ಅಂತಾರಾಷ್ಟ್ರೀಯ ದ್ರಾಕ್ಷಾರಸ ಉತ್ಸವ: 150 ಬ್ರ್ಯಾಂಡ್ ಗಳ ಪ್ರದರ್ಶನ
Team Udayavani, Dec 9, 2017, 11:38 AM IST
ಮಹಾನಗರ : ಕರ್ನಾಟಕ ದ್ರಾಕ್ಷಾರಸ ಮಂಡಳಿ ಮತ್ತು ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಡಿ.8ರಿಂದ 10ರ ವರೆಗೆ ಕದ್ರಿ ಪಾರ್ಕ್ ನಲ್ಲಿ ನಡೆಯಲಿರುವ ಮಂಗಳೂರು ಅಂತಾರಾಷ್ಟ್ರೀಯ ದ್ರಾಕ್ಷಾರಸ ಉತ್ಸವ-2017ಕ್ಕೆ ಶುಕ್ರವಾರ ಸಂಜೆ ಚಾಲನೆ ದೊರೆಯಿತು.
ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಸುಮಾರು 12ರಿಂದ 15 ವೈನರಿಗಳು ಭಾಗವಹಿಸಿ ಸುಮಾರು 150ಕ್ಕೂ ಹೆಚ್ಚು
ಬ್ರ್ಯಾಂಡ್‌ಗಳನ್ನು ಉತ್ಸವದಲ್ಲಿ ಪ್ರದರ್ಶಿಸಿತು. ಹಳೆಯ ವೈನ್ ಪ್ರದೇಶಗಳಾದ ಯುರೋಪ್ ಖಂಡ ಮತ್ತು ಹೊಸ ವೈನ್ ಪ್ರದೇಶಗಳಾದ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಚಿಲ್ಲಿ, ಅಮೆರಿಕ ಮೊದಲಾದ ದೇಶಗಳ ವೈನ್‌ಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ.
ಉತ್ಸವದಲ್ಲಿ ವಿವಿಧ ಕಂಪೆನಿಗಳ 10ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ವಿವಿಧ ಬ್ರ್ಯಾಂಡ್ ಗಳ ವೈನ್‌ಗಳನ್ನು ಮಾರಾಟಕ್ಕಿಡಲಾಗಿತ್ತು. ಗ್ರಾಹಕರಿಗೆ ರುಚಿ ನೋಡುವ ಅವಕಾಶಗಳನ್ನು ಕೆಲವು ಮಳಿಗೆಗಳಲ್ಲಿ ಒದಗಿಸಲಾಗಿತ್ತು.
10 ದೇಶಗಳ ವೈನ್
ವೈನ್ ಉತ್ಸವದಲ್ಲಿ ಮಳಿಗೆಯನ್ನು ಹಾಕಿದ್ದ ಬೆಂಗಳೂರಿನ ಗೌತಮ್ ಎಂಬವರ ಬಳಿ ಸ್ಪೇನ್, ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಫ್ರಾನ್ಸ್ ಸಹಿತ ಹತ್ತು ದೇಶಗಳ ವಿವಿಧ ಬ್ರ್ಯಾಂಡ್ ಗಳ ವೈನ್‌ಗಳನ್ನು ಮಾರಾಟಕ್ಕಿಡಲಾಗಿತ್ತು. ಮಳಿಗೆಯಲ್ಲಿ ರೈಡಿಂಗ್ ಹೈ ಎನ್ನುವ ಬ್ರ್ಯಾಂಡ್ ನ 2008ರಷ್ಟು ಹಳೆಯ ವೈನ್ ಎಲ್ಲರ ಆಕರ್ಷಣೆಯಾಗಿತ್ತು.
20 ರೂ. ಪ್ರವೇಶದರ
ವೈನ್ ಮೇಳದ ಪ್ರವೇಶ ದರ 20 ರೂ. ನಿಗದಿಪಡಿಸಲಾಗಿದೆ. ಉತ್ಸವದಲ್ಲಿ ಎಲ್ಲ ವೈನ್ ಬ್ರ್ಯಾಂಡ್ ಮಾರಾಟಗಳ ಮೇಲೆ ಶೇ.10ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಅಲ್ಲದೆ ವೈನ್ ಮೇಳ ನಡೆಯುವ ಮೂರು ದಿವಸವೂ ಸಂಜೆ ವಿವಿಧ ಸಂಸ್ಥೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಕಳೆದ ಬಾರಿ 20 ಲಕ್ಷ ರೂ. ಆದಾಯ
ವೈನ್ ಬಳಕೆಯನ್ನು ಉತ್ತೇಜಿಸುವ ಹಾಗೂ ವೈನ್ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಳೆದ ಬಾರಿ ನಗರದಲ್ಲಿ ಆಯೋಜಿಸಲಾಗಿದ್ದ ವೈನ್ ಮೇಳದಲ್ಲಿ ದೊರೆತ ಉತ್ತಮ ಸ್ಪಂದನೆಯ ಹಿನ್ನೆಲೆಯಲ್ಲಿ ಈ ಬಾರಿಯೂ ಯೋಜಿಸಲಾಗಿದೆ. ಕಳೆದ ಬಾರಿ 20 ಲಕ್ಷ ರೂ. ಆದಾಯವಾಗಿತ್ತು. ಈಗಷ್ಟೇ ಪ್ರದರ್ಶನ ಆರಂಭಗೊಂಡಿದೆ. ತುಂಬಾ ಜನರು ಇಲ್ಲಿ ಸೇರಿದ್ದಾರೆ. ಮಂಗಳೂರು ಜನರಿಂದ ಅದ್ಭುತ ಸ್ಪಂದನೆ ದೊರೆಯುವ ನಿರೀಕ್ಷೆಯಲ್ಲಿದ್ದೇವೆ.
– ರವೀಂದ್ರ ಶಂಕರ್ ಮಿರ್ಜೆ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.