Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Team Udayavani, Nov 29, 2024, 12:17 AM IST
ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ನೀಡಿರುವ ಆರೋಗ್ಯ ವಿಮೆ ವ್ಯಾಪ್ತಿಯನ್ನು 5 ಲಕ್ಷ ರೂ.ಗೆ ಏರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.
ಗುರುವಾರ ತನ್ನ ಕಚೇರಿಯಲ್ಲಿ ನಡೆದ ಸಫಾಯಿ ಕರ್ಮಚಾರಿ/ಮ್ಯಾನುವೆಲ್ ಸ್ಕಾ ವೆಂಜರ್‌ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ಮಹಾನಗರ ಪಾಲಿಕೆಯ ನಿಧಿಯಿಂದ 708 ಮಂದಿ ಪೌರಕಾರ್ಮಿಕರು ಮತ್ತು ಅವರ ಅವಲಂಭಿತರಿಗೆ ಖಾಸಗಿ ವಿಮಾ ಕಂಪೆನಿ ಮೂಲಕ 3 ಲಕ್ಷ ರೂ. ಆರೋಗ್ಯ ವಿಮೆ ನೀಡಲಾಗಿದೆ. ಈ ವಿಮಾ ಮೊತ್ತವು ಕಡಿಮೆಯಾಗಿದ್ದು, ಗಂಭೀರ ಕಾಯಿಲೆಗಳ ಚಿಕಿತ್ಸೆಗಳಿಗೆ ಸಾಕಾಗುವುದಿಲ್ಲ ಎಂದು ಪೌರಕಾರ್ಮಿಕರಿಂದ ಮನವಿಗಳು ಬಂದಿದ್ದು, ಈ ನಿಟ್ಟಿನಲ್ಲಿ ಮುಂದಿನ ಸಾಲಿನಿಂದ ಮೊತ್ತವನ್ನು ಏರಿಸುವಂತೆ ಸೂಚಿಸಿದರು.
ಸಂಜೀವಿನಿ ಒಕ್ಕೂಟದಲ್ಲಿ ದುಡಿಯುತ್ತಿರುವ ಸಿಬಂದಿಗೆ ಗುತ್ತಿಗೆದಾರರ ಬದಲು ಗ್ರಾಮ ಪಂಚಾಯತ್‌ಗಳ ನೇರ ಅಧಿಧೀನದಲ್ಲಿ ವೇತನ ಪಾವತಿಸುವ ಬಗ್ಗೆ ಸರಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಅವರು ತಿಳಿಸಿದರು.
ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಇದೇ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಿದ ಜಿಲ್ಲಾ ಧಿಕಾರಿಗಳು, ಆಯಾ ಉಪವಿಭಾಗಾ ಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ಕುಂದುಕೊರತೆ ಸಭೆ ನಡೆಸಬೇಕು ಎಂದು ಸೂಚಿಸಿದರು.
ಅಪರ ಜಿಲ್ಲಾಧಿ ಕಾರಿ ಡಾ| ಜಿ. ಸಂತೋಷ್ ಕುಮಾರ್ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಕ್ರೀಡಾಪಟುಗಳಿಗೆ ಸೌಲಭ್ಯಗಳನ್ನು ಆಯಾ ಸ್ಥಳೀಯ ಸಂಸ್ಥೆಗಳು ತಮ್ಮ ಮೀಸಲು ನಿ ಯಲ್ಲಿ ಮಂಜೂರು ಮಾಡಬಹುದು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹೇಮಲತಾ ಅವರು, ಪ್ರಸಕ್ತ ಸಾಲಿನಲ್ಲಿ ಜನವರಿಯಿಂದ ನ.20ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 45 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 36 ಪ್ರಕರಣಗಳಲ್ಲಿ 34 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಆನಂದ್, ಡಿಸಿಪಿ ಸಿದ್ಧಾರ್ಥ್ ಗೋಯಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ, ಮಂಗಳೂರು ಉಪವಿಭಾಗಾ ಧಿಕಾರಿ ಹರ್ಷವರ್ಧನ್, ವಿವಿಧ ಇಲಾಖೆ ಅ ಧಿಕಾರಿಗಳು, ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಪೌರಕಾರ್ಮಿಕರ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.