‘ಸ್ವಯಂಚಾಲಿತ ರಿಮೋಟ್ ಸೆನ್ಸಾರ್‌ ಮೆಶಿನ್‌ ಅಳವಡಿಕೆಗೆ ಚಿಂತನೆ’


Team Udayavani, Jan 28, 2019, 5:52 AM IST

28-january-5.jpg

ಮಹಾನಗರ: ನಗರದಲ್ಲಿ ಕೆಲವು ಮಂದಿ ನೀರಿನ ಬಿಲ್‌ ಸಕಾಲಕ್ಕೆ ಪಾವತಿ ಮಾಡುತ್ತಿಲ್ಲ. ಈ ಉದ್ದೇಶದಿಂದ ನಾಲ್ಕು ಅಂತಸ್ತು ಮೇಲ್ಪಟ್ಟ ವಾಣಿಜ್ಯ ಮತ್ತು ವಸತಿ ಸಮುಚ್ಚಯಗಳಲ್ಲಿ ‘ಸ್ವಯಂಚಾಲಿತ ರಿಮೋಟ್ ಸೆನ್ಸಾರ್‌ ಮೆಶಿನ್‌’ ಅಳವಡಿಸಲು ಚಿಂತಿಸಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಅವರು ಹೇಳಿದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ, ಮಹಾನಗರ ಪಾಲಿಕೆ ಜಂಟಿ ಸಹಭಾಗಿತ್ವದಲ್ಲಿ ಉರ್ವ ಮಾರುಕಟ್ಟೆ ನೂತನ ವಾಣಿಜ್ಯ ಸಂಕೀರ್ಣವನ್ನು ರವಿವಾರ ಉದ್ಘಾಟಿಸಿ ಮಾತನಾಡಿದ ಅವರು, ನೀರಿನ ಬಿಲ್‌, ಮನೆ ತೆರಿಗೆಯನ್ನು ಬಡವರು ಸಕಾಲಕ್ಕೆ ಕಟ್ಟುತ್ತಿದ್ದು, ಶ್ರೀಮಂತರು ಇನ್ನೂ ಬಾಕಿ ಇರಿಸಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಸ್ವಯಂಚಾಲಿತ ರಿಮೋಟ್ ಸೆನ್ಸಾರ್‌ ಮೆಶಿನ್‌ ಅಳವಡಿಸುತ್ತೇವೆ. ಬಳಿಕ ನೀರಿನ ಬಿಲ್‌ ಪಾವತಿ ಮಾಡದಿದ್ದರೆ ಗೇಟ್ ವಾಲ್ವ್ ಬಂದ್‌ ಆಗಿ ನೀರು ಬರುವುದು ಸ್ಥಗಿತಗೊಳ್ಳುತ್ತದೆ ಎಂದು ತಿಳಿಸಿದರು.

ಜನಸಾಮಾನ್ಯರ ಸಹಕಾರ ಅಗತ್ಯ
ಸುಮಾರು 12.62 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಈ ವಾಣಿಜ್ಯ ಸಂಕೀರ್ಣ ಸುಸಜ್ಜಿತ ವಾಗಿದ್ದು, ಇದರಿಂದ ವ್ಯಾಪಾರಸ್ಥರಿಗೆ ಮತ್ತು ಗ್ರಾಹಕರಿಗೆ ಅನುಕೂಲವಾಗಲಿದೆ ಎಂದರು.

ಇಲ್ಲಿ ವ್ಯಾಪಾರಸ್ಥರು ಮತ್ತು ಖರೀದಿದಾರರು ಸ್ವಚ್ಛತೆಯ ಕಡೆಗೆ ಗಮನ ನೀಡಬೇಕಿದೆ. ಯಾವುದೇ ಒಂದು ಪ್ರದೇಶ ಅಭಿವೃದ್ಧಿಯಾಗುವ ನಿಟ್ಟಿನಲ್ಲಿ ಜನಸಾಮಾನ್ಯರು ಸಹಕರಿಸಬೇಕಿದೆ ಎಂದರು.

ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್‌ ಡಿ’ಸೋಜಾ ಮಾತನಾಡಿ, ಈ ಸಂಕೀರ್ಣದ ಟೆಂಡರ್‌ ಪ್ರಕಾರ 2 ವರ್ಷಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ ಕೇವಲ ಒಂದೂವರೆ ವರ್ಷದಲ್ಲಿಯೇ ಪೂರ್ಣಗೊಂಡಿದೆ. ಈ ಹಿಂದೆ ಬಿಜೈ ಮಾರುಕಟ್ಟೆ ಕಾಮಗಾರಿ ಕುಂಟುತ್ತಾ ಸಾಗಿ, ಸುಮಾರು 8 ವರ್ಷ ತಗಲಿತ್ತು ಎಂದರು.

ಮಾರುಕಟ್ಟೆಯಲ್ಲಿ ಜನಸಾಮಾನ್ಯರಿಗೆ ಎಲ್ಲ ರೀತಿಯ ಸವಲತ್ತುಗಳು ಸಿಗಬೇಕು. ನೂತನ ಮಾರುಕಟ್ಟೆಯಲ್ಲಿ ಮೀನು ಮಾರಾಟಗಾರರಿಗೆ ಸಮರ್ಪಕವಾಗ ಸ್ಥಳಾವಕಾಶ ವಿಲ್ಲ ಎಂಬ ಕೂಗು ಈ ಹಿಂದೆ ಕೇಳಿಬಂದಿತ್ತು. ಆದರೆ ಸಂಬಂಧಪಟ್ಟ ಇಲಾಖೆಯ ಜತೆ ಮಾತನಾಡಿ ಸಮಸ್ಯೆ ಬಗೆಹರಿದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು.

ಸಮ್ಮಾನ
ಕಟ್ಟಡದ ವಾಸ್ತುಶಿಲ್ಪಿ ನೆಲ್ಸನ್‌ ಜಿ. ಪಯಾಸ್‌ ಮತ್ತು ಅಬ್ದುಲ್‌ ಆಸಿಫ್‌ ಅವರನ್ನು ಕಾರ್ಯಕ್ರಮದಲ್ಲಿ ಸಮ್ಮಾನಿ ಸಲಾಯಿತು. ಗ್ರೀನ್‌ ಟ್ರೀ ಫೌಂಡೇಶನ್‌ನ ಗಣೇಶ್‌ ಅವರನ್ನು ಗೌರವಿಸಲಾಯಿತು.

ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿ
ಮೇಯರ್‌ ಭಾಸ್ಕರ್‌ ಕೆ. ಮಾತನಾಡಿ, ನಗರ ವೇಗವಾಗಿ ಬೆಳೆಯುತ್ತಿದ್ದು, ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಮಂಗಳೂರು ಈಜುಕೊಳ ಕಾಮಗಾರಿ ನಡೆಯುತ್ತಿದ್ದು, ಸುಮಾರು 70 ಕೋ. ರೂ. ವೆಚ್ಚದಲ್ಲಿ 2ನೇ ಹಂತದ ಎಬಿಡಿ ಯೋಜನೆ ಕಾರ್ಯ ಪ್ರಗತಿ ಯಲ್ಲಿದೆ. 55 ಕೋಟಿ ರೂ.ನಲ್ಲಿ ಅಮೃತ್‌ ಯೋಜನೆ, 145 ಕೋಟಿ ರೂ.ನಲ್ಲಿ ಕೇಂದ್ರ ಮಾರುಕಟ್ಟೆ ಅಭಿವೃದ್ಧಿ, 94 ಕೋಟಿ ರೂ.ನಲ್ಲಿ ಮಲ್ಟಿ ಕಾರು ಪಾರ್ಕಿಂಗ್‌ ಕಾಮಗಾರಿ ನಡೆಯುತ್ತಿದೆ ಎಂದರು. ಈ ವೇಳೆ ಗ್ರೀನ್‌ ಟ್ರೀ ಫೌಂಡೇಶನ್‌ ವತಿಯಿಂದ ಗಣ್ಯರು ಗಿಡ ನೆಟ್ಟರು.

ಶಾಸಕ ಡಿ. ವೇದವ್ಯಾಸ ಕಾಮತ್‌, ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌, ಮಂಗಳೂರು ನಗರಾಭಿವೃದ್ಧಿ ಆಯುಕ್ತ ಶ್ರೀಕಾಂತ್‌ ರಾವ್‌ ಕೆ., ಪಾಲಿಕೆ ಆಯುಕ್ತ ಮೊಹಮ್ಮದ್‌ ನಝೀರ್‌, ಪಾಲಿಕೆ ಮುಖ್ಯಸಚೇತಕ ಶಶಿಧರ ಹೆಗ್ಡೆ, ಪಾಲಿಕೆ ಸದಸ್ಯ ರಾಧಾಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

ಫ್ಲೆಕ್ಸ್‌ ಅಳವಡಿಕೆಗೆ ವಿರೋಧ
ಉರ್ವ ನೂತನ ವಾಣಿಜ್ಯ ಸಂಕೀರ್ಣದ ಉದ್ಘಾಟನೆಯ ಅಂಗವಾಗಿ ನಗರದ ಲೇಡಿಹಿಲ್‌ನಿಂದ ಸಮಾರಂಭ ನಡೆಯುವ ಜಾಗದವರೆಗೆ ರಸ್ತೆಯ ಡಿವೈಡರ್‌ಗಳಲ್ಲಿ ರಾಜಕಾರಣಿಗಳ ಫ್ಲೆಕ್ಸ್‌ ಅಳವಡಿಸಲಾಗಿತ್ತು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.