ಇಂದಿರಾ ಕ್ಯಾಂಟೀನ್ ಗುಣಮಟ್ಟದಲ್ಲಿ ರಾಜಿ ಇಲ್ಲ : ಖಾದರ್
Team Udayavani, Mar 16, 2018, 3:17 PM IST
ಮಂಗಳೂರು : ಇಂದಿರಾ ಕ್ಯಾಂಟೀನ್ ಬಡವರಿ ಗಾಗಿ ನಿರ್ಮಿಸಿರುವ ಕ್ಯಾಂಟೀನ್. ಹೀಗಾಗಿ ಊಟ, ತಿಂಡಿಯ ಗುಣಮಟ್ಟ, ಪ್ರಮಾಣ ಮತ್ತು ಶುಚಿತ್ವದ ವಿಷಯದಲ್ಲಿ ರಾಜಿ ಬೇಡ. ಎಲೆಕ್ಟ್ರಿಕಲ್ ಮಾಪನ ಯಂತ್ರ ವನ್ನು ಕೌಂಟರಿನಲ್ಲಿ ಅಳವಡಿಸುವುದರಿಂದ ಆಹಾರದ ಪ್ರಮಾಣ ದಲ್ಲಿ ಗ್ರಾಹಕರಿಗೆ ಅನುಮಾನವಿದ್ದಲ್ಲಿ ಪರಿಹರಿಸಿ ಕೊಳ್ಳಲು ಅನುಕೂಲವಾಗುತ್ತದೆ ಎಂದು ಸಚಿವ ಯು.ಟಿ. ಖಾದರ್ ಹೇಳಿದರು.
ಗುರುವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್‌ಗಳ ಪ್ರಗತಿ ಪರಿಶೀಲನ ಸಭೆ ನಡೆಸಿ ಅವರು ಮಾತನಾಡಿದರು. ಆಹಾರದ ರುಚಿಯಲ್ಲಿ ವ್ಯತ್ಯಾಸವಾಗ ಬಾರದು, ಸರಿಯಾದ ರೂಪದಲ್ಲಿ ಗುಣಮಟ್ಟದಲ್ಲಿ ಆಹಾರ ವನ್ನು ಒದಗಿಸಬೇಕು. ಇಂದಿರಾ ಕ್ಯಾಂಟೀನ್‌ನ ಫಲಾನುಭವಿ ಗಳಲ್ಲಿ ಹೆಚ್ಚಿನವರು ಕಾರ್ಮಿಕ ವರ್ಗದ ಜನರು. ಬೆಳಗ್ಗೆ ಉಪಾಹಾರ ಮಾಡಿದ ಅನಂತರ ಮಧ್ಯಾಹ್ನದವರೆಗೆ ಹೊಟ್ಟೆ ತುಂಬಿದಂತಿರಬೇಕು ಎಂದರು.
ಅಂಗವಿಕಲರ ಅನುಕೂಲಕ್ಕಾಗಿ ಕೂಪನ್ ಮೀಸಲಿಟ್ಟು ಅಂಗವಿಕಲರಿಗೆ, ಮಹಿಳೆಯರಿಗೆ ಮತ್ತು ಹಿರಿಯ ನಾಗರಿಕರಿಗೆ ಆದ್ಯತೆ ಮೇಲೆ ಕೂಪನ್ ಹಂಚುವಂತೆ ಹಾಗೂ ಸಿಬಂದಿಗೆ ತರಬೇತಿ ನೀಡುವಂತೆ ಸೂಚಿಸಿದರು. ಕೂಪನ್‌ನಲ್ಲಿ ಉಪಾಹಾರದ ನಿಗದಿತ ಬೆಲೆ (12 ರೂ.) ಮತ್ತು ಗ್ರಾಹಕರು ನೀಡುವ ಬೆಲೆ (5 ರೂ.) ಎರಡನ್ನೂ ನಮೂದಿಸಬೇಕು. ಸರಕಾರ ಭರಿಸುತ್ತಿರುವ ವೆಚ್ಚದ ಬಗ್ಗೆ ಗ್ರಾಹಕರಿಗೆ ಸ್ಪಷ್ಟತೆ ಇರಬೇಕು. ಇಂದಿರಾ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುವ ಸಿಬಂದಿ ಇಂದಿರಾ ಕ್ಯಾಂಟೀನ್‌ನ ಸಮವಸ್ತ್ರ ಮತ್ತು ಟೋಪಿಯನ್ನು ಧರಿಸಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳುವಂತೆ ಸಚಿವರು ಸೂಚಿ ಸಿದರು. ಸಿಬಂದಿಗೆ ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆ ನಡೆಸಬೇಕು ಮತ್ತು ದೈಹಿಕ ಸದೃಢತೆಯುಳ್ಳ ವ್ಯಕ್ತಿಗಳನ್ನು ನೇಮಿಸಿಕೊಳ್ಳಬೇಕು ಎಂದರು.
ಉಳ್ಳಾಲದಲ್ಲಿ ಹೋಬಳಿ ಮಟ್ಟದ ಕ್ಯಾಂಟೀನ್: ಉಳ್ಳಾಲ ನಗರಸಭೆ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್‌ನ ನಿರ್ಮಾಣದ ಕೆಲಸವು ಮುಂದಿನ ವಾರ ಸಂಪೂರ್ಣಗೊಳ್ಳಲಿದೆ. ಇದು ಹೋಬಳಿ ಮಟ್ಟದಲ್ಲಿ ರಾಜ್ಯದಲ್ಲೇ ಪ್ರಥಮ ಇಂದಿರಾ ಕ್ಯಾಂಟೀನ್ ಆಗಿರುತ್ತದೆ ಎಂದು ಖಾದರ್ ಹೇಳಿದರು.
ದ.ಕ. ಜಿಲ್ಲಾಧಿಕಾರಿ ಡಾ| ಶಶಿಕಾಂತ ಸೆಂಥಿಲ್ ಮಾತ ನಾಡಿ, ಗ್ರಾಹಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡ ಬೇಕು. ನೀರಿನ ಪೂರೈಕೆಯಲ್ಲಿ ವ್ಯತ್ಯಯವಾದಲ್ಲಿ ಕೂಡಲೇ ಮಹಾನಗರ ಪಾಲಿಕೆಗೆ ತಿಳಿಸಬೇಕು. ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯವಾದಲ್ಲಿ ಕೂಡಲೇ ಇಲಾಖೆಗೆ ತಿಳಿಸಬೇಕು ಎಂದು ಸೂಚಿಸಿದರು.
ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಸೂಕ್ತ ರೀತಿ ಯಲ್ಲಿ ಪೂರ್ಣಗೊಳಿಸಬೇಕು. ಜೂನ್ ತಿಂಗಳಿನಲ್ಲಿ ಮಳೆ ಜಾಸ್ತಿ ಇರುವುದರಿಂದ ತೊಂದರೆ ಉಂಟಾಗದಂತೆ ನೋಡಿ ಕೊಳ್ಳಬೇಕು. ಉಪಾಹಾರ ಮತ್ತು ಊಟದಲ್ಲಿ ತರುವಂತಹ ಅಂತಿಮ ಬದಲಾವಣೆಯನ್ನು ತಮ್ಮ ಗಮನಕ್ಕೆ ತರುವಂತೆ ಸೂಚಿಸಿದರು. ಸಾಯಿ ಹಾಸ್ಪಿಟಾಲಿಟಿ ಸರ್ವಿಸ್‌ನ ಮ್ಯಾನೇಜರ್ ಚಂದ್ರಹಾಸ್, ಕೆಫ್ ಇನ್‌ಫ್ರಾ ಕಂಟ್ರಾಕ್ಟರ್ ರೊನಾಲ್ಡ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ನಾಪತ್ತೆಯಾದ ವ್ಯಕ್ತಿ ಹರಿಹರ ಪಳ್ಳತ್ತಡ್ಕದಲ್ಲಿ ಪತ್ತೆ
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.