Sakala Yojana ಪರಿಶೀಲನೆಗೆ ತಾಲೂಕು ಮಟ್ಟದಲ್ಲಿ ತನಿಖಾ ತಂಡ: ಅಪರ ಜಿಲ್ಲಾಧಿಕಾರಿ
Team Udayavani, Aug 29, 2024, 12:58 AM IST
ಮಂಗಳೂರು: ಸಕಾಲ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪ್ರಗತಿ ಪರಿಶೀಲನೆಗೆ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲೂ ತನಿಖಾ ತಂಡ ರಚನೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ| ಜಿ. ಸಂತೋಷ್ ಕುಮಾರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕು ಮಟ್ಟದ ತಂಡವು ಪ್ರತಿ ತಿಂಗಳು ಸಭೆ ನಡೆಸಿ ಆಯಾ ಇಲಾಖೆಯಲ್ಲಿ ಸಕಾಲ ಅಭಿಯಾನದಡಿ ಸಲ್ಲಿಕೆಯಾಗಿರುವ ಯೋಜನೆಗಳ ಅರ್ಜಿಗಳ ವರದಿಯನ್ನು ಪರಿಶೀಲಿಸಬೇಕು. ಈ ಸಂಬಂಧ ಸಭೆ ನಡೆಸಿ ನಡಾವಳಿಯನ್ನು ಸಕಾಲ ಪೋರ್ಟಲ್‌ಗೆ ಸಲ್ಲಿಸಬೇಕು ಎಂದು ಅವರು ಹೇಳಿದರು.
ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಆದ್ಯತೆಯಲ್ಲಿ ಸಂಬಂಧಿಸಿದ ಇಲಾಖೆಗಳು ಪರಿಶೀಲಿಸಿ ಇತ್ಯರ್ಥಪಡಿಸಬೇಕು. ಜಿಲ್ಲೆಯಲ್ಲಿ ಇದುವರೆಗೆ ಜರಗಿದ ಜನತಾ ದರ್ಶನದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ಒದಗಿಸಿರುವ ಬಗ್ಗೆ ಕೂಡಲೇ ವರದಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.
ಕನ್ನಡ ಭಾಷಾ ಸಮಗ್ರ ಮಸೂದೆ ಆದೇಶದಂತೆ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯಾಗಿರುವ ಬಗ್ಗೆ ಎಲ್ಲ ಇಲಾಖೆಗಳು ತಮ್ಮ ಅಧೀನ ಸಂಸ್ಥೆಗಳಲ್ಲಿ ಪರಿಶೀಲಿಸಿ ವರದಿ ನೀಡಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತ ಗಿರೀಶ್ ನಂದನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.