ಉಳಿದೆಡೆ ಪ್ರಜಾಪ್ರಭುತ್ವ ಇಲ್ಲವೇ? ಐವನ್ ಡಿ’ಸೋಜಾ ಪ್ರಶ್ನೆ
Team Udayavani, Mar 14, 2017, 11:51 AM IST
ಮಂಗಳೂರು: ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಹಾಗಾದರೆ ಉಳಿದೆಡೆಗಳಲ್ಲಿ ಪ್ರಜಾಪ್ರಭುತ್ವ ಇಲ್ಲವೋ ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ ಆಗ್ರಹಿಸಿದ್ದಾರೆ.
ಲಾಲ್‌ಬಾಗ್ ಮನಪಾ ಕಟ್ಟಡದಲ್ಲಿರುವ ತಮ್ಮ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಪ್ರಧಾನಿಯವರು ಇಂತಹ ಟ್ವೀಟ್ ಮಾಡಿರುವುದು ಯಾಕೆಂದು ಅರ್ಥವಾಗುತ್ತಿಲ್ಲ. ಪ್ರಜಾಪ್ರಭುತ್ವ ಗೆದ್ದಿರುವುದು ಎರಡು ಕಡೆಗಳಲ್ಲಿ ಮಾತ್ರವಾ? ಉಳಿದೆಡೆಗಳಲ್ಲಿ ಪ್ರಜಾಪ್ರಭುತ್ವ ಇಲ್ಲವೇ ಎಂದು ಅವರು ಪ್ರಶ್ನಿಸಿದರು.
ನಿಯಮಕ್ಕೆ ವಿರುದ್ಧ ಏಕೈಕ ಅತಿದೊಡ್ಡ ಪಕ್ಷವನ್ನು ಕರೆದು ಸರಕಾರ ರಚನೆ ಮಾಡಲು ಹೇಳುವುದು ನಿಯಮ. ಆದರೆ ಈಗಿನ ಪರಿಸ್ಥಿತಿ ಅದಕ್ಕೆ ವ್ಯತಿರಿಕ್ತವಾಗಿದೆ. ಗೋವಾದಲ್ಲಿ 17 ಸೀಟ್ ಗಳಿಸಿರುವ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ 13 ಸೀಟ್ ಗಳಿಸಿರುವ ಬಿಜೆಪಿಯನ್ನು ಕರೆದು ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವಂತಿದೆ ಎಂದರು.
ಮೋದಿ ಅಲೆ ಎಂದುಕೊಂಡು ಬಿಜೆಪಿಯವರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಹಾಗಾದರೆ ಅಲೆ ಬೀಸಿದ್ದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಗಳಲ್ಲಿ ಮಾತ್ರವಾ ಎಂದು ಪ್ರಶ್ನಿಸಿದ ಅವರು, ಇಂತಹ ಪದ ಪ್ರಯೋಗ ತಪ್ಪು ವ್ಯಾಖ್ಯಾನ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡರಾದ ಅನಿಲ್ ಕುದೊRàರಿಗುಡ್ಡೆ, ಶರೀಫ್ ದೇರಳಕಟ್ಟೆ, ಸೋನ್ಸ್, ಮುದಶ್ಶಿರ್ ಕುದ್ರೋಳಿ, ನಝೀರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.