ಜಗದೀಶ್ ಕಾರಂತಗೆ ಜಾಮೀನು: ಕಾರ್ಯಕರ್ತರ ಸಂಭ್ರಮಾಚರಣೆ
Team Udayavani, Oct 8, 2017, 10:07 AM IST
ಪುತ್ತೂರು: ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಮತ್ತು ಅವಹೇಳನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ
ಷರತ್ತುಬದ್ಧ ಮಧ್ಯಾಂತರ ಜಾಮೀನು ಪಡೆದು ಬಿಡುಗಡೆಗೊಂಡಿದ್ದ ಹಿಂಜಾವೇ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ ಅವರಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಸಂಘಟನೆಗಳ ಕಾರ್ಯಕರ್ತರು ಸಂಭ್ರಮಾಚರಿಸಿದರು.
ಪೂರ್ಣಾವಧಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ಕಾರಂತರ ಪರ ವಕೀಲರ ವಾದವನ್ನು ಮನ್ನಿಸಿದ ಪುತ್ತೂರು ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಹೊರ ಭಾಗದಲ್ಲಿ ಸಂಘಟನೆಗಳ ಮುಖಂಡರು ಕಾರಂತರಿಗೆ ಹಾರ ಹಾಕಿ ಸಂಭ್ರಮಾಚರಣೆ ನಡೆಸಿದರು.
ಎಸ್.ಐ. ವಿರುದ್ಧ ಕ್ರಮಕ್ಕೆ ಆಗ್ರಹ
ಮಾತನಾಡಿದ ಜಗದೀಶ್ ಕಾರಂತ ಅವರು, ಇದು ಸತ್ಯಕ್ಕೆ ಸಂದ ಜಯವಾಗಿದ್ದು, ಸರಕಾರ ಪೊಲೀಸ್ ಇಲಾಖೆಯ ಮೂಲಕ ದುರುದ್ದೇಶದಿಂದ ಮಾಡಿದಂತಹ ಪ್ರಕರಣವಾಗಿದೆ. ಹಿಂದೂ ಸಂಘಟನೆಗಳನ್ನು ಮಟ್ಟ ಹಾಕುವ ಪ್ರಯತ್ನವನ್ನು ಪೊಲೀಸ್ ಇಲಾಖೆಯ ಮೂಲಕ ಸರಕಾರ ನಡೆಸುತ್ತಿದೆ. ಮತೀಯ ನೆಲೆಯಲ್ಲಿ ಗುರುತಿಸಿಕೊಂಡಿರುವ ಪುತ್ತೂರು ಗ್ರಾಮಾಂತರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಇಲಾಖೆಯ ಹಿರಿಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ, ಮುರಳೀಕೃಷ್ಣ ಹಸಂತಡ್ಕ, ರವಿರಾಜ್ ಶೆಟ್ಟಿ ಕಡಬ, ಅಜಿತ್ ರೈ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.