ಮಾತಿನ ಮತ, ಸಂದರ್ಶನ


Team Udayavani, Mar 18, 2018, 2:18 PM IST

18-March-17.jpg

ಬಿಜೆಪಿ ಶಾಸಕರ ವೈಫ‌ಲ್ಯ ಕಾಂಗ್ರೆಸ್‌ ಅಭ್ಯರ್ಥಿಗೆ ವರ

ಸುಳ್ಯದಲ್ಲಿ ಈ ಬಾರಿ ಪ್ರಚಾರ ಹೇಗಿದೆ?
ಒಂದು ತಿಂಗಳಿನಿಂದ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪಕ್ಷದ ಪರ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಪಕ್ಷದ ವಿವಿಧ ಜವಾಬ್ದಾರಿ ಹೊತ್ತ ನಾಯಕರು ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಜನಪರ ಯೋಜನೆಗಳು ಮತ್ತು ಕಾಂಗ್ರೆಸ್‌ ಮುಖಂಡರ ಪ್ರಯತ್ನದ ಫಲವಾಗಿ ಕ್ಷೇತ್ರಕ್ಕೆ ಮಂಜೂರುಗೊಂಡಿರುವ 75 ಕೋ. ರೂ.ಗೂ ಅಧಿಕ ಮೊತ್ತದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದಿಟ್ಟಿದ್ದೇವೆ.

ಬಿಜೆಪಿ ಪಕ್ಷ ಇಲ್ಲಿ ನಿರಂತರವಾಗಿ ಗೆಲ್ಲುತ್ತಿದೆ? ಕಾಂಗ್ರೆಸ್‌ಗೆ ಗೆಲ್ಲುವ ನಿರೀಕ್ಷೆ ಇದೆಯಾ?
ಕಳೆದ 25 ವರ್ಷಗಳಿಂದ ಇಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಆದರೆ ಅಭಿವೃದ್ಧಿ ವಿಚಾರದಲ್ಲಿ ಪೂರ್ಣ ವೈಫಲ್ಯ ಕಂಡಿದೆ. ವಿದ್ಯುತ್‌, ರಸ್ತೆ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಪ್ರಚಾರ ಸಂದರ್ಭದಲ್ಲಿ ಜನರೇ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎರಡು ಬಾರಿ ಸಂಸದರಾಗಿರುವ ನಳಿನ್‌ ಕುಮಾರ್‌ ಕಟೀಲು ಅವರ ಕೊಡುಗೆ ಕೂಡ ಶೂನ್ಯ. ಸಿಆರ್‌ಎಫ್‌ ನಿಧಿಯಿಂದ ರಸ್ತೆಗೆ ಅನುದಾನ ನೀಡಿದ್ದೇನೆ ಎಂದಿದ್ದರು. ವಾಸ್ತವವಾಗಿ ಅದಕ್ಕೆ ಇನ್ನೂ ತಾಂತ್ರಿಕ ಮಂಜೂರಾತಿ ಸಿಕ್ಕಿಲ್ಲ. ಸಂಸದರು ದತ್ತು ತೆಗೆದುಕೊಂಡ ಬಳ್ಪ ಗ್ರಾಮದಲ್ಲಿ ಹೇಳಿಕೊಳ್ಳುವಂತಹ ಯಾವ ಅಭಿವೃದ್ಧಿ ಕೆಲಸವೂ ಆಗಿಲ್ಲ. ಬಿಜೆಪಿ ವೈಫಲ್ಯದ ವಿರುದ್ಧ ಮತ್ತು ಕಾಂಗ್ರೆಸ್‌ ರಾಜ್ಯ ಸರಕಾರದ ಸಾಧನೆ ಪರವಾಗಿ ಜನರು ಮತ ಚಲಾಯಿಸುವ ವಿಶ್ವಾಸ ಇದೆ.

25 ವರ್ಷಗಳಿಂದ ಪಕ್ಷ ಗೆದ್ದಿಲ್ಲ. ಜನರು ಈ ಬಾರಿ ಬದಲಾವಣೆ ಬಯಸುವ ನಿರೀಕ್ಷೆ ಇದೆಯಾ?
ಈ ಹಿಂದಿನ ಚುನಾವಣೆಗೆ ಹೋಲಿಸುವುದಕ್ಕಿಂತಲೂ ಈ ಬಾರಿ ಪರಿಸ್ಥಿತಿ ಭಿನ್ನ. ಕೇಂದ್ರದ ಆಡಳಿತದ ಜನವಿರೋಧಿ ನೀತಿ, ಹಿಂದಿನ ಬಿಜೆಪಿ ಸರಕಾರದ ಭ್ರಷ್ಟಾಚಾರ, 25 ವರ್ಷ ಕಳೆದರೂ ತಾಲೂಕಿನ ಜ್ವಲಂತ ಸಮಸ್ಯೆಗಳಿಗೆ ಮುಕ್ತಿ ಸಿಗದಿರುವುದು ಇವೆಲ್ಲಗಳಿಂದ ಜನರು ರೋಸಿ ಹೋಗಿದ್ದಾರೆ. ಜನ ಪ್ರಜ್ಞಾವಂತರಾಗಿದ್ದು ಬದಲಾವಣೆ ಬಯಸಲಿದ್ದಾರೆ. ಕಾಂಗ್ರೆಸ್‌ ಪಕ್ಷವೂ ಸುಳ್ಯದ ವಿವಿಧ ನಾಯಕರಿಗೆ ಉನ್ನತ ಸ್ಥಾನಮಾನ ನೀಡಿರುವುದು ಸಂಘಟನೆ ದೃಷ್ಟಿಯಿಂದಲೂ ಪಕ್ಷಕ್ಕೆ ಬಲ ಸಿಕ್ಕಿದೆ. ಕಾರ್ಯಕರ್ತರೂ ಶ್ರಮಿಸುತ್ತಿದ್ದಾರೆ. ಈ ಬಾರಿ ಕಾಂಗ್ರೆಸ್‌ ಗೆಲ್ಲುವುದು ಶತಃಸಿದ್ಧ.

ಡಾ| ರಘು ಅವರೇ ಸ್ಪರ್ಧಿಸುತ್ತಾರೋ ಅಥವಾ ಹೊಸ ಮುಖಕ್ಕೆ ಟಿಕೆಟ್‌ ಸಿಗಬಹುದಾ?
ಪಕ್ಷದ ಹೈಕಮಾಂಡ್‌ ಈ ನಿರ್ಧಾರ ಪ್ರಕಟಿಸಲಿದೆ. ಡಾ| ರಘು ಸಜ್ಜನ ವ್ಯಕ್ತಿ. ಜನಸೇವೆಗಾಗಿ ಸರಕಾರಿ ಹುದ್ದೆ ತೊರೆದು ಬಂದಿದ್ದಾರೆ. ಅವರ ಬಗ್ಗೆ ಕ್ಷೇತ್ರದ ಜನರಿಗೆ ಒಳ್ಳೆಯ ಅಭಿಪ್ರಾಯ ಇದೆ. ಇಲ್ಲಿ ಡಾ| ರಘು ಸ್ಪರ್ಧಿಸುತ್ತಾರೋ ಅಥವಾ ಹೊಸಬರೋ ಅನ್ನುವುದಕ್ಕಿಂತಲೂ ಕಾಂಗ್ರೆಸ್ಸೇ ಗೆಲ್ಲುತ್ತದೆ ಎನ್ನುವುದು ನಿಶ್ಚಿತ. ಪಕ್ಷ ಯಾರಿಗೆ ಟಿಕೆಟ್‌ ಕೊಟ್ಟರೂ ಕಾಂಗ್ರೆಸ್‌ ಗೆಲುವಿಗೆ ನಾವೆಲ್ಲರೂ ಬದ್ಧರಾಗಿರುತ್ತೇವೆ.

„ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.