ಕೊಣಾಜೆ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನ
Team Udayavani, Oct 19, 2021, 1:47 PM IST
ಉಳ್ಳಾಲ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಸಮೀಪ ನಿನ್ನೆ ತಡರಾತ್ರಿ ನಡೆದಿದೆ.
ಬಿಜೆಪಿ ಕಾರ್ಯಕರ್ತ , ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದೆ. ಬೈಕಲ್ಲಿ ಬಂದ ಮೂವರು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.
ಸ್ನೇಹಿತ ಮಂಜುನಾಥ್ ಜೊತಗೆ ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಪವಾಡಸದೃಶವಾಗಿ ತಲವಾರು ದಾಳಿ ಕೈಗೆ ಮಾತ್ರ ಬಿದ್ದಿದೆ. ಗಾಯಾಳು ಪ್ರಕಾಶ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ವಾರ ಕೊಣಾಜೆ ಜಂಕ್ಷನ್ ನ ಕೊಣಾಜೆ ಸ್ಟೋರ್ಸ್ & ಸ್ವೀಟ್ಸ್ ಮಳಿಗೆಯ ಮಾಲಕನ ಪುತ್ರ ಉಸ್ಮಾನ್ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ವಿಚಾರದಲ್ಲಿ ಸ್ಥಳೀಯರು ಹಲ್ಲೆನಡೆಸಿ ಪೊಲೀಸರಿಗೆ ಒಪ್ಪಿಸಿದ್ದರು. ಈ ಪ್ರಕರಣದಲ್ಲಿ ಪ್ರಕಾಶ್ ಭಾಗವಹಿಸಸದಿದ್ದರು ಇವರ ಹೆಸರನ್ನು ಪ್ರಸ್ತಾಪುಸಲಾಗಿತ್ತು.ಇದಕ್ಕೆ ಪ್ರತೀಕಾರವಾಗಿ ದಾಳಿ ನಡೆದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಘಟನೆ ರಾತ್ರಿ ನಡೆದಿದ್ದರೂ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಘಟನೆ ವಿಚಾರ ಸಂಘಟನೆಗಳಿಗೆ ತಿಳಿಯುತ್ತಿದ್ದಂತೆ ಪ್ರಕಾಶ್ ಅವರ ಯೋಗ ಕ್ಷೇಮ ವಿಚಾರಿಸಲು ಮಧ್ಯಾಹ್ನ ಅವರ ಜಿನಸು ಅಂಗಡಿಗೆ ಕಾರ್ಯಕರ್ತರು ಆಗಮಿಸುತ್ತಿದ್ದಂತೆ ಕೊಣಾಜೆ ಪೊಲೀಸರು ಆಗಮಿಸಿ ಸ್ಥಳೀಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿ ತನಿಖೆಯನ್ನು ತೀವ್ರ ಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.