಮೀಪದ ಮರ್ದಾಳ ಪರಿಸರದಲ್ಲಿ ವ್ಯಾಪಕವಾಗಿದೆ. ಹೆಚ್ಚಿನವರು ಸ್ಥಳೀಯ ಚಿಕಿತ್ಸಾಲಯಗಳಲ್ಲಿ ಹಾಗೂ ಕಡಬದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ, ಜ್ವರ ಉಲ್ಬಣಿಸಿದ ಕೆಲವರನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಡಬಕ್ಕೆ ಹತ್ತಿರದಲ್ಲಿರುವ ಸುಳ್ಯ ತಾಲೂಕಿನ ಎಡಮಂಗಲ ಪ್ರದೇಶದಿಂದ ಕೂಡ ಜ್ವರಪೀಡಿತರು ಕಡಬಕ್ಕೆ ಚಿಕಿತ್ಸೆಗಾಗಿ ಬರುತ್ತಿದ್ದಾರೆ.
ಡೆಂಗ್ಯೂ ಪೀಡಿತೆ ಸಾವು?
ಮರ್ದಾಳದ ಕಂಪ ನಿವಾಸಿ ಜನಾರ್ದನ ಅವರ ಪತ್ನಿ ಪುಷ್ಪಲತಾ (37) ಅವರು ಜ್ವರದಿಂದ ತೀವ್ರ ಅಸ್ವಸ್ಥರಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ 4 ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಆಕೆ ಡೆಂಗ್ಯೂ ಜ್ವರ ಪೀಡಿತರಾಗಿದ್ದರು ಎನ್ನಲಾಗಿದೆ. ಆದರೆ ಅದನ್ನು ಆರೋಗ್ಯ ಇಲಾಖೆ ದೃಢಪಡಿಸಿಲ್ಲ. ಪುಷ್ಪಾವತಿ ಅವರ ಮನೆಯ ಎಲ್ಲಾ ಸದಸ್ಯರಿಗೂ ಜ್ವರ ಬಾಧಿಸಿದೆ. ಅವರ ಮನೆ ಇರುವ ಕಂಪ ಪರಿಸರದಲ್ಲಿ ಜ್ವರ ವ್ಯಾಪಕವಾಗಿ ಹರಡಿದೆ. ಖಾಸಗಿ ಪ್ರಯೋಗಾಲಯದ ವರದಿ ಪ್ರಕಾರ ಕಡಬ ಪರಿಸರದಲ್ಲಿ ಕಳೆದ 20 ದಿನಗಳ ಅವಧಿಯಲ್ಲಿ ಸುಮಾರು 45 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಆದರೆ ಆರೋಗ್ಯ ಇಲಾಖೆಯ ಜಿಲ್ಲಾ ಪ್ರಯೋಗಾಲಯದಲ್ಲಿ ಕಡಬ ಸರಕಾರಿ ಆಸ್ಪತ್ರೆಯಿಂದ ಕಳುಹಿಸಿಕೊಡಲಾದ ರಕ್ತದ ಮಾದರಿಗಳ ಪೈಕಿ 1 ಡೆಂಗ್ಯೂ ಪ್ರಕ ರಣವನ್ನು ದೃಢಪಡಿಸಲಾಗಿದೆ.
ಅಧಿಕಾರಿಗಳ ಭೇಟಿ
ಶಂಕಿತ ಡೆಂಗ್ಯೂ ಜ್ವರ ಪೀಡಿತ ಮರ್ದಾಳ ಪ್ರದೇಶಕ್ಕೆ ಆರೋಗ್ಯ ಇಲಾಖಾ ಉನ್ನತಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ಇಲಾಖಾ ಸಿಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಮರ್ದಾಳ (ಬಂಟ್ರ) ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ನಡೆಸಿ ಜಾಗೃತಿ ಮೂಡಿಸುತ್ತಿದ್ದಾರೆ. ಗ್ರಾ.ಪಂ. ನೆರವಿನಿಂದ ಫಾಗಿಂಗ್ ನಡೆಸಲಾಗುತ್ತಿದೆ ಎಂದು ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.