ಇಂಟಕ್‌ಗೆ ವಿಧಾನಸಭೆ ಟಿಕೆಟ್ ನೀಡಲು ಮನವಿ : ಮಲ್ಲಿ
Team Udayavani, Jul 15, 2017, 2:30 AM IST
ಪಣಂಬೂರು: ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಇಂಟಕ್ ಸಂಪೂರ್ಣ ಬದ್ಧವಾಗಿದೆ. ಇದರ ಜತೆಗೆ ಇಂಟಕ್‌ಗೆ ಶಾಸಕ ಸ್ಥಾನಕ್ಕೆ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕು ಎಂದು ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಲಾಗಿದ್ದು, ಅವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ ಹೇಳಿದರು. ಶನಿವಾರ ಪಣಂಬೂರಿನ ಜೆಎನ್‌ಸಿ ಸಭಾಂಗಣದಲ್ಲಿ ಜರಗಲಿರುವ ಇಂಟಕ್ ಜಿಲ್ಲಾ ಸಮಾವೇಶದ ಹಿನ್ನೆಲೆಯಲ್ಲಿ ಪದಾಧಿಕಾರಿಗಳ ಪೂರ್ವಭಾವಿ ಸಭೆ ಶುಕ್ರವಾರ ಜರಗಿದ್ದು, ಅದರ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಂಟಕ್ ರಾಷ್ಟ್ರೀಯ ಅಧ್ಯಕ್ಷ ಸಂಜೀವ ರೆಡ್ಡಿ ನೇತೃತ್ವದಲ್ಲಿ ಜರಗಿದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಸ್ಥಾನದಿಂದ ಹಿಡಿದು ಗ್ರಾಮ ಪಂಚಾಯತ್‌ವರೆಗೆ ಇಂಟಕ್ ಬಲಿಷ್ಠ ಸಂಘಟನೆ ಹೊಂದಿದೆ. ಹೀಗಾಗಿ ಪ್ರತಿ ಕ್ಷೇತ್ರದಲ್ಲಿ ಕೆಲವು ಸ್ಥಾನಗಳನ್ನು ಇಂಟಕ್‌ಗೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರಿಗೆ ಮನವಿ ಸಲ್ಲಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಉಂಟಾಗಿರುವ ಕೋಮು ಸಂಘರ್ಷವನ್ನು ಕೊನೆಗಾಣಿಸಲು ಇಂಟಕ್ ಕಾರ್ಯಕರ್ತರು ಜಾತಿ ಭೇದ ಮರೆತು ಸಮಾವೇಶದಲ್ಲಿ ಒಗ್ಗಟ್ಟು ಪ್ರದರ್ಶಿಸಲಿದ್ದಾರೆ. ಜಿಲ್ಲೆ ಕೈಗಾರಿಕ ಪ್ರದೇಶವಾಗಿ ಖ್ಯಾತಿ ಗಳಿಸಿದ್ದು, ಕಾರ್ಮಿಕರು ಉದ್ಯೋಗ ಪಡೆಯಲು ಹಾಗೂ ಅದನ್ನು ಉಳಿಸಿಕೊಳ್ಳಲು ಇಂಟಕ್ ಸಹಕಾರ ನೀಡಲಿದೆ. ಸಮಾವೇಶಕ್ಕೆ ಮುನ್ನ ಬೃಹತ್ ಸೌಹಾರ್ದ ಜಾಥಾ ನಡೆಯಲಿದ್ದು, ಜಿಲ್ಲೆಯ ಇಂಟಕ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಸಂಜೀವ ರೆಡ್ಡಿ, ಕೆ.ಪಿ.ಸಿ.ಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡಿಸ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಲೋಕಸಭಾ ಸದಸ್ಯ ವೀರಪ್ಪ ಮೊಯಿಲಿ, ಸಚಿವ ಬಿ. ರಮಾನಾಥ ರೈ ಸಹಿತ ಗಣ್ಯರು ಭಾಗವಹಿಸಲಿದ್ದಾರೆ ಎಂದರು. ರಾಜ್ಯದ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿ ಇಂಟಕ್ ಸಮಾವೇಶವನ್ನು ಹಂತ ಹಂತವಾಗಿ ನಡೆಸಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ವಿಶೇಷ ಸಮಿತಿ ರಚಿಸಲಾಗಿದೆ ಎಂದು ಮಲ್ಲಿ ಹೇಳಿದರು.
ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ಮಾತನಾಡಿ, ಸಮಾವೇಶ ಯಶಸ್ವಿಗೊಳಿಸಲು ಸಿದ್ಧತೆ ಮಾಡಲಾಗಿದ್ದು, ಮುಂಬರುವ ಚುನಾವಣೆಯಲ್ಲಿ ಇಂಟಕ್ ಮುಖ್ಯ ಭೂಮಿಕೆ ವಹಿಸಲು ಸಿದ್ಧಗೊಂಡಿದೆ ಎಂದರು. ನಾರಾಯಣ್ ಡಿ.ಆರ್., ಚಿತ್ತರಂಜನ್ ಬೊಂಡಾಲ, ವಿಜಯ್, ವಿನೋದ್ ರಾಜ್, ಸ್ಟೀವನ್, ಸುಕುಮಾರ್, ಸುರೇಶ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.