ಐಸಿಸ್‌ ಉಗ್ರ ಭೀತಿ: ಕರಾವಳಿ ಕಟ್ಟೆಚ್ಚರ


Team Udayavani, May 27, 2019, 6:06 AM IST

alert

ಮಂಗಳೂರು/ಕಾಸರಗೋಡು/ಕುಂದಾಪುರ: ಐಸಿಸ್‌ ಉಗ್ರರು ಶ್ರೀಲಂಕಾದಿಂದ ಲಕ್ಷ ದ್ವೀಪಕ್ಕೆ ಹೊರಟಿದ್ದಾರೆ ಎಂಬ ಬೇಹು ಮಾಹಿತಿಯ ಹಿನ್ನೆಲೆಯಲ್ಲಿ ಕೇರಳ ಮತ್ತು ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಕೇರಳ ಕರಾವಳಿಯಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ. ಸಮುದ್ರದಲ್ಲಿ ಲಕ್ಷದ್ವೀಪಕ್ಕೆ ಹೋಗುವ ಮಾರ್ಗದಲ್ಲಿ ಈ ಉಗ್ರರು ಕರ್ನಾಟಕಕ್ಕೆ ನುಸುಳಬಹುದೇ ಎಂಬ ಗುಮಾನಿಯ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಪೊಲೀಸರು ಕಣ್ಗಾವಲು ಇರಿಸಿದ್ದಾರೆ.

ಶ್ರೀಲಂಕಾದಲ್ಲಿ ಐಸಿಸ್‌ ಉಗ್ರರ ದಾಳಿ ಘಟನೆ ಸಂಭವಿಸಿದಂದಿನಿಂದ ಭಾರತದ ಪಶ್ಚಿಮ ಕರಾವಳಿ ಉದ್ದಕ್ಕೂ ಪೊಲೀಸರು, ಕೋಸ್ಟ್‌ ಗಾರ್ಡ್‌, ನೌಕಾ ಪಡೆಯವರು ಕಣ್ಗಾವಲು ಇರಿಸಿದ್ದಾರೆ. ರಾಜ್ಯದ ಕರಾವಳಿ ಕಾವಲು ಪೊಲೀಸರು ಕರಾವಳಿ ತೀರದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಮೀನುಗಾರರಿಗೂ ಸಂಶಯಾಸ್ಪದ ಬೋಟುಗಳು ಕಂಡು ಬಂದರೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ನೌಕಾಪಡೆ ಸಜ್ಜು: ವಾರಿಯರ್‌

ಕಾಸರಗೋಡು: ಬೇಹುಗಾರಿಕೆ ಸಂಸ್ಥೆಗಳ ವರದಿಯ ಹಿನ್ನೆಲೆಯಲ್ಲಿ ಕೇರಳ, ಕರ್ನಾಟಕ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಆಕ್ರಮಣವನ್ನು ಎದುರಿಸಲು ನೌಕಾ ಪಡೆ ಸಿದ್ಧವಾಗಿದೆ ಎಂದು ನೌಕಾ ಪಡೆಯ ರಕ್ಷಣಾ ವಕ್ತಾರ ಕಮಾಂಡರ್‌ ಶ್ರೀಧರ್‌ ವಾರಿಯರ್‌ ಹೇಳಿದ್ದಾರೆ.

ಉಗ್ರರು ಬಿಳಿ ಬಣ್ಣದ ದೋಣಿಯಲ್ಲಿ ಸಾಗುತ್ತಿದ್ದಾರೆ ಎಂದು ಬೇಹು ಮಾಹಿತಿಯಿದ್ದು, ಕರಾವಳಿ ಪೊಲೀಸ್‌ ಠಾಣೆಗಳು, ಕೋಸ್ಟಲ್ ಗಾರ್ಡ್‌, ನೌಕಾಪಡೆ ಕಟ್ಟುನಿಟ್ಟಿನ ಕಣ್ಗಾವಲು ಮತ್ತು ಪಹರೆಯನ್ನು ತೀವ್ರಗೊಳಿಸಿದೆ. ಕರಾವಳಿ ಪ್ರದೇಶಗಳಲ್ಲಿನ ಅಸಹಜ ಚಟುವಟಿಕೆಗಳ ಮೇಲೆ ಕಣ್ಣಿಡುವಂತೆ ಮೀನುಗಾರರ ಸಮಿತಿಗಳಿಗೆ ಸೂಚನೆ ನೀಡಲಾಗಿದೆ.

ಕರಾವಳಿ ಪ್ರದೇಶದ ಎಲ್ಲ ಸಮುದ್ರ ತೀರ ಪೊಲೀಸ್‌ ಠಾಣೆ ಗಳನ್ನು ಜಾಗೃತಗೊಳಿಸಲಾಗಿದೆ. ಕೇರಳ ಕರಾವಳಿಯ ಮೂಲಕ ಉಗ್ರರು ದಾಳಿ ಸಂಚು ಹೂಡಿದ್ದಾರೆಂದು ಬೇಹು ಗಾರಿಕೆ ಸಂಸ್ಥೆಗಳು ವರದಿ ಮಾಡಿವೆ.

ಕೊಚ್ಚಿಯ ದಕ್ಷಿಣ ನೌಕಾ ಪಡೆಯ ಜಂಟಿ ಆಪರೇಶನ್‌ ಸೆಂಟರ್‌ನಲ್ಲಿ ಸಂಭಾವ್ಯ ಉಗ್ರ ದಾಳಿಯನ್ನು ತಡೆಯಲು ಸಜ್ಜುಗೊಳಿಸಲಾಗಿದೆ. ನೌಕಾಪಡೆ, ಕೋಸ್ಟ್‌ಗಾರ್ಡ್‌ ಕಟ್ಟೆಚ್ಚರ ವಹಿಸಿದ್ದು, ಶಂಕಿತ ದೋಣಿಗಳನ್ನು ತಪಾಸಣೆ ನಡೆಸುತ್ತಿವೆ. ಕೋಸ್ಟಲ್ ಪೊಲೀಸ್‌ ಕರಾವಳಿ ಪ್ರದೇಶಗಳಲ್ಲಿ ತಪಾಸಣೆ ಬಿಗುಗೊಳಿಸಿದೆ.

ಗಂಗೊಳ್ಳಿ ಭಾಗದಲ್ಲಿಯೂ ಕಟ್ಟೆಚ್ಚರ

ಕುಂದಾಪುರ: ದ್ವೀಪ ರಾಷ್ಟ್ರ ಶ್ರೀಲಂಕಾದಿಂದ 15 ಮಂದಿ ಶಂಕಿತ ಐಸಿಸ್‌ ಉಗ್ರರು ಕೇರಳ ಕರಾವಳಿಯತ್ತ ನುಸುಳಿದಿದ್ದಾರೆ ಎನ್ನುವ ಕೇಂದ್ರ ಗುಪ್ತಚರ ಇಲಾಖೆಯ ಸಂದೇಶದ ಹಿನ್ನೆಲೆಯಲ್ಲಿ ಗಂಗೊಳ್ಳಿ ಕರಾವಳಿಯಲ್ಲಿಯೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಕರಾವಳಿ ನಿಯಂತ್ರಣ ಪೊಲೀಸರು, ಸಾಗರ ರಕ್ಷಕ್‌ ದಳ ಮತ್ತು ಕರಾವಳಿ ಕಾವಲು ಪಡೆ ಪೊಲೀಸರ ಮೂರು ಜಂಟಿ ತಂಡಗಳಿಂದ ಗಂಗೊಳ್ಳಿ ಸುತ್ತಮುತ್ತ ಕರಾವಳಿ ಭಾಗದಲ್ಲಿ ಬಿಗಿ ಭದ್ರತೆ, ನಿಗಾ ವಹಿಸಲಾಗಿದೆ. ಗಂಗೊಳ್ಳಿಯ ಕರಾವಳಿ ಕಾವಲು ಪಡೆಯ ಪೊಲೀಸರು ಒಂದು ಗಸ್ತು ಬೋಟ್‌ನಲ್ಲಿ ದಿನಕ್ಕೆ 5 ಗಂಟೆ ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದಾರೆ. ಇದಲ್ಲದೆ ಮೀನುಗಾರಿಕೆ ದೋಣಿಗಳು, ಬೋಟುಗಳು ಮೀನುಗಾರಿಕೆ ಮುಗಿಸಿ ಬರುವ ಎಲ್ಲ ಪಾಯಿಂಟ್‌ಗಳಲ್ಲಿಯೂ ಈ ಮೂರು ತಂಡದ ಶಸ್ತ್ರಸಜ್ಜಿತ ಪೊಲೀಸರನ್ನು ನಿಲ್ಲಿಸಲಾಗಿದೆ. ಇದರ ಜತೆಗೆ ಕೆಲವು ಪ್ರಮುಖ ಸ್ಥಳಗಳಲ್ಲಿಯೂ ಸೂಕ್ತ ಭದ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಈ ಬಗ್ಗೆ ಯಾವುದೇ ರೀತಿಯಾಗಿ ಆತಂಕ ಪಡಬೇಕಾಗಿಲ್ಲ ಎಂದು ಎಂದು ಕರಾವಳಿ ಕಾವಲು ಪಡೆಯ ಪೊಲೀಸರು ‘ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.