ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇನ್ನೆರಡು ದಿನ ಇಂಟರ್ನೆಟ್ ಸ್ಥಗಿತ
Team Udayavani, Dec 19, 2019, 11:23 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪವನ್ನು ತಾಳಿದ ಬಳಿಕ ಮುಂಜಾಗರೂಕತಾ ಕ್ರಮವಾಗಿ ನಗರದ ಐದು ಪೊಲಿಸ್ ಠಾಣಾ ವ್ಯಾಪ್ತಿಗಳಲ್ಲಿ ಕರ್ಫ್ಯೂ ವಿಧಿಸಲಾಗಿದ್ದು ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಮುಂದಿನ 48 ಗಂಟೆಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ, ರಜನೀಶ್ ಗೋಯಲ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
ಮಂಗಳೂರು ನಗರಾದ್ಯಂತ 144 ಸೆಕ್ಷನ್ ಉಲ್ಲಂಘನೆಯಾಗಿರುವ ಘಟನೆಗಳು ನಡೆದಿರುವ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಆತಂಕ ಎದುರಾಗುವ ಸಾಧ್ಯತೆ ಇದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ನಿಲುಗಡೆಗೊಳಿಸಲು ಸೂಚನೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.