ಭರದಿಂದ ಸಾಗುತ್ತಿದೆ ಇಂದಿರಾ ಕ್ಯಾಂಟೀನ್‌ ಕಾಮಗಾರಿ

Team Udayavani, Sep 23, 2018, 10:06 AM IST

23-sepctember-2.jpg

ಸುಳ್ಯ : ರಾಜ್ಯ ಸರಕಾರದ ಮಹತ್ವ ಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಪ್ರಕ್ರಿಯೆಗೆ ಇಲ್ಲಿ ಮರು ಜೀವ ದೊರೆತಿದೆ. ಕಾಮಗಾರಿ ಭರದಿಂದ ಸಾಗಿದ್ದು, ಕೆಲವೇ ದಿನಗಳಲ್ಲಿ ಕಡಿಮೆ ದರದಲ್ಲಿ ಊಟ-ಉಪಾಹಾರದ ಭಾಗ್ಯ ಜನರಿಗೆ ದೊರಕಲಿದೆ.

ನಗರದ ಮಿನಿ ವಿಧಾನಸೌಧದ ಹಿಂಭಾಗದಲ್ಲಿ 5 ಸೆಂಟ್ಸ್‌ ಸ್ಥಳದಲ್ಲಿ ಎಪ್ರಿಲ್‌ ತಿಂಗಳಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ನೆಲ ಸಮತಟ್ಟು ಆಗಿ, ಅಡಿಪಾಯ ಕಾಮಗಾರಿ ಪೂರ್ಣಗೊಂಡ ವೇಳೆ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಆಯಿತು. ಅದಾದ ಬಳಿಕ ನಾಲ್ಕು ತಿಂಗಳ ಕಾಲ ಕಾಮಗಾರಿ ಸ್ಥಗಿತಗೊಂಡಿತ್ತು. ಹೊಸ ಸರಕಾರ ಅಧಿಕಾರಕ್ಕೆ ಬಂದು ಈ ಹಿಂದಿನ ಯೋಜನೆ ಮುಂದುವರಿಸುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾವಿಸಿತ್ತು. ನಾಲ್ಕು ತಿಂಗಳ ಬಳಿಕ ಕಾಮಗಾರಿ ಮರು ಆರಂಭಗೊಂಡಿದೆ.

ರೆಡಿಮೇಡ್‌ ಕಟ್ಟಡ
ತಳಪಾಯ ಕಾಮಗಾರಿಯೊಂದನ್ನು ಹೊರತುಪಡಿಸಿ ಗೋಡೆ, ಛಾವಣಿ ಎಲ್ಲವೂ ರೆಡಿಮೇಡ್‌ ಮಾದರಿಯದ್ದು. ಹೊರ ಭಾಗದಿಂದ ಪರಿಕರ ತರಲಾಗಿದೆ. ಕ್ರೇನ್‌ ಸಹಾಯದಿಂದ ರೆಡಿಮೇಡ್‌ ಗೋಡೆಗಳನ್ನು ಜೋಡಿಸಲಾಗುತ್ತಿದೆ. ಗೋಡೆ ನಿರ್ಮಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಸಿಮೆಂಟ್‌, ಕಬ್ಬಿಣ ಮಿಶ್ರಿತ ಪಿಲ್ಲರ್‌, ಗೋಡೆಗಳಿಗೆ ಆಧಾರ ಕಂಬ ಕಲ್ಪಿಸಲಾಗಿದೆ. ಪ್ರವೇಶ ದ್ವಾರದ ಗೋಡೆ ಕಲ್ಲಿನಲ್ಲಿ ಇಂದಿರಾ ಗಾಂಧಿ ಅವರ ಬೃಹತ್‌ ಗಾತ್ರದ ಭಾವಚಿತ್ರವನ್ನು ಅಚ್ಚು ರೂಪದಲ್ಲಿ ಚಿತ್ರಿಸಲಾಗಿದೆ.

ಇಂದಿರಾ ಕ್ಯಾಂಟಿನ್‌ನಲ್ಲಿ 10 ರೂ.ಗೆ ಊಟ, 5 ರೂ.ಗೆ ತಿಂಡಿ ನೀಡಲಾಗುತ್ತದೆ. ಸುತ್ತೋಲೆಯಲ್ಲಿ ಇರುವ ಮೆನು ಪ್ರಕಾರ, ಬೆಳಗ್ಗೆ ಉಪಾಹಾರ, ಇಡ್ಲಿ ಸಾಂಬಾರ್‌, ರೈಸ್‌ಬಾತ್‌, ಅವಲಕ್ಕಿ, ಉಪ್ಪಿಟ್ಟು, ಖಾರಾ ಪೊಂಗಲ್‌ (ವಾರದಲ್ಲಿ ಒಂದರಂತೆ) ಮಧ್ಯಾಹ್ನ ಮತ್ತು ರಾತ್ರಿ ಅನ್ನ- ಸಾರು, ಉಪ್ಪಿನಕಾಯಿ, ಹಪ್ಪಳ, ರವಿವಾರ ಬಿಸಿಬೇಳೆ ಬಾತ್‌, ತರಕಾರಿ, ಅನ್ನ, ಪುಳಿ ಯೋಗರೆ (ವಾರದಲ್ಲಿ ಒಂದು ದಿನ). ಇಲ್ಲಿಗೆ ಕೇಂದ್ರೀಕೃತ ಅಡುಗೆ ಮನೆ ಮೂಲಕ ಆಹಾರ ಪೂರೈಸಬೇಕಿದೆ.

ನಿರ್ವಹಣೆ ಯಾರಿಂದ?
ಸಕಲೇಶಪುರ ಮೂಲದವರು ಗುತ್ತಿಗೆ ಪಡೆದಿರುವ ಮಾಹಿತಿ ಇದೆ. ಕ್ಯಾಂಟೀನ್‌ ಕಾಮಗಾರಿ ಬಗ್ಗೆ ತಾಲೂಕು ಕಚೇರಿ, ನ.ಪಂ.ಗೆ ಯಾವುದೇ ಮಾಹಿತಿ ಇಲ್ಲ. ಇಲ್ಲಿ ಕಂದಾಯ ಇಲಾಖೆ ಸ್ಥಳ ಗುರುತಿಸಿರುವುದು ಹಾಗೂ ನ.ಪಂ. ಮೂಲ ಸೌಕರ್ಯ ಒದಗಿಸಿರುವುದು ಮಾತ್ರ. ಆಹಾರ ತಯಾರಿ, ಪೂರೈಕೆ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡುವ ಅಧಿಕಾರಿಗಳು ಜಿಲ್ಲಾಮಟ್ಟದಲ್ಲಿ ಇಲ್ಲ.

ಸ್ಥಳೀಯಾಡಳಿತದ ಪಾತ್ರ 
ಕ್ಯಾಂಟೀನ್‌ ನಿರ್ಮಿಸಲು ಸ್ಥಳ, ಕುಡಿ ಯುವ ನೀರು, ವೇಸ್ಟೇಜ್‌ ಸಂಗ್ರಹಕ್ಕೆ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ, ನಿರ್ವಹಣೆ ಹೊಣೆ ಸ್ಥಳೀಯಾಡಳಿತದ್ದು. ಕ್ಯಾಂಟೀನ್‌ ಸ್ಥಾಪನೆಗೆ ಸುಳ್ಯ ನ.ಪಂ.ವ್ಯಾಪ್ತಿಯಲ್ಲಿ ಕಂದಾಯ ಇಲಾಖೆ ಸ್ಥಳ ಒದಗಿಸಿದೆ. ಇನ್ನುಳಿದ ಕಟ್ಟಡ ನಿರ್ಮಾಣ, ಆಹಾರ ಪೂರೈಕೆ ವಿತರಣೆಗೆ ರಾಜ್ಯ ಮಟ್ಟದಲ್ಲೇ ಗುತ್ತಿಗೆ ನೀಡಲಾಗಿದೆ. ಗುತ್ತಿಗೆ ಪಡೆದ ಸಂಸ್ಥೆ ಅದರ ಜವಾಬ್ದಾರಿ ವಹಿಸಲಿದೆ. ಪ್ರತಿ ಇಂದಿರಾ ಕ್ಯಾಂಟೀನ್‌ ನಿರ್ಮಾಣಕ್ಕೆ 32 ಲಕ್ಷ ರೂ. ವೆಚ್ಚ ತಗಲುತ್ತದೆ ಅನ್ನುವುದು ಸರಕಾರದ ಅಂದಾಜು.

ಸ್ಥಳ ಒದಗಿಸಿದ್ದಷ್ಟೆ
ಕಂದಾಯ ಇಲಾಖೆ 5 ಸೆಂಟ್ಸ್‌ ಸ್ಥಳ ಒದಗಿಸಿದ್ದಷ್ಟೆ. ಕ್ಯಾಂಟೀನ್‌ ನಿರ್ಮಾಣ, ನಿರ್ವಹಣೆ ರಾಜ್ಯಮಟ್ಟದ ಪ್ರಕ್ರಿಯೆ. ನಮಗೆ ಅದರ ಬಗ್ಗೆ ಯಾವುದೇ ಸೂಚನೆಗಳು ಬಂದಿಲ್ಲ.
– ಕುಂಞಿಮ್ಮ
ತಹಶೀಲ್ದಾರ್‌, ಸುಳ್ಯ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.