ಸ್ವಚ್ಛತಾ ಅಭಿಯಾನ


Team Udayavani, Oct 28, 2017, 4:56 PM IST

28-Mng-15.jpg

ಪುಂಜಾಲಕಟ್ಟೆ: ಸ್ವಚ್ಛತೆಗಾಗಿ ಗ್ರಾಮ ಪಂಚಾಯತ್‌ಗಳು ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಮತ್ತು ಅದರ ಅನುಷ್ಠಾನದಲ್ಲಿ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತ್‌ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿ ಇದೆ.

ಅ. 2ರಿಂದ ಅ. 15 ರ ವರೆಗೆ ನಡೆದ ಸ್ವಚ್ಛತಾ ಅಭಿಯಾನದ ಅಂಗವಾಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮನೆ, ಅಂಗಡಿ, ಕಚೇರಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಗಾಗಿ ಕೈಗೊಂಡ ಕ್ರಮಗಳಿಂದ ಯಶಸ್ವಿಯಾಗಿದೆ.

ಅಭಿಯಾನ ಕಾರ್ಯಕ್ರಮ
ಈ ಅಭಿಯಾನದ ಪ್ರಯುಕ್ತ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆಗಳನ್ನು ಆಯೋಜಿಸಿದರು. ಸಾಮಾಜಿಕ ಪರಿ ಶೋಧನೆಯಲ್ಲಿ ಗುರುತಿಸಲ್ಪಟ್ಟ ಶೌಚಾಲಯ ರಹಿತ ಕುಟುಂಬಗಳಿಗೆ ಇದರ ನಿರ್ಮಾಣ-ಬಳಕೆ, ಘನ/ದ್ರವ ತ್ಯಾಜ್ಯ ವಿಲೇವಾರಿಗಳ ಬಗ್ಗೆ ಸ್ವಚ್ಛತಾ ನೀತಿ-2017ರಂತೆ ಅನುಷ್ಠಾನಕ್ಕೆಯೋಜನೆ ರೂಪಿಸಿದರು. ವಾರ್ಡ್‌ ವಾರು ಉಪಸಮಿತಿ ಸದಸ್ಯರಿಗೆ ಸ್ವಚ್ಛತಾ ನೀತಿ ಬಗ್ಗೆ ತರಬೇತಿ ಕಾರ್ಯಾಗಾರ, ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮನೆ ಮನೆ ಭೇಟಿ ಮಾಡಿ ತ್ಯಾಜ್ಯಗಳನ್ನು ಮೂಲದಲ್ಲೇ ವಿಂಗಡಿಸಿ ಹಸಿ, ಒಣಕಸಗಳ ವಿಲೇವಾರಿ ಬಗ್ಗೆ ಮಾಹಿತಿ ನೀಡಲಾಯಿತು.

ನೀರು, ನೈರ್ಮಲ್ಯ ಸಮಿತಿಯಿಂದ ಗ್ರಾ.ಪಂ. ವ್ಯಾಪ್ತಿಯ ನೀರಿನ ಮೂಲಗಳು, ಸಾರ್ವಜನಿಕ ಶೌಚಾಲಯ, ಘನ/ದ್ರವ
ತ್ಯಾಜ್ಯ ವಿಲೇವಾರಿ ಘಟಕಗಳನ್ನು ಪರಿಶೀಲಿಸಿ ನೀರು ಶೇಖರಣೆಯ ತೊಟ್ಟಿ, ನೀರಿನ ಟ್ಯಾಂಕ್‌ ಶುಚಿಗೊಳಿಸುವಂತೆ
ಮಾಹಿತಿ ನೀಡಲಾಯಿತು. ಶಾಲೆಗಳಲ್ಲಿ ಸ್ವಚ್ಛತಾ ದಿನದ ಆಚರಣೆ, ಪ್ಲಾಸ್ಟಿಕ್‌ ಜಾಗೃತಿ ಮಾಹಿತಿ ನೀಡಲಾಯಿತು. ವಿವಿಧ ಸ್ವಯಂ ಸೇವಾ-ಸಂಘ ಸಂಸ್ಥೆಯ ಸದಸ್ಯರನ್ನು ಒಟ್ಟಿಗೆ ಸೇರಿಸಿ ಅವರಿಗೆ ಸ್ವಚ್ಛತಾ ನೀತಿ , ಪ್ಲಾಸ್ಟಿಕ್‌ ನಿಷೇಧದ ಕುರಿತು ‘ನಮ್ಮ ತ್ಯಾಜ್ಯ ನಮ್ಮ ಹೊಣೆ’ ಎಂಬ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ಅಂಗನವಾಡಿಗಳಲ್ಲಿ ತಾಯಂದಿರ ಸಭೆ ನಡೆಸಿ ನೈರ್ಮಲ್ಯ, ಸ್ವಚ್ಛತೆ ಹಾಗೂ ಪ್ಲಾಸ್ಟಿಕ್‌ ಸಂಗ್ರಹಣೆಯ ಬಗ್ಗೆ ಮಾಹಿತಿ
ನೀಡಲಾಯಿತು. ಗ್ರಾ. ಪಂ. ಆಡಳಿತ ಮತ್ತು ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಭಾಗಿತ್ವದಲ್ಲಿ ರಸ್ತೆ ಬದಿ ಕಸಕಡ್ಡಿ, ಪ್ಲಾಸ್ಟಿಕ್‌ ಹೆಕ್ಕಿ ಸ್ವಚ್ಛಗೊಳಿಸಲಾಯಿತು.

ಸ್ವಚ್ಛತಾ ಪಾಕ್ಷಿಕ ಅವಧಿಯಲ್ಲಿ ಸ್ವಚ್ಚತೆ ಅನುಷ್ಠಾನಗೊಳಿಸಿದ 5 ಮನೆಗಳಿಗೆ ಮತ್ತು ಹೆಚ್ಚು ಕಸ ಸಂಗ್ರಹಿಸಿದವರಿಗೆ ಬಹುಮಾನ ನೀಡಲಾಯಿತು.

ಸಮಾರೋಪ ಕಾರ್ಯಕ್ರಮದಲ್ಲಿ ಸ್ವಚ್ಛತಾ ಸೇವೆಗಳನ್ನು ನಡೆಸುವ ಸ್ವಯಂ ಸೇವಾ ಸಂಸ್ಥೆಗಳನ್ನು, ಅಭಿಯಾನಕ್ಕೆ
ಸಹಕರಿಸಿದ ಪ್ರಮುಖರನ್ನು ಗೌರವಿಸಲಾಯಿತು. ಗ್ರಾಮಸ್ಥರಿಗೆ ತ್ಯಾಜ್ಯ ವಿಂಗಡನೆಯ ಮತ್ತು ವಿಲೇವಾರಿ ವಿಧಾನಗಳ ವಿಜ್ಞಾಪನಾ ಪತ್ರ ಮತ್ತು ಬಟ್ಟೆ ಕೈಚೀಲ ವಿತರಿಸಲಾಯಿತು. ಕೊನೆಗೆ ಒಟ್ಟು ಸೇರಿಸಿದ ಕಸವನ್ನು ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಸಾಗಿಸಲಾಯಿತು.

ಮಾದರಿ ವಿಕಾಸ ಕೇಂದ್ರದ ಸಹಕಾರ
ಸ್ವಚ್ಛತಾ ಅಭಿಯಾನದ ಯಶಸ್ಸಿಗೆ ಮಾದರಿ ವಿಕಾಸ ಕೇಂದ್ರದ ಪ್ರೇರಕ ಅಬ್ದುಲ್‌ ರಹಿಮಾನ್‌ ಅವರ ಮುತುವರ್ಜಿ ಉತ್ತಮ ಕೆಲಸ ಮಾಡಿದೆ. ಸ್ವಚ್ಛತಾ ನೀತಿ ಅನುಷ್ಠಾನಕ್ಕೆ ಪಾಕ್ಷಿಕದ ಪ್ರತಿ ದಿನ ಯೋಜನೆ ಪ್ರಕಾರ ಕಾರ್ಯನಿರ್ವಹಿಸಿದ್ದು, ಗ್ರಾಮಸ್ಥರ ಅಭಿನಂದನೆಗೆ ಪಾತ್ರರಾಗಿದ್ದಾರೆ.

ವ್ಯವಸ್ಥಿತ ವಿಲೇವಾರಿಯ ಕೊರತೆ
ಜಿಲ್ಲೆಯ ವಿವಿಧೆಡೆ ತ್ಯಾಜ್ಯ ಸಂಸ್ಕರಣ ಘಟಕಗಳು ಇದ್ದರೂ ವ್ಯವಸ್ಥಿತ ವಿಲೇವಾರಿ ಇಲ್ಲದಿದ್ದರೆ ಸ್ವಚ್ಛತೆಯ ಕಲ್ಪನೆ ಸಾಕಾರವಾಗುವುದಿಲ್ಲ. ಸ್ವಚ್ಛತಾ ನೀತಿ ಎಂಬುದು ದೈನಂದಿನ ಚಟುವಟಿಕೆಯಂತೆ ಜೀವನದ ಭಾಗವಾಗಿ ಎಲ್ಲರೂ ಪಾಲಿಸಿದಲ್ಲಿ ಮಾತ್ರ ಯಶಸ್ಸು ಕಾಣಲು ಸಾಧ್ಯ. ಸ್ವಚ್ಛತಾ ಅಭಿಯಾನದಲ್ಲಿ ಇರ್ವತ್ತೂರು ಗ್ರಾ.ಪಂ. ಜಿಲ್ಲೆಯಲ್ಲಿ
ಮುಂಚೂಣಿಯಲ್ಲಿದೆ.
ಮಂಜುಳಾ, ಸ್ವಚ್ಛತಾ ಸಂಯೋಜಕಿ, ದ.ಕ. ಜಿ.ಪಂ.

ಜಿಲ್ಲೆಗೆ ಮಾದರಿ
ನಿರಂತರ 15 ದಿನಗಳ ಕಾಲ ಸ್ವಚ್ಛತಾ ಆಂದೋಲನ ನಡೆಸಿ ಗ್ರಾಮ ಸ್ವಚ್ಛತೆ ನಡೆಸಿದ ಇರ್ವತ್ತೂರು ಗ್ರಾಮ ಪಂಚಾಯತ್‌ ಜಿಲ್ಲೆಗೆ ಮಾದರಿಯಾಗಿದೆ.
ಎಂ. ತುಂಗಪ್ಪ ಬಂಗೇರ,
 ಜಿ.ಪಂ.ಸದಸ್ಯರು

ರತ್ನದೇವ್‌ ಪುಂಜಾಲಕಟ್ಟೆ 

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.