ಕಡಲ ತೆರೆಗಳ ಜತೆಗೆ “ಸರ್ಫಿಂಗ್‌’ಎರಡನೇ ಬಾರಿ ರದ್ದು!

ಇಂಟರ್‌ನ್ಯಾಶನಲ್‌ ಸರ್ಫಿಂಗ್‌ ಪಂದ್ಯಾವಳಿ

Team Udayavani, Apr 22, 2019, 6:03 AM IST

2104MLR7

ಮಹಾನಗರ: ಕರಾವಳಿಯ ಕಡಲ ಅಲೆಗಳ ನಡುವೆ ದೇಶ-ವಿದೇಶದ ಸರ್ಫಿಂಗ್‌ ಸಾಹಸಿಗರು ಕಮಾಲ್‌ ತೋರಿಸುತ್ತಿದ್ದ ಮತ್ತು ದ.ಕ. ಜಿಲ್ಲಾ ಪ್ರವಾಸೋದ್ಯಮಕ್ಕೆ ಹೊಸ ಭಾಷ್ಯ ಬರೆಯಲಿದ್ದ “ಇಂಟರ್‌ನ್ಯಾಷನಲ್‌ ಸರ್ಫಿಂಗ್‌ ಪಂದ್ಯಾವಳಿ’ ಎರಡನೇ ಬಾರಿಗೂ ರದ್ದಾಗಿದೆ.

2018ರ ಮೇನಲ್ಲಿ ಸರ್ಫಿಂಗ್‌ ಫೆಸ್ಟಿವಲ್‌ ನಡೆಸಲು ಕೆನರಾ ಸರ್ಫಿಂಗ್‌ ಮತ್ತು ವಾಟರ್‌ನ್ಪೋರ್ಟ್ಸ್ ಪ್ರಮೋಶನ್‌ ಕೌನ್ಸೆಲ್‌ ಮತ್ತು ಮಂತ್ರ ಸರ್ಫಿಂಗ್‌ ಕ್ಲಬ್‌ ಸಹಯೋಗದಲ್ಲಿ ಪ್ರಸ್ತಾವನೆ ಸಿದ್ಧಗೊಂಡಿತ್ತು. ಆದರೆ ಕಳೆದ ಮೇನಲ್ಲಿ ತೀವ್ರ ಮಳೆ ಇದ್ದ ಕಾರಣ ದ.ಕ. ಜಿಲ್ಲಾಡಳಿತ ಸರ್ಫಿಂಗ್‌ ನಡೆಸಲು ಅನುಮತಿ ನಿರಾಕರಿಸಿತ್ತು. ಈ ಬಾರಿ ಇಂಟರ್‌ನ್ಯಾಶನಲ್‌ ಸರ್ಫಿಂಗ್‌ ಫೆಸ್ಟಿವಲ್‌ ನಡೆಸಲು ಪ್ರಸ್ತಾವನೆ ಕಳುಹಿಸಿದರೂ ಕೂಡ ರಾಜ್ಯ ಸರಕಾರ ಚುನಾವಣೆ ನೆಪವೊಡ್ಡಿ ಪಂದ್ಯಾವಳಿಗೆ ಅನುಮತಿ ನೀಡಿಲ್ಲ. ಹೀಗಾಗಿ, ದ.ಕ. ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸುವ, ಸರ್ಫಿಂಗ್‌ ನಕ್ಷೆಯಲ್ಲಿ ಗುರುತಿಸಲ್ಪಡುವ ಅವಕಾಶ ಎರಡನೇ ಬಾರಿಗೂ ಕೈತಪ್ಪಿ ಹೋದಂತಾಗಿದೆ.

ಸುರತ್ಕಲ್‌ ಬಳಿಯ ಸಸಿಹಿತ್ಲು ಬೀಚ್‌ನ್ನು ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಪಡಿಸುವುದಕ್ಕೆ ಈ ಹಿಂದೆಯೇ ನಿರ್ಧರಿಸಲಾಗಿತ್ತು. 2015, 2016ರಲ್ಲಿ ಸರ್ಫಿಂಗ್‌ ಸ್ಪರ್ಧೆಯನ್ನು ಮಂಗಳೂರಿನಲ್ಲಿ ಆಯೋಜಿಸುವ ಕುರಿತು ವಿವಿಧ ಸಭೆಗಳು, ಪೂರ್ವಭಾವಿ ಸಭೆಗಳು ಅಂದಿನ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದರೂ ಕೂಡ ಕೊನೆಯ ಹಂತದಲ್ಲಿ ಅದು ರದ್ದುಗೊಂಡಿತು. ಆರ್ಥಿಕವಾಗಿ ದುಬಾರಿ, ಸಂಘಟನೆಯಲ್ಲಿ ಕೆಲವೊಂದು ವ್ಯತ್ಯಾಸಗಳು ಆದ ಕಾರಣವನ್ನು ನೀಡಿ, ಸರ್ಫಿಂಗ್‌ ಸ್ಪರ್ಧೆ ಮುಂದೂಡಿಕೆ ಆಗಿತ್ತು.

2017ರಲ್ಲಿ ಮೊದಲ ಬಾರಿಗೆ ಆಯೋಜನೆ
2017ರಲ್ಲಿ ಸಸಿಹಿತ್ಲುವಿನಲ್ಲಿ ಮೊದಲ ಬಾರಿಗೆ ಯಶಸ್ವಿಯಾಗಿ ರಾಷ್ಟ್ರೀಯ ಸರ್ಫಿಂಗ್‌ ಉತ್ಸವ ಏರ್ಪಡಿಸಲಾಗಿತ್ತು. ದೇಶ- ವಿದೇಶದ ಸರ್ಫಿಂಗ್‌ ಪಟುಗಳು ಇದರಲ್ಲಿ ಭಾಗವಹಿಸಿದ್ದರು. ಅಲ್ಲಿಯವರೆಗೆ ಯಾರಿಗೂ ಪರಿಚಯ ಇರದಿದ್ದ, ನದಿ-ಸಮುದ್ರ ಸೇರುವ ಸುಂದರ ಪ್ರದೇಶ ಸಸಿಹಿತ್ಲು ಆ ಕಾರಣದಿಂದ ಜನಪ್ರಿಯಗೊಂಡಿತ್ತು. ಅಂದಿನ ಪ್ರವಾಸೋದ್ಯಮ ಸಚಿವ ಆರ್‌. ವಿ. ದೇಶಪಾಂಡೆ ಅವರು ಸರ್ಫಿಂಗ್‌ ಪಂದ್ಯಾವಳಿ ಉದ್ಘಾಟಿಸಿ ಪ್ರತೀವರ್ಷ ಸರ್ಫಿಂಗ್‌ ನಡೆಸುವ ಬಗ್ಗೆ ತಿಳಿಸಿದ್ದರು.

ಅಕ್ಟೋಬರ್‌ನಲ್ಲಿ ಸ್ಟಾಂಡ್‌ಪ್‌ ಪ್ಯಾಡಲಿಂಗ್‌
ಸರ್ಫಿಂಗ್‌ ಪಂದ್ಯಾವಳಿಗೆ ಸರಕಾರ ಈ ಬಾರಿ ಅನುಮತಿ ನೀಡಲಿಲ್ಲ. ಈ ಬಗ್ಗೆ ವಿಶೇಷ ಪ್ರಯತ್ನ ನಡೆಯಿತಾದರೂ ಅದು ಫಲ ಕಾಣಲಿಲ್ಲ. ಆದರೂ ಕರಾವಳಿಯ ಪ್ರವಾಸೋದ್ಯಮಕ್ಕೆ ಹೊಸ ಬದುಕು ಸಿಗಬೇಕು ಎಂಬ ಕಾರಣದಿಂದ ಈ ಬಾರಿ ಇನ್ನೊಂದು ವಿನೂತನ ಪ್ರಯತ್ನಕ್ಕೆ ಕೈಹಾಕಲಾಗಿದೆ. ಸರ್ಫಿಂಗ್‌ ಉತ್ಸವ ನಡೆಸುವ ಅವಕಾಶ ತಪ್ಪಿದರೂ ಸ್ಟಾಂಡಪ್‌ ಪ್ಯಾಡಲಿಂಗ್‌(ಸಪ್‌) ಸ್ಪರ್ಧೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಏರ್ಪಡಿಸಲು ತೀರ್ಮಾನಿಸಲಾಗಿದೆ. ಅಕ್ಟೋಬರ್‌-ನವೆಂಬರ್‌ ತಿಂಗಳಲ್ಲಿ ಸಸಿಹಿತ್ಲುವಿನ ಸಮುದ್ರ-ನದಿಯಲ್ಲಿ ಇದನ್ನು ನಡೆಸಲಾಗುವುದು ಎನ್ನುತ್ತಾರೆ ಸರ್ಫಿಂಗ್‌ ಪಂದ್ಯಾವಳಿ ಆಯೋಜನೆಯ ಪ್ರಮುಖರಾದ ಯತೀಶ್‌ ಬೈಕಂಪಾಡಿ.

 ಅನುಮತಿ ಇಲ್ಲ
ಈ ಬಾರಿ ಸರ್ಫಿಂಗ್‌ ಪಂದ್ಯಾವಳಿ ನಡೆಸಲು ಸರಕಾರ ಅನುಮತಿ ನೀಡಲಿಲ್ಲ. ಹೀಗಾಗಿ ಪಂದ್ಯಾವಳಿ ನಡೆಸಲಾಗುತ್ತಿಲ್ಲ. ಮುಂದೆ ಸರಕಾರದ ಗಮನಕ್ಕೆ ತಂದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು.
– ಶಶಿಕಾಂತ್‌ ಸೆಂಥಿಲ್‌,
ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.