‘ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ನಿರ್ಮಾಣ’
Team Udayavani, Feb 17, 2019, 5:23 AM IST
ಮಹಾನಗರ : ಮಂಗಳೂರು ನಗರದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಮಟ್ಟದ ನೂತನ ಈಜುಕೊಳ ನಿರ್ಮಾಣ ಮಾಡಲು ಚಿಂತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು. ಲೇಡಿಹಿಲ್‌ನಲ್ಲಿರುವ ಮಂಗಳಾ ಈಜುಕೊಳದ ಆಧುನಿಕ ನೀರು ಶುದ್ಧೀಕರಣ ಸ್ಥಾವರ ಹಾಗೂ ನವೀಕೃತ ಈಜುಕೊಳವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ನೂತನ ಈಜುಕೊಳ ನಿರ್ಮಾಣಕ್ಕೆ ಮಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ಥಳ ಗುರುತಿಸಲಾಗುವುದು. ಅಲ್ಲದೆ, ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯನ್ನು ಏರ್ಪಡಿಸಲಾಗುವುದು ಎಂದರು.
ಮಂಗಳಾ ಈಜುಕೊಳ ಈಗ ಹೈಟೆಕ್ ಆಗಿದ್ದು, ನೂತನ ತಂತ್ರಜ್ಞಾನ ವ್ಯವಸ್ಥೆಯನ್ನು ಹೊಂದಿದೆ. ವಿದ್ಯಾರ್ಥಿಗಳು ಅತ್ಯಾಧುನಿಕ ಸೌಲಭ್ಯಗಳನ್ನು ಪಡೆದು ಈಜು ಕಲಿತು, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು. ನಾನು ಕೂಡ ಈಜು ಪಟು. ನನ್ನ ಶಾಲಾ ದಿನಗಳಲ್ಲಿ ಮಂಗಳಾ ಈಜುಕೋಳದಲ್ಲಿ ಈಜು ಕಲಿತಿದ್ದೆ ಎಂದರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯ ದರ್ಶಿ ಐವನ್ ಡಿ’ಸೋಜಾ ಮಾತನಾಡಿ, ಮಂಗಳಾ ಈಜುಕೊಳವು ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡಿದೆ. ಮಂಗಳಾ ಈಜು ಕೊಳವು ರಾಜ್ಯದಲ್ಲಿಯೇ ಅತ್ಯಾಧುನಿಕ ಸೌಲಭ್ಯ ಹೊಂದಿರುವುದು ಹೆಮ್ಮೆಯ ಸಂಗತಿ ಎಂದು ವಿವರಿಸಿದರು.
ನೂತನ ತಂತ್ರಜ್ಞಾನ
ನೂತನ ತಂತ್ರಜ್ಞಾನದ ಮೂಲಕ ಮಂಗಳಾ ಈಜುಕೊಳದಲ್ಲಿ ನೀರನ್ನು ಓಝೋನ್ ಘಟಕದಲ್ಲಿ ಸಂಸ್ಕರಿಸುವ ನೂತನ ತಂತ್ರಜ್ಞಾನ ಪರಿಚಯಿಸಲಾಗಿದೆ. ಈ ನೂತನ ಘಟಕದಲ್ಲಿ ಸ್ವಯಂ ಚಾಲಿತ ನೀರು ಶುದ್ಧೀಕರಣವಾಗಲಿದೆ. ನಾಲ್ಕು ಪಂಪ್ ಮತ್ತು ನಾಲ್ಕು ಡ್ರಮ್ ಅಳವಡಿಸಿ ನೀರು ಶುದ್ಧೀಕರಣ ನಡೆಸಲಾಗುವುದು. ಶುದ್ಧೀಕರಣಗೊಂಡ ನೀರು ಪುನಃ ಬರಲು ಈಜುಕೊಳದ ಒಳಗೆ ಎರಡೂ ಬದಿಗಳಲ್ಲಿ ಪೈಪ್ ಅಳವಡಿಸಲಾಗಿದೆ. ನೂತನ ತಂತ್ರಜ್ಞಾನದಿಂದ ಶುದ್ಧೀಕರಣವಾದ ನೀರು ಪ್ರಬಲ ರೋಗ ನಿರೋಧಕ ಶಕ್ತಿ ಹೊಂದಿರಲಿದೆ.
ವೇದಿಕೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್, ಪಾಲಿಕೆ ಮೇಯರ್ ಭಾಸ್ಕರ್ ಕೆ., ಉಪ ಮಹಾಪೌರ ಕೆ. ಮಹಮ್ಮದ್, ಪಾಲಿಕೆ ಆಯುಕ್ತ ಮೊಹಮ್ಮದ್ ನಜೀರ್, ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯೀ ಸಮಿತಿ ಅಧ್ಯಕ್ಷ ಟಿ. ಪ್ರವೀಣ್‌ಚಂದ್ರ ಆಳ್ವ, ತೆರಿಗೆ ನಿರ್ವಹಣೆ ಹಣಕಾಸು ಮತ್ತು ಅಪೀಲು ಸ್ಥಾಯೀ ಸಮಿತಿ ಅಧ್ಯಕ್ಷ ರಾಧಕೃಷ್ಣ ಕೆ., ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ಸ್ಥಾಯೀ ಸಮಿತಿ ಅಧ್ಯಕ್ಷ ನವೀನ್ ಆರ್. ಡಿ’ಸೋಜಾ, ಲೆಕ್ಕಪತ್ರ ಸ್ಥಾಯೀ ಸಮಿತಿ ಅಧ್ಯಕ್ಷೆ ಲತಾ ಸಾಲ್ಯಾನ್, ಪಾಲಿಕೆ ಮುಖ್ಯ ಸಚೇತಕ ಎಂ. ಶಶಿಧರ ಹೆಗ್ಡೆ, ಪ್ರತಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯೆ ಜಯಂತಿ ಆಚಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.