ಭಕ್ತರು ಪ್ರವಾಸವನ್ನು ಮುಂದೂಡಿದರೆ ಉತ್ತಮ
ಶ್ರೀ ಕ್ಷೇತ್ರ ಧರ್ಮಸ್ಥಳ, ಕೊಲ್ಲೂರು ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ನೀರಿನ ಕೊರತೆ
Team Udayavani, May 18, 2019, 6:00 AM IST
ಬೆಳ್ತಂಗಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರಗಾಲದ ಬಿಸಿ ಧಾರ್ಮಿಕ ಕ್ಷೇತ್ರಗಳಿಗೂ ತಟ್ಟಿದ್ದು, ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಅಭಾವದಿಂದಾಗಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಮನವಿ ಮಾಡಲಾಗಿದೆ.
ಧರ್ಮಸ್ಥಳದ ಮೂಲಕ ಹರಿಯುತ್ತಿರುವ ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತೀರಾ ಕಡಿಮೆಯಾಗಿರುವ ಕಾರಣ ಕ್ಷೇತ್ರದಲ್ಲೂ ದಿನದಿಂದ ದಿನಕ್ಕೆ ನೀರಿನ ಅಭಾವ ಹೆಚ್ಚಾಗುತ್ತಿದೆ ಎಂದು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ದ.ಕ. ಜಿಲ್ಲಾಡಳಿತದ ಮೂಲಕ ತಮ್ಮ ಕ್ಷೇತ್ರದರ್ಶನ ಕೆಲದಿನಗಳ ಕಾಲ ಮುಂದೂಡುವಂತೆ ಭಕ್ತರಲ್ಲಿ ವಿನಂತಿಸಿದ್ದಾರೆ.
ಪ್ರಸ್ತುತ ಶಾಲಾ-ಕಾಲೇಜುಗಳ ರಜಾ ಅವಧಿಯಾಗಿರುವುದರಿಂದ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ನೀರಿನ ಆವಶ್ಯಕತೆಯೂ ಹೆಚ್ಚಿರುತ್ತದೆ. ಸಾಮಾನ್ಯವಾಗಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರು ನೇತ್ರಾವತಿ ಸ್ನಾನಘಟ್ಟದಲ್ಲೇ ಸ್ನಾನ ಮಾಡುತ್ತಾರೆ. ಆದರೆ ಈಗ ನದಿಯಲ್ಲಿ ನೀರಿಲ್ಲದೆ ಅಲ್ಲಿ ಸ್ನಾನ ಮಾಡುವುದು ಕಷ್ಟವಾಗಿದೆ.
ಹೀಗಾಗಿ ಕ್ಷೇತ್ರದ ವಸತಿಗೃಹಗಳಲ್ಲೇ ಸ್ನಾನವನ್ನು ಮಾಡುತ್ತಿದ್ದಾರೆ. ಹೀಗಾಗಿ ಅಷ್ಟೊಂದು ಪ್ರಮಾಣದ ನೀರನ್ನು ಪೂರೈಸಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಈ ರೀತಿಯ ಮನವಿಯನ್ನು ಮಾಡಲಾಗಿದೆ. ಕ್ಷೇತ್ರಕ್ಕೆ ದೂರ ದೂರುಗಳಿಂದ ಹೆಚ್ಚಿನ ಭಕ್ತರು ಆಗಮಿಸುವುದರಿಂದ ಅವರು ತಾಸುಗಟ್ಟಲೆ ಪ್ರಯಾಣ ಮಾಡಿ ಬರುವುದರಿಂದ ಕ್ಷೇತ್ರದಲ್ಲಿ ಬಂದು ಸ್ನಾನ ಮಾಡುವುದು ಕೂಡ ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ನೀರಿಗೆ ತೊಂದರೆ ಕಂಡುಬಂದಿದೆ.
ಧರ್ಮಸ್ಥಳ ಕ್ಷೇತ್ರಕ್ಕೆ ನೇತ್ರಾವತಿ ನದಿಯೇ ನೀರಿನ ಮೂಲವಾಗಿದ್ದು, ಡ್ಯಾಮ್ ಮೂಲಕ ಓವರ್‌ಹೆಡ್ ಟ್ಯಾಂಕ್‌ಗೆ ನೀರನ್ನು ಪೂರೈಸಿ ಉಪಯೋಗಿಸಲಾಗುತ್ತಿದೆ. ಹೀಗಾಗಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾದರೆ ಪೂರೈಕೆ ಕಷ್ಟವಾಗಲಿದೆ.
ನದಿಯಲ್ಲಿ ನೀರು ಕಡಿಮೆಯಾಗುತ್ತಿದ್ದು, ಭಕ್ತರ ಸಂಖ್ಯೆ ಹೆಚ್ಚಳವಾದಾಗ ತೊಂದರೆಯಾಗುವ ಸಾಧ್ಯತೆ ಇರುತ್ತದೆ. ಇಲ್ಲಿಯವರೆಗೆ ಭಕ್ತರಿಗೆ ತೊಂದರೆಯಾಗದಂತೆ ಕ್ಷೇತ್ರದ ವತಿಯಿಂದ ಕ್ರಮಕೈಗೊಳ್ಳಲಾಗಿದ್ದು, ಮುಂದೆ ನೀರಿಲ್ಲದೆ ಭಕ್ತರಿಗೆ ತೊಂದರೆಯಾಗಬಾರದ ರೀತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮನವಿ ಮಾಡಲಾಗಿದೆ ಎಂದು ಕ್ಷೇತ್ರದ ಮೂಲಗಳು ತಿಳಿಸಿದೆ.
– ಎಚ್. ಹಾಲಪ್ಪ, ಕಾರ್ಯನಿರ್ವಹಣಾಧಿಕಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.