ಸಹಬಾಳ್ವೆಗೆ ಭಾರತ ಉತ್ತಮ ತಾಣ: ಖಾದರ್
Team Udayavani, May 10, 2017, 11:33 AM IST
ಉಳ್ಳಾಲ: ಭಾರತ ಸಹಬಾಳ್ವೆಗೆ ಉತ್ತಮ ತಾಣವಾಗಿದೆ. ದೇಶ ಮಾನವೀಯತೆ ಮತ್ತು ಸಂಸ್ಕೃತಿ ಆಧಾರದಲ್ಲಿ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟರು. ಅವರು ಹೊಸದಿಲ್ಲಿಯ ರಾಷ್ಟ್ರೀಯ ಯುವ ಯೋಜನೆ, ಯೇನಪೊಯ ವಿ.ವಿ.ಯ ರಾಷ್ಟ್ರೀಯ ಸೇವಾ ಯೋಜನೆ, ರಾಜ್ಯ ಸರಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಆಶ್ರಯದಲ್ಲಿ ದೇರಳಕಟ್ಟೆ ಯೇನಪೊಯ ವಿಶ್ವವಿದ್ಯಾ ನಿಲಯದಲ್ಲಿ ಸೋಮವಾರ ನಡೆದ ಯುವಜನತೆಗಾಗಿ ರಾಷ್ಟ್ರೀಯ ಏಕೀಕರಣ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.
ಮುಖ್ಯ ಅತಿಥಿಯಾಗಿದ್ದ ನಿಟ್ಟೆ ವಿ.ವಿ. ಕುಲಾಪತಿ ಎನ್. ವಿನಯ ಹೆಗ್ಡೆ ಮಾತನಾಡಿ, ನೈಜ ರಾಷ್ಟ್ರೀಯ ಏಕತೆ ಹೃದಯದಿಂದ ಬರಬೇಕು. ಭಾರತೀಯ ಪ್ರಜೆಗಳಾಗಿ ನಾವು ಪ್ರತಿಯೊಬ್ಬರೂ ಬಲಶಾಲಿಯಾದ ದೇಶ ನಿರ್ಮಿಸುವ ಜವಾಬ್ದಾರಿ ಹೊಂದಿದ್ದೇವೆ ಎಂದರು. ರಾಷ್ಟ್ರೀಯ ಯುವಜನ ಯೋಜನೆ ನಿರ್ದೇಶಕ ಡಾ| ಎಸ್.ಎನ್. ಸುಬ್ಬರಾವ್ ಮಾಹಿತಿ ನೀಡಿದರು. ಯೇನಪೊಯ ವಿ.ವಿ. ಉಪಕುಲಪತಿ ಡಾ| ಎಂ. ವಿಜಯ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ಮಿಲಾಗ್ರಿಸ್ ಚರ್ಚ್ ನ ಧರ್ಮಗುರು ಫಾ| ವೆಲೇರಿಯನ್ ಡಿ’ಸೋಜಾ ಮತ್ತು ಎಂಫಾರ್ ಕನ್‌ಸ್ಟ್ರಕ್ಷನ್ ಪ್ರೈ. ಲಿ.ನ ಡಿಜಿಎಂ ಅನಿಲ್ ಭಂಡಾರಿ ಉಪಸ್ಥಿತರಿದ್ದರು. ಯೇನಪೊಯ ವಿ.ವಿ. ಕುಲಸಚಿವ ಡಾ| ಶ್ರೀಕುಮಾರ್ ಮೆನನ್ ಸ್ವಾಗತಿಸಿದರು. ಶಿಬಿರದ ಸಂಘಟನ ಕಾರ್ಯದರ್ಶಿ ಅನಿಲ್ ಹೆಬ್ಟಾರ್ ವರದಿ ಮಂಡಿಸಿದರು. ಶಿಬಿರದ ಸಂಘಟನ ಕಾರ್ಯದರ್ಶಿ ಯೇನಪೊಯ ವಿ.ವಿ.ಯ ಎನ್‌ಎಸ್‌ಎಸ್ ಸಂಯೋಜಕಿ ಡಾ| ಅಶ್ವಿನಿ ಎಸ್. ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.