ಜ. 5: ‘ಅಡ್ಡ ಬೋರು ಅರಿಯ ಬನ್ನಿ’ಸಂವಾದ
Team Udayavani, Jan 3, 2018, 4:22 PM IST
ಪುತ್ತೂರು: ನಗರದ ದರ್ಬೆ ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರಿ ಸಂಘದ ಸಭಾಭವನದಲ್ಲಿ ಜ. 5ರಂದು ಬೆಳಗ್ಗೆ 10 ಗಂಟೆಗೆ ‘ಅಡ್ಡಬೋರು ಅರಿಯ ಬನ್ನಿ’ ಸಂವಾದ ಕಾರ್ಯಕ್ರಮ ನಡೆಯಲಿದೆ.
ಅರೆಯಾಂತ್ರಿಕ ಅಡ್ಡಬೋರು ಕೊರೆಯುವ ತಂತಜ್ಞಾನ ರಾಜಸ್ಥಾನದಲ್ಲಿ ಎರಡು ದಶಕಗಳಿಂದ ಬಳಕೆಯಾಗುತ್ತಿದೆ. ಅಲ್ಲಿ ಬಾವಿಯೊಳಗಿಂದ 300 ಅಡಿ ದೂರದವರೆಗೂ ಕಿರು ಕೊಳವೆಬಾವಿ ಕೊರೆಯುವುದಿದೆ. ಗೋವಿಂದ ಭಾಯಿ ರಾಜಸ್ಥಾನದ ಹಿರಿಯ ಅಡ್ಡ ಬೋರು ತಂತ್ರಜ್ಞರಲ್ಲಿ ಒಬ್ಬರು. ಇವರು ಕೃಷಿಕರ ಮಾಧ್ಯಮ ಅಡಿಕೆ ಪತ್ರಿಕೆಯ ಆಹ್ವಾನದ ಮೇರೆಗೆ ಜಿಲ್ಲೆಗೆ ಆಗಮಿಸುತ್ತಿದ್ದು, ಈ ಸಂದರ್ಭ ‘ಅಡ್ಡಬೋರು ಅರಿಯಬನ್ನಿ’ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲೆಯಲ್ಲಿ ಹಿಂದೆ ಮಾನವಶಕ್ತಿಯಿಂದ ಅಡ್ಡಬೋರು ಕೊರೆಯುವ ವಿಟ್ಲ ಮಹಮ್ಮದ್ ಅವರ ತಂಡ ಇತ್ತು. ಅದೀಗ ಅಷ್ಟು ಸಕ್ರಿಯವಾಗಿಲ್ಲ. ಅಡ್ಡಬೋರು ಕೊರೆಯುವ ಯಂತ್ರದಿಂದ ಬಾವಿಯ ಒಳಗಡೆ ಮತ್ತು ಗುಡ್ಡಕ್ಕೆ ಅಡ್ಡವಾಗಿ ಸುಲಭವಾಗಿ ಕಿರು ಕೊಳವೆಬಾವಿ ತೋಡಬಹುದು. ಬಾವಿ, ಕೆರೆಗಳ ನೀರನ್ನು ಬತ್ತಿಸಿಯೂ ಕೊರೆತ ಸಾಧ್ಯ. ಗಟ್ಟಿಕಲ್ಲು ಸಿಗದಿದ್ದರೆ 100 ಅಡಿವರೆಗೂ ಕೊರೆಯುವ ವ್ಯವಸ್ಥೆ ಇದೆ.
ಲಂಬವಾಗಿ ಕೊರೆಯುವ ಕೊಳವೆಬಾವಿಗಿಂತ ಇದು ಸುಸ್ಥಿರ ಮತ್ತು ಮರುಪೂರಣ ಮಾಡುವುದು ಸುಲಭ. ಮಲೆನಾಡಿನ ಹಲವೆಡೆ ಈ ತಂತ್ರಜ್ಞಾನ ಬಳಸಿ ಅಡ್ಡ ಬೋರು ಕೊರೆಯುವುದರ ಜತೆಗೆ ಅದರ ಜಲಾನಯನ ಪ್ರದೇಶದಲ್ಲಿ
ಮಳೆ ನೀರಿಂಗಿಸಿ ಕೊಟ್ಟರೆ ಜಲ ಲಭ್ಯತೆ ಸುಧಾರಿಸಲು ಸಾಧ್ಯವಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಚಿ ಶ್ರೀನಿವಾಸ ಆಚಾರ್ ವಹಿಸಲಿದ್ದಾರೆ. ಈ ತಂತ್ರಜ್ಞಾನದ ಸಾಧ್ಯಾಸಾಧ್ಯತೆಗಳ ಬಗ್ಗೆ ಸಂವಾದ ನಡೆಯಲಿದೆ. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ, ಫಾರ್ಮರ್ ಫಸ್ಟ್ ಟ್ರಸ್ಟ್, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ಗಿಡ ಗೆಳೆತನ ಸಂಘ ‘ಸಮೃದ್ಧಿ’, ಅರೆಕಾನಟ್ ವಾಟ್ಸ್‌ಆ್ಯಪ್ ಹಾಗೂ ಫೇಸ್ ಬುಕ್ ಬಳಗ ಮುಂತಾದ ಸಂಸ್ಥೆಗಳ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.