Independence Day; ಪ್ಲಾಸ್ಟಿಕ್ ಬಾವುಟ ಮಾರಾಟ, ಉತ್ಪಾದನೆ ನಿಷೇಧ: ಆಯುಕ್ತ
Team Udayavani, Aug 14, 2024, 11:44 AM IST
ಮಂಗಳೂರು: ರಾಜ್ಯಾದಾದ್ಯಂತ ಪ್ಲಾಸ್ಟಿಕ್ ಬಾವುಟಗಳ ಉತ್ಪಾದನೆ, ಮಾರಾಟವನ್ನು ನಿಷೇಧಿಸಿರುವುದರಿಂದ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಕೆ ಮಾಡಬಾರದು. ರಾಷ್ಟ್ರಧ್ವಜದ ಪ್ರಾಮುಖ್ಯತೆಯನ್ನು ಅರಿತು ಗೌರವಪೂರ್ವಕವಾಗಿ ಧ್ವಜಾರೋಹಣ ಮಾಡಿ ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಗೊಳಿಸಬೇಕು ಎಂದು ಮಂಗಳೂರು ಪಾಲಿಕೆ ಆಯುಕ್ತ ಆಯುಕ್ತ ಆನಂದ್ ಸಿ.ಎಲ್. ತಿಳಿಸಿದ್ದಾರೆ.
ಖಾದಿ ಬಟ್ಟೆಯಿಂದ ಉತ್ಪಾದನೆಯಾಗುವ ರಾಷ್ಟ್ರ ಧ್ವಜದ ಬಳಕೆ ಮಾಡುವ ಬಗ್ಗೆ ವಿಶೇಷ ಒತ್ತು ನೀಡಲು ಹಾಗೂ ಭಾರತೀಯ ಧ್ವಜ ಸಂಹಿತೆಯಲ್ಲಿ ಯಾವುದೇ ಉಲ್ಲಂಘನೆ ಕಂಡು ಬಂದಲ್ಲಿ ಶಿಕ್ಷಾರ್ಹ ಅಪರಾಧ ಎಂದರು.
ಆ.15 ರಂದು ದೇಶಾದ್ಯಂತ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಉದ್ಯಮ ಸಂಘ ಸಂಸ್ಥೆಗಳು/ನಾಗರೀಕ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ವಿವಿಧ ಸ್ಥಳಗಳಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ದೇಶಭಕ್ತಿಯನ್ನು ಅಭಿವ್ಯಕ್ತಗೊಳಿಸುವುದು ಸಂಪ್ರದಾಯವಾಗಿದೆ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯದ ಸಂಭ್ರಮವನ್ನು ಭಾರತೀಯ ಧ್ವಜ ಸಂಹಿತೆಯ ಪ್ರಕಾರ ಬಟ್ಟೆಯಿಂದ ಮಾಡಿದ ರಾಷ್ಟ್ರ ಧ್ವಜಗಳನ್ನು ಮಾತ್ರ ಕಡ್ಡಾಯವಾಗಿ ಬಳಸಬೇಕು. ರಾಷ್ಟ್ರ ಧ್ವಜಕ್ಕೆ ಅಪಮಾನ ಹಾಗೂ ಅಗೌರವ ತೋರದೆ ಧ್ವಜಾರೋಹಣವನ್ನು ಕೈಗೊಳ್ಳುವುದು. ಸೂರ್ಯೋದಯದ ಬಳಿಕ ಧ್ವಜಾರೋಹಣದ ಬಳಿಕ ಸಂಜೆ ಸೂರ್ಯಾಸ್ತವಾದ ಸಂದರ್ಭ ಧ್ವಜವನ್ನು ಧ್ವಜಸ್ಥಂಭದಿಂದ ಇಳಿಸಬೇಕು. ಯಾವುದೇ ಕಾರಣಕ್ಕೂ ರಾತ್ರಿ ಹೊತ್ತು ದ್ವಜಸ್ಥಂಭದಲ್ಲಿ ರಾಷ್ಟ್ರ ಧ್ವಜ ಹಾರಾಡಬಾರದು ಎಂದು ಪ್ರಕಟನೆಯ ಮೂಲಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.