‘ಇಂದಿರಾ ಗಾಂಧಿ ದೇಶ ಕಂಡ ಧೀಮಂತ ನಾಯಕಿ’
Team Udayavani, Nov 2, 2017, 1:10 PM IST
ಮಹಾನಗರ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶ ಕಂಡ ಧೀಮಂತ ನಾಯಕಿಯಾಗಿದ್ದು, ಅವರ ಆಡಳಿತ ದೇಶದ ಚಿತ್ರಣವನ್ನೇ ಬದಲಿಸಿದೆ. ಆಡಳಿತವನ್ನು ಬಂಡವಾಳಶಾಹಿಗಳ ಹಿಡಿತದಿಂದ ಜನ ಸಾಮಾನ್ಯರ ಬಳಿಗೆ ತಂದುಕೊಟ್ಟ ಕೀರ್ತಿ ಇಂದಿರಾ ಗಾಂಧಿ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ನಗರದ ಪಕ್ಷದ ಕಚೇರಿಯಲ್ಲಿ ಜರಗಿದ ದಿವಂಗತ ಇಂದಿರಾ ಗಾಂಧಿ ಪುಣ್ಯತಿಥಿ ಕಾರ್ಯ ಕ್ರಮದಲ್ಲಿ ಮಾತನಾಡಿದರು. ಅವರು ಗರೀಬಿ ಹಠಾವೋದಂತಹ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಜಾರಿಗೆ ತಂದು ಬಡವರ ಬದುಕಿಗೆ ಬೆಳಕಾಗಿದ್ದಾರೆ. ದೇಶಕ್ಕೆ ಅವರ ಕೊಡುಗೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಬೇಕಿದೆ ಎಂದರು.
ಜಿಲ್ಲಾಧ್ಯಕ್ಷ ಕೆ.ಹರೀಶ್ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬಿ.ಇಬ್ರಾಹಿಂ, ಎ.ಸಿ.ಭಂಡಾರಿ, ಸುರೇಶ್ ಬಲ್ಲಾಳ್, ಪದ್ಮನಾಭ ನರಿಂಗಾನ, ಎಂ.ಎಸ್. ಮಹಮ್ಮದ್, ಪ್ರತಿಭಾ ಕುಳಾಯಿ, ಆಶಾ ಡಿ’ಸಿಲ್ವ, ಸಂತೋಷ್ಕುಮಾರ್ ಶೆಟ್ಟಿ, ಎಂ.ಸಂಜೀವ ಮೊಲಿ, ನಝೀರ್ ಬಜಾಲ್, ಧರಣೇಂದ್ರ ಕುಮಾರ್, ಉಮಾನಾಥ್ ಶೆಟ್ಟಿ, ಎಚ್.ಎಂ.ಅಶ್ರಫ್, ಮಿಥುನ್ ರೈ ಉಪಸ್ಥಿತರಿದ್ದರು. ಶಾಹುಲ್ ಹಮೀದ್ ಸ್ವಾಗತಿಸಿದರು. ಶಾಲೆಟ್ ಪಿಂಟೋ ವಂದಿಸಿದರು. ಲೋಕೇಶ್ ಹೆಗ್ಡೆ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.