ಅಪೂರ್ಣ ರಸ್ತೆ, ಚರಂಡಿ: ಸಾರ್ವಜನಿಕರಿಗೆ ಸಮಸ್ಯೆ

Team Udayavani, Apr 23, 2018, 12:43 PM IST

23-April-10.jpg

ಉಪ್ಪಿನಂಗಡಿ: ಉಪ್ಪಿನಂಗಡಿ- ಮರ್ದಾಳ ರಾಜ್ಯ ಹೆದ್ದಾರಿಯ ವಿಸ್ತರಣೆ ಕಾಮಗಾರಿ ನಡೆಸುವ ಅವಧಿ ಮುಗಿದರೂ ಹಳೆಗೇಟಿನಿಂದ ಕೊಯಿಲ ತನಕದ ಕಾಮಗಾರಿ ಇನ್ನೂ ಅಪೂರ್ಣವಾಗಿಯೇ ಇದೆ. ಇದೀಗ ಹಳೆಗೇಟಿನ ಬಳಿ ಚರಂಡಿ ಕಾಮಗಾರಿಯನ್ನು ಅರೆ ಬರೆ ಮಾಡಿದ್ದು, ಅಪಾಯಕ್ಕೆ ಎಡೆ ಮಾಡಿಕೊಟ್ಟಿದೆ.

ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹಳೆಗೇಟು (ಸುಬ್ರಹ್ಮಣ್ಯ ಕ್ರಾಸ್‌) ನಿಂದ ಕೊಯಿಲ ವರೆಗೆ ರಸ್ತೆ ಕಾಮಗಾರಿಗೆ 7.25 ಕೋಟಿ ರೂ. ಅನುದಾನ ಬಿಡುಗಡೆಗೊಂಡಿತ್ತು. 2016ರ ಆಗಸ್ಟ್‌ ನಲ್ಲಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದ್ದರು. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾದರೂ 6 ಕಿ.ಮೀ. ಉದ್ದದ ಈ ಕಾಮಗಾರಿ ಯನ್ನು ಪೂರ್ಣಗೊಳಿಸಲು ಗುತ್ತಿಗೆದಾರ ನಿಗೆ ಸಾಧ್ಯವಾಗಲೇ ಇಲ್ಲ. ಇದೀಗ ಹಳೆಗೇಟುವಿನ ಕಂಚಿಬೆಟ್ಟು ಎಂಬಲ್ಲಿ ರಸ್ತೆ ಬದಿ ಆಳವಾದ ಚರಂಡಿ ಮಾಡಲಾಗಿದ್ದು, ಅದನ್ನು ಅರ್ಧದಲ್ಲಿಯೇ ಬಿಟ್ಟು ಗುತ್ತಿಗೆದಾರರು ನಾಪತ್ತೆಯಾಗಿದ್ದಾರೆ. ಕೆಲವು ಕಡೆ ಚರಂಡಿಗೆ ಕಾಂಕ್ರೀಟ್‌ ಹಾಕಲಾಗಿದ್ದು, ಇನ್ನು ಕೆಲವೆಡೆ ಸರಳುಗಳನ್ನು ಮಾತ್ರ ನಿಲ್ಲಿಸಲಾಗಿದೆ. ಇದು ಅಪಾಯಕ್ಕೆ ಎಡೆ ಮಾಡಿಕೊಟ್ಟಿದೆ.

ನೀರು ಹರಿಯಲು ವ್ಯವಸ್ಥೆಯಿಲ್ಲ
ಚರಂಡಿ ಅಪೂರ್ಣವಾಗಿದ್ದರಿಂದ ನೀರು ಹೋಗಲು ಸರಿಯಾದ ವ್ಯವಸ್ಥೆಯಿಲ್ಲ. 6 ಅಡಿ ಆಳ ಹಾಗೂ 400 ಮೀ. ಉದ್ದದ ಈ ಚರಂಡಿಯನ್ನು ಅಪೂರ್ಣವಾಗಿ ಬಿಟ್ಟಿದ್ದರಿಂದ ಇತ್ತೀಚೆಗೆ ಬಿದ್ದ ಒಂದೆರಡು ಮಳೆಗೆ ಚರಂಡಿಯಲ್ಲಿ ನೀರು ಶೇಖರಣೆಗೊಂಡಿತ್ತು. ಇದು ಜನವಸತಿ ಪ್ರದೇಶವಾಗಿದ್ದು, ಮಕ್ಕಳಿಗೂ ಅಪಾಯಕಾರಿಯಾಗಿದೆ. ಈಗಾಗಲೇ ಕೆಲವು ಮಕ್ಕಳು ಆಟವಾಡುತ್ತ ಚರಂಡಿಯಲ್ಲಿ ಬಿದ್ದು ತರಚು ಗಾಯ ಮಾಡಿಕೊಂಡಿದ್ದೂ ಇದೆ.

ರಸ್ತೆಯೂ ಅಪೂರ್ಣ
ಗುತ್ತಿಗೆದಾರ ಸಂಸ್ಥೆ ಎಂದೋ ಒಮ್ಮೆ ಬಂದು 4-5 ದಿನ ಗಳ ಕೆಲಸ ಮಾಡಿಸುತ್ತಿದೆ. ಹೀಗಾಗಿ, ಚರಂಡಿ ಮಾತ್ರ ಅಲ್ಲ, ರಸ್ತೆಯೂ ಅಪೂರ್ಣವಾಗಿದೆ. ಸುಮಾರು 2 ಕಿ.ಮೀ. ರಸ್ತೆಯನ್ನು ಇನ್ನೂ ನಿರ್ಮಿಸಿಲ್ಲ. ಮೊದಲು ನಿರ್ಮಿಸಿದ ರಸ್ತೆ ಕೆಲವೆಡೆ ಎದ್ದು ಹೋಗಿದೆ. ಆದರೂ ಇದನ್ನು ಪೂರ್ಣಗೊಳಿಸುವಲ್ಲಿ ಸಂಸ್ಥೆ ಮುಂದಾಗುತ್ತಿಲ್ಲ.

ಅಪೂರ್ಣ ಸ್ಥಿತಿಯಲ್ಲಿರುವ ಚರಂಡಿ ಯಲ್ಲಿ ಕಬ್ಬಿಣದ ಸರಳು ಗಳನ್ನು ನಿಲ್ಲಿಸಲಾ ಗಿದ್ದು, ಅವು ಬಾಣದಂತೆ ಬಲಿಗೆ ಕಾಯುತ್ತಿವೆ. ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಅಧಿಕಾರಿಗಳೂ ಈ ಬಗ್ಗೆ ಸ್ಪಂದಿಸುವ ಗೋಜಿಗೆ ಹೋಗುತ್ತಿಲ್ಲ ಎಂದು ಸಾರ್ವಜನಿಕರು ಅಲವತ್ತುಕೊಂಡಿದ್ದಾರೆ.

ಸಮಸ್ಯೆ ಗಮನಕ್ಕೆ ಬಂದಿದೆ
ಇಕ್ಬಾಲ್‌ ಅಹ್ಮದ್‌ ಇನ್‌ಫ್ರಾ ಪ್ರಾಜೆಕ್ಟ್ ಸಂಸ್ಥೆಯ ಶರೀಫ್ ಕನ್‌ಸ್ಟ್ರಕ್ಷನ್‌ ಅವರು ಈ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದ್ದು, ಕಳೆದ ವರ್ಷವೇ ಇದರ ಗುತ್ತಿಗೆ ಅವಧಿ ಮುಗಿದಿದೆ. ಗುತ್ತಿಗೆದಾರ ಸಂಸ್ಥೆಗೆ ಹಲವು ನೋಟಿಸ್‌ ಗಳನ್ನು ನೀಡಲಾಗಿದೆ. ಆದರೂ ಸರಿಯಾಗಿ ಸ್ಪಂದಿಸದ ಕಾರಣ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ. ಕಾಮಗಾರಿ ಮುಗಿಸುವುದಾಗಿ ಭರವಸೆ ನೀಡಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಅದರಂತೆ ಹೆಚ್ಚು ವರಿ ಅವಧಿ ನೀಡಲಾಗಿದ್ದು, ಮೇ ವರೆಗೆ ಅವಕಾಶವಿದೆ. ಇಲ್ಲಿ ಚರಂಡಿಯನ್ನು ಅಪೂರ್ಣವಾಗಿ ನಿರ್ಮಿಸಿದ್ದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಗುತ್ತಿಗೆದಾರರಿಗೆ ಇದನ್ನು ಶೀಘ್ರ ಮುಗಿಸಲು ಸೂಚಿಸಲಾಗಿದೆ.
ಗೋಕುಲದಾಸ್‌
ಎಕ್ಸಿಕ್ಯೂಟಿವ್‌ ಎಂಜಿನಿಯರ್‌, ಪಿಡಬ್ಲ್ಯೂಡಿ

ಮನವಿಗೆ ಸ್ಪಂದಿಸಿಲ್ಲ
ಇಲ್ಲಿನ ಸಮಸ್ಯೆ ಬಗ್ಗೆ ಗುತ್ತಿಗೆದಾರರಿಗೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೂ ಯಾವುದೇ ಸ್ಪಂದನೆ ದೊರಕಿಲ್ಲ. ಎಂದೋ ಮುಗಿಯಬೇಕಾಗಿದ್ದ ಕಾಮಗಾರಿ ಇನ್ನೂ ಮುಗಿಯದ್ದರಿಂದ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದು, ಇದನ್ನು ಕೇಳುವವರೇ ಇಲ್ಲದಂತಾಗಿದೆ.
– ಇಕ್ಬಾಲ್‌, 
ಸ್ಥಳೀಯ ನಿವಾಸಿ

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.