ಭೂಗತ ಕೇಬಲ್ ಅಳವಡಿಕೆ ಪೂರ್ಣ
Team Udayavani, Nov 30, 2017, 11:00 AM IST
ಕದ್ರಿ : ಮಂಗಳೂರು ನಗರದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಭೂಗತ ಕೇಬಲ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ. ಶೀಘ್ರ ಇದರ ಉದ್ಘಾಟನೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಜೆ. ಆರ್. ಲೋಬೋ ಅವರು ಅಧಿಕಾರಿಗಳಿಗೆ ಸೂಚಿಸಿದರು. ತನ್ನ ಕಚೇರಿಯಲ್ಲಿ ಜರಗಿದ ಮೆಸ್ಕಾಂ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಕಂಕನಾಡಿ ಕರಾವಳಿ ಸರ್ಕಲ್ನಿಂದ ಸ್ಟೇಟ್ಬ್ಯಾಂಕ್ವರೆಗೆ ಕೇಬಲ್ ಅಳವಡಿಕೆ ಪೂರ್ಣಗೊಂಡಿದೆ. ಅಲ್ಲಲ್ಲಿ ಇಂಟರ್ಲಾಕ್ ಅಳವಡಿಕೆ ಹಾಗೂ ಅಪೂರ್ಣವಾಗಿರುವ ಸಣ್ಣ ಕೆಲಸಗಳನ್ನು ಶೀಘ್ರ ಮುಗಿಸುವಂತೆ ಸೂಚಿಸಿದರು.
ಸ್ಥಳಾವಕಾಶ ಒದಗಿಸಲು ಕ್ರಮ
ಉರ್ವ ಮಾರ್ಕೆಟ್ನಲ್ಲಿ 33 ಕೆವಿ ವಿದ್ಯುತ್ ಸೆಂಟರ್ಗೆ ಸ್ಥಳ ಬಿಟ್ಟು ಕೊಡಬೇಕು ಹಾಗೂ ನೆಹರೂ ಮೈದಾನದಲ್ಲಿಯೂ ಸ್ಥಳಾವಕಾಶ ಒದಗಿಸಬೇಕು. ಈ ನಿಟ್ಟಿನಲ್ಲಿ ಶೀಘ್ರ ಗಮನ ಹರಿಸಬೇಕು ಹಾಗೂ ದಕ್ಷಿಣ ವಿಧಾನಸಭಾ ವ್ಯಾಪ್ತಿಯಲ್ಲಿ ದಾರಿ ದೀಪ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮೆಸ್ಕಾಂ ಎಕ್ಸಿಕ್ಯೂಟಿವ್ ಎಂಜಿನಿಯರ್ ಮಂಜಪ್ಪ, ಸುನೀಲ್ ಮೊಂತೇರೊ, ಮೆಸ್ಕಾಂ ಸಲಹಾ ಸಮಿತಿ ಸದಸ್ಯರಾದ ಮೋಹನ್ ಮೆಂಡನ್, ದುರ್ಗಾ ಪ್ರಸಾದ್, ಕಮಲಾಕ್ಷ ಕುಂದರ್, ವಿಜಯ ಲಕ್ಷ್ಮೀ, ಎಲಿಜಬೆತ್ ಹಾಗೂ ಮೆಸ್ಕಾಂ ಅಧಿಕಾರಿಗಳು, ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.