ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ; ಕೈಗೂಡದ ಬಹುಕಾಲದ ಕನಸು!
Team Udayavani, Mar 18, 2022, 8:10 AM IST
ಮೇರಿಹಿಲ್: ಮಂಗಳೂರಿನ ಸುದೀರ್ಘ ಕಾಲದ ಬೇಡಿಕೆಯಾಗಿರುವ ಅಂತಾ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಇನ್ನೂ ಕಾಲ ಕೂಡಿಬಂದಿಲ್ಲ!
ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಬೇಕು ಎಂಬುದು ಕ್ರಿಕೆಟ್ ಪ್ರೇಮಿಗಳ ಬಹುಕಾಲದ ಹಂಬಲ. ಜಿಲ್ಲೆಯ ಪ್ರತಿಭೆ ಕೆ.ಎಲ್. ರಾಹುಲ್ ಅವರು ಪ್ರಸ್ತುತ ಭಾರತದ ತಂಡದ ಪ್ರಧಾನ ಆಟಗಾರರು. ಆದರೆ ನಗರದಲ್ಲಿ ಪ್ರಸ್ತುತ ರಣಜಿ ಪಂದ್ಯ ಆಯೋಜನೆಗೂ ಪೂರಕವಾದ ಮೈದಾನ ಸೌಲಭ್ಯ ಇಲ್ಲ; ಶಿವಮೊಗ್ಗ, ಹುಬ್ಬಳ್ಳಿ ಸಹಿತ ರಾಜ್ಯದ ಇತರ ಕೆಲವು ಜಿಲ್ಲೆಗಳಲ್ಲಿ ರಣಜಿ ಪಂದ್ಯಗಳು ಆಯೋಜನೆಗೊಳ್ಳುತ್ತಿವೆ.
ನೆಹರೂ ಮೈದಾನ ನಗರದಲ್ಲಿರುವ ಏಕೈಕ ಕ್ರಿಕೆಟ್ ಕ್ರೀಡಾಂಗಣ. ಮಕ್ಕಳಿಗೆ ಕ್ರಿಕೆಟ್ ತರಬೇತಿಗೂ ಇದು ಪ್ರಮುಖ ತಾಣ. ಇಲ್ಲಿ ಜಿಲ್ಲಾಮಟ್ಟದ, ಕೆಲವು ಬಾರಿ ಪ್ರಾದೇಶಿಕ ಮಟ್ಟದ ಕ್ರಿಕೆಟ್ ಪಂದ್ಯಗಳು ಆಯೋಜನೆ ಗೊಳ್ಳುತ್ತವೆ. ಆದರೆ ಇದನ್ನು ಸಮಾವೇಶಗಳಿಗೆ, ಇವೆಂಟ್ ಆಯೋಜನೆಗೂ ಬಳಕೆ ಮಾಡುವುದರಿಂದ ಕ್ರಿಕೆಟ್ ಪಂದ್ಯಗಳಿಗೂ ಪೂರ್ಣ ಪ್ರಮಾಣದಲ್ಲಿ ಲಭ್ಯವಿರುವುದಿಲ್ಲ. ನೆಹರೂ ಮೈದಾನ ಬಿಟ್ಟರೆ ಎನ್‌ಎಂಪಿಟಿಯಲ್ಲಿ ಕೆಲವು ಬಾರಿ ಕ್ರಿಕೆಟ್ ಪಂದ್ಯಗಳು ಆಯೋಜನೆ ಗೊಳ್ಳುತ್ತಿವೆ. ಈಗ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಸುಸಜ್ಜಿತ ಕ್ರೀಡಾಂಗಣ ಹೊರತುಪಡಿಸಿದರೆ ಉಳಿದಂತೆ ನಗರದಲ್ಲಿ ಸುಸಜ್ಜಿತ ಕ್ರಿಕೆಟ್ ಮೈದಾನ ಇಲ್ಲ.
1999ರ ಬೇಡಿಕೆ :
ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ 1999ರಲ್ಲಿ ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಮೈದಾನವನ್ನು ನಿರ್ಮಿಸುವ ಪ್ರಸ್ತಾವವನ್ನು ದ.ಕ. ಜಿಲ್ಲಾಡಳಿತದ ಮುಂದಿರಿಸಿತ್ತು. 15 ಎಕ್ರೆ ಜಾಗವನ್ನು ಜಿಲ್ಲಾಡಳಿತ ನೀಡಿದರೆ ಮೈದಾನ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ತಿಳಿಸಿತ್ತು. ಪ್ರಸ್ತಾವ ಮುಂದಿರಿಸಿ 23 ವರ್ಷಗಳಾಗಿವೆ. ಸಾಕಾರ ರೂಪ ಪಡೆಯಲಿಲ್ಲ!
2002ರಲ್ಲಿ ಪಿಲಿಕುಳದ ಪ್ರಸ್ತುತ ಇರುವ ಗಾಲ್ಫ್ ಮೈದಾನದಲ್ಲಿ ಕ್ರಿಕೆಟ್ ಸ್ಟೇಡಿಯಂ ಹಾಗೂ ಸಮಗ್ರ ಕ್ರೀಡಾ ಸಂಕೀರ್ಣ ನಿರ್ಮಾಣದ ಪ್ರಸ್ತಾವ ಕೇಳಿಬಂತು. ಇಲ್ಲಿ ಸುಮಾರು 72 ಎಕ್ರೆ ಜಾಗವಿದೆ. ಇದನ್ನು ತಣ್ಣೀರುಬಾವಿಗೆ ವರ್ಗಾಯಿಸಿ ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ಹಾಗೂ ಕ್ರೀಡಾಸಂಕೀರ್ಣಕ್ಕೆ ಬಳಸಲು ನಿರ್ಣಯಿಸಲಾಗಿತ್ತು. ಇದೂ ಮುಂದೆ ಏನೂ ಆಗಲಿಲ್ಲ. ಈ ಮಧ್ಯೆ ನಗರದ ಇತರೆಡೆಗಳಲ್ಲಿಯೂ ಸ್ಥಳದ ಹುಡುಕಾಟ ನಡೆದಿತ್ತು. ಬೈಕಂಪಾಡಿ, ತಣ್ಣೀರುಬಾವಿ, ಬೊಂದೇಲ್ ಪ್ರಸ್ತಾವನೆಯಾಗಿ ಅಲ್ಲೇ ಬಾಕಿಯಾಗಿವೆ. ಇದೆಲ್ಲದರ ನಡುವೆ ಕೆಂಜಾರಿನಲ್ಲಿ ಮಂಗಳೂರು ವಿಮಾನನಿಲ್ದಾಣದ ಬಳಿ 30 ಎಕ್ರೆ ಜಾಗವನ್ನು ಕ್ರಿಕೆಟ್ ಆಸೋಸಿಯೇಶನ್‌ಗೆ 30 ವರ್ಷಗಳ ಅವಧಿಗೆ ಲೀಸ್‌ಗೆ ನೀಡುವ ಬಗ್ಗೆಯೂ ಇನ್ನೊಂದು ಪ್ರಸ್ತಾವ ಕೇಳಿ ಬಂದಿತ್ತು.
ಮೇರಿಹಿಲ್‌ನಲ್ಲಿ ಸುಸಜ್ಜಿತ ಕ್ರಿಕೆಟ್ ಸ್ಟೇಡಿಯಂ! :
ನಿವೇಶನ ಹಾಗೂ ಅನುದಾನ ಲಭ್ಯತೆ ಆಧಾರದ ಮೇಲೆ ನಗರದ ಮೇರಿಹಿಲ್‌ನ ಕ್ರೀಡಾ ಇಲಾಖೆಗೆ ಸೇರಿದ 9 ಎಕ್ರೆ ಮೈದಾನವನ್ನೇ ಸುಸಜ್ಜಿತ ಕ್ರಿಕೆಟ್ ಮೈದಾನವಾಗಿ ಅಭಿವೃದ್ಧಿಪಡಿಸುವ ಬಗ್ಗೆ ಸರಕಾರ ಸದ್ಯ ಉತ್ಸುಕತೆ ತೋರಿದೆ. ಇಲ್ಲಿ 10 ಕೋ.ರೂ ವೆಚ್ಚದಲ್ಲಿ ಕ್ರಿಕೆಟ್ ಅಕಾಡೆಮಿ ಹಾಗೂ ಟರ್ಫ್ ಮೈದಾನ ನಿರ್ಮಾಣ ಪ್ರಸ್ತಾವ ಅನುಷ್ಠಾನ ನಿಟ್ಟಿನಲ್ಲಿ ಮಾತುಕತೆ ನಡೆಯುತ್ತದೆ. ಆದರೆ ಇದೂ ಮಾತುಕತೆ ಹಂತದಲ್ಲೇ ಇದೆ!
ಸ್ಟೇಡಿಯಂ ಮೂಲಕ ಮಂಗಳೂರು ವಿಶ್ವಮಾನ್ಯ! :
ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಗಮನ ಸೆಳೆಯುವ ಕ್ರಿಕೆಟ್ ಪಂದ್ಯಾಟ ಆಯೋಜನೆಗೊಳ್ಳುವುದು ನಗರದ ಅಭಿವೃದ್ಧಿಯ ದೃಷ್ಟಿಯಲ್ಲಿ ಅಗತ್ಯವಿದೆ. ಕ್ರಿಕೆಟ್ ಜನಾಕರ್ಷಣೆಯ ಕ್ರೀಡೆ. ಏಕದಿನ ಪಂದ್ಯ, ಟಿ-20, ಐಪಿಎಲ್, ಟೆಸ್ಟ್, ಅಂಡರ್-19 ಹೀಗೆ ಅಂತಾರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡೆಗಳು ಆಯೋಜನೆಗೊಳ್ಳುತ್ತಿವೆ. ಇವುಗಳಲ್ಲಿ ವಾರ್ಷಿಕವಾಗಿ ಒಂದೆರಡು ಪಂದ್ಯಗಳು ಮಂಗಳೂರಿನಲ್ಲಿ ನಡೆಯಲು ಅವಕಾಶವಾದರೆ, ನಗರ ವಿಶ್ವಮಟ್ಟದಲ್ಲಿ ಇನ್ನಷ್ಟು ಹೆಚ್ಚು ಜನಾಕರ್ಷಣೆ ಪಡೆಯಲು ಪೂರಕ.
ಮಾತುಕತೆ ಹಂತದಲ್ಲಿದೆ ಸ್ಟೇಡಿಯಂ ನಿರ್ಮಾಣ :
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಪ್ರಕ್ರಿಯೆ ಮಾತುಕತೆ ಹಂತದಲ್ಲಿದೆ. ಮೇರಿಹಿಲ್‌ನ ಹೆಲಿಪ್ಯಾಡ್ ಸಮೀಪದಲ್ಲಿರುವ ಕ್ರೀಡಾಂಗಣವನ್ನು ಇಲಾಖೆಯ ಉಸ್ತುವಾರಿಯಲ್ಲಿ ಕ್ರಿಕೆಟ್ ಅಸೋಸಿಯೇಶನ್ ಅವರು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅಂತಿಮ ತೀರ್ಮಾನವನ್ನು ಸರಕಾರ ಕೈಗೊಳ್ಳಲಿದೆ.-ಪ್ರದೀಪ್ ಡಿ’ಸೋಜಾ, –ಉಪನಿರ್ದೇಶಕರು, ಕ್ರೀಡಾ ಇಲಾಖೆ-ದ.ಕ.
-ದಿನೇಶ್ ಇರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.