ಜಾತಿಗಿಂತ ನೀತಿ, ಸಾಧನೆ ಮೇಲ್ಪಂಕ್ತಿಯಾಗಲಿ:ಅಂಗಾರ
ಮಂಗಳೂರು ಜಿಲ್ಲೆಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟನೆ
Team Udayavani, Oct 21, 2021, 5:01 AM IST
ಮಂಗಳೂರು: ಜಾತಿಗಿಂತ ನೀತಿ, ಸಾಧನೆ ಮೇಲ್ಪಂಕ್ತಿಯಾದಾಗ ಉನ್ನತಸ್ಥಾನಮಾನ ದೊರೆಯುತ್ತದೆ. ಇದಕ್ಕೆ ಮಹರ್ಷಿ ವಾಲ್ಮೀಕಿಯವರೇ ಉದಾಹರಣೆಯಾಗಿದ್ದಾರೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದ್ದಾರೆ.
ಬುಧವಾರ ಜಿ.ಪಂ. ಸಭಾಂಗಣದಲ್ಲಿ ಜರಗಿದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ವಾಲ್ಮೀಕಿ ಮಹರ್ಷಿಯವರು ರಾಮಾಯಣ ಬರೆಯುವ ಮೂಲಕ ಮಹಾಕವಿಯಾದ ದಾರ್ಶನಿಕರು. ಅವರು ಜಾತಿಯಿಂದ ಗುರುತಿಸಲ್ಪಟ್ಟಿಲ್ಲ. ಬದಲಾಗಿ ನೀತಿಯಿಂದ, ಕಾವ್ಯ ಸಾಧನೆ ಯಿಂದ ಜಗತ್ತಿನಲ್ಲಿ ಗುರುತಿಸಲ್ಪಟ್ಟರು ಎಂದರು.
ಸಾಧನೆಯ ಛಲವಿರಲಿ
ಪ.ಜಾತಿ, ಪಂಗಡ ಸಹಿತ ಎಲ್ಲ ವರ್ಗದ ವಿದ್ಯಾರ್ಥಿಗಳು ಕೂಡ ಉತ್ತಮ ಅಂಕಗಳನ್ನು ಪಡೆಯಬೇಕು. ಇದಕ್ಕೆ ಸರಕಾರ ಪ್ರೋತ್ಸಾಹ ನೀಡುತ್ತಿದೆ. ಸಾಧನೆಯ ಛಲ ವಿದ್ಯಾರ್ಥಿಗಳಲ್ಲಿರಬೇಕು. ಪರಿಶಿಷ್ಟ ಜಾತಿ, ಪಂಗಡದವರ ಅಭಿವೃದ್ಧಿಗಾಗಿ ಸರಕಾರ ಪ್ರತ್ಯೇಕ ನಿಗಮವನ್ನು ರಚಿಸಿದೆ. ಸರಕಾರದ ಸೌಲಭ್ಯ ಎಲ್ಲ ವರ್ಗಗಳು ಅಭಿವೃದ್ಧಿಯಾಗಬೇಕು ಎಂದರು.
ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಸಚಿವರು ಸಮ್ಮಾನಿಸಿದರು. ವಿವಿಧ ಯೋಜನೆಗಳಡಿ ವಾಹನ ಪರವಾನಿಗೆ ಪತ್ರವನ್ನು ಜಿಲ್ಲಾಧಿಕಾರಿ ವಿತರಿಸಿದರು.
ಇದನ್ನೂ ಓದಿ:ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು
ಜಿ.ಪಂ. ಉಪಕಾರ್ಯದರ್ಶಿ ಆನಂದ ಕುಮಾರ್, ಸಮಗ್ರ ಗಿರಿಜನ ಯೋಜನೆಯ ಸಮನ್ವಯಾಧಿಕಾರಿ ಡಾ| ಹೇಮಲತಾ, ವಾಲ್ಮೀಕಿ ಸಮುದಾಯದಮುಖಂಡರು ಪಾಲ್ಗೊಂಡಿದ್ದರು.
ಜಿಲ್ಲಾಡಳಿತ, ಜಿ.ಪಂ., ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕಾರ್ಯ ಕ್ರಮ ಆಯೋಜಿಸಲಾಗಿತ್ತು.
ಗ್ರಂಥಗಳು ಧರ್ಮಕ್ಕೆ ಸೀಮಿತವಾಗದಿರಲಿ
ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ವ್ಯಕ್ತಿ ತನ್ನ ಯೋಚನೆಗಳನ್ನು ಬದಲಾಯಿಸಿ ಶ್ರದ್ಧೆಯಿಂದ ಕೆಲಸ ಮಾಡಿದರೆ ಮಹಾನ್ ಸಾಧಕನಾಗಿ ಇತಿಹಾಸದ ಪುಟಗಳಲ್ಲಿ ಸೇರಿಕೊಳ್ಳಬಹುದು ಎಂಬುದಕ್ಕೆ ಮಹರ್ಷಿ ವಾಲ್ಮೀಕಿಯವರ ಜೀವನಚರಿತ್ರೆ ಉದಾಹರಣೆ. ಮಹಾಭಾರತ, ರಾಮಾಯಣಗಳನ್ನು ಕೇವಲ ಧಾರ್ಮಿಕ ಗ್ರಂಥಗಳಾಗಿ ನೋಡಬಾರದು. ಅದು ಒಂದು ಸಮುದಾಯಕ್ಕೆ ಸೀಮಿತವಾಗಬಾರದು. ವಿದ್ಯಾರ್ಥಿಗಳು ಪೂರ್ವಗ್ರಹಕ್ಕೊಳಗಾಗದೆ ಗ್ರಂಥಗಳನ್ನು ಶ್ರದ್ಧೆಯಿಂದ ಓದಿ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.