ಹಿಂಜಾವೇ ಕಾರಂತ್ ಬಂಧನ;ಉದ್ವಿಗ್ನ ಸ್ಥಿತಿ;ತಡರಾತ್ರಿಯೇ ಜಾಮೀನು !
Team Udayavani, Sep 30, 2017, 8:34 AM IST
ಪುತ್ತೂರು: ಪಿಎಸ್ಐ ಅಬ್ದುಲ್ ಖಾದರ್ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತ್ ಅವರನ್ನು ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಬಂಧಿಸಿ,ತಡರಾತ್ರಿ ಜಾಮೀನು ಸಿಕ್ಕಿದ ಕೂಡಲೇ ಬಿಡುಗಡೆ ಮಾಡಲಾಗಿದೆ .
ಬಂಧನದ ಸುದ್ದಿ ಹೊರಬೀಳುತ್ತಿದ್ದಂತೆ ಪುತ್ತೂರಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು . ಕೆಲವೆಡೆ ಕಲ್ಲು ತೂರಾಟ ನಡೆದಿತ್ತು. ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.
ರಾತ್ರಿ ಪುತ್ತೂರು ಠಾಣೆಗೆ ಕರೆತಂದು, ಪುತ್ತೂರು ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಕರೆದೊಯ್ದು, ಹಾಜರು ಪಡಿಸಲಾಯಿತು. ಕಾರಂತ್ ಪರ ವಕೀಲರ ಜಾಮೀನು ಅರ್ಜಿ ಮಾನ್ಯ ಮಾಡಿ ರಾತ್ರಿ 1.30 ರ ವೇಳೆಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದರು.ಇದರಿಂದಾಗಿ ಉದ್ವಿಗ್ನ ಸ್ಥಿತಿ ತಿಳಿಯಾಯಿತು.
ಬಂಧನವಾದ ಕೂಡಲೇ ಆಕ್ರೋಶ ಗೊಂಡಿದ್ದ ಹಿಂದೂ ಪರ ಸಂಘಟನೆಗಳು ಶನಿವಾರ ಪುತ್ತೂರು ಬಂದ್ ಗೆ ಕರೆ ನೀಡಿದ್ದರು. ನೂರಾರು ಕಾರ್ಯಕರ್ತರು ಠಾಣೆಯ ಮುಂದೆ ಜಮಾವಣೆ ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.