Jaljeevan Mission; ವಾರದೊಳಗೆ ವರದಿ ನೀಡಿ : ಸಚಿವ ದಿನೇಶ್‌ ಗುಂಡೂರಾವ್‌

ದ.ಕ. ಜಿ.ಪಂ. ತ್ತೈಮಾಸಿಕ ಕೆಡಿಪಿ ಸಭೆ

Team Udayavani, Jan 12, 2024, 11:30 PM IST

1-adasdsad

ಮಂಗಳೂರು: ಜಿಲ್ಲೆಯಲ್ಲಿ ಜಲಜೀವನ್‌ ಮಿಷನ್‌ ಯೋಜನೆಯಡಿ ನಡೆದಿರುವ ಕಾಮಗಾರಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಪೂರ್ಣಗೊಂಡಿರುವ ಕೆಲಸಗಳು, ಎಷ್ಟು ಕಡೆಗಳಲ್ಲಿ ಮನೆಗಳಿಗೆ ನೀರು ತಲುಪಿದೆ ಎಂಬ ಮಾಹಿತಿ ಸಹಿತ ಸಮಗ್ರ ವರದಿಯನ್ನು ಒಂದು ವಾರದೊಳಗೆ ನೀಡುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ನಿರ್ದೇಶನವಿತ್ತಿದ್ದಾರೆ. ದ.ಕ. ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ತ್ತೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿದ ಸಚಿವರು, ಸಭೆಯಲ್ಲಿ ಹಲವರಿಂದ ಮಿಷನ್‌ ಪ್ರಗತಿಯ ಬಗ್ಗೆ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವರದಿ ನೀಡುವಂತೆ ಗ್ರಾಮೀಣ ನೀರು ಪೂರೈಕೆ ಉಪನಿರ್ದೇಶಕರಿಗೆ ಈ ಸೂಚನೆ ನೀಡಿದ್ದಾರೆ.

ಕೆಡಿಪಿ ನಾಮನಿರ್ದೇಶಿತ ಸದಸ್ಯ ಮೆಲ್ವಿನ್‌ ಡಿ’ಸೋಜಾ ಮಾತನಾಡಿ, ಅಡ್ಯಾರ್‌ ಮತ್ತು ನೀರುಮಾರ್ಗದಲ್ಲಿ ಈ ಯೋಜನೆಯಡಿ ಮಾಡಲಾಗಿರುವ ಕೆಲಸಗಳು ತೀರಾ ಕಳಪೆ. ಓವರ್‌ಹೆಡ್‌ ಟ್ಯಾಂಕ್‌ ಅಂದಾಜುಪಟ್ಟಿಯಂತೆ ಮಾಡಲಾಗಿಲ್ಲ. ಪೈಪ್‌ಲೈನ್‌ ಇರುವಲ್ಲಿಯೇ ಮತ್ತೆ ಜೋಡಣೆ ಮಾಡಲಾಗಿದ್ದು, ಇಲ್ಲದಿರುವಲ್ಲಿ ಸಂಪರ್ಕ ವ್ಯವಸ್ಥೆ ಮಾಡಿಲ್ಲ. ನೀರಿನ ಮೂಲವನ್ನೇ ಗುರುತಿಸಲಾಗಿಲ್ಲ ಎಂದರು. ಪರಿಷತ್‌ ಸದಸ್ಯ ಡಾ| ಮಂಜುನಾಥ ಭಂಡಾರಿ, ನೀರಿನ ಮೂಲವನ್ನೇ ಗುರುತಿಸದಿದ್ದರೆ ಕಾಮಗಾರಿ ಕೈಗೊಂಡು ಪ್ರಯೋಜನವೇನು ಎಂದು ಪ್ರಶ್ನಿಸಿದರು.

ಪ್ರಥಮ ಹಂತದಲ್ಲಿ ಪೂರ್ಣಗೊಂಡಿರುವ 458 ಕಾಮಗಾರಿಗಳಿಂದ ನೀರು ಪೂರೈಕೆ ಆರಂಭವಾಗಿದೆಯೇ ಎಂಬ ಸಚಿವರ ಪ್ರಶ್ನೆಗೆ ಅಧಿಕಾರಿಯಿಂದ ಸೂಕ್ತ ಉತ್ತರ ಬರಲಿಲ್ಲ. ಉದ್ದೇಶ ಈಡೇರದಿದ್ದರೆ ಈ ರೀತಿ ಕೋಟಿಗಟ್ಟಲೆ ವ್ಯಯಿಸಿ ಮಾಡಲಾಗುವ ಕಾಮಗಾರಿಯಿಂದ ಲಾಭವೇನು ಎಂದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ದಿಢೀರ್‌ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ಲೋಪ ಕಂಡುಬಂದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಮರಳು ಲಭ್ಯ
ದ.ಕ. ಜಿಲ್ಲೆಯಲ್ಲಿ ನಾನ್‌ ಸಿಆರ್‌ಝಡ್‌ನ‌ 29 ಬ್ಲಾಕ್‌ಗಳಲ್ಲಿ 40,000 ಮೆಟ್ರಿಕ್‌ ಟನ್‌ ಮರಳು ಲಭ್ಯವಿದೆ. ಸ್ಯಾಂಡ್‌ ಬಜಾರ್‌ ಆ್ಯಪ್‌ ಮೂಲಕ ಸಾರ್ವಜನಿಕರಿಗೆ ಸಾಕಷ್ಟು ಮರಳು ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೆ„ ಮುಗಿಲನ್‌ ಸ್ಪಷ್ಟಪಡಿಸಿದರು. ಸಿಆರ್‌ಝಡ್‌ನಿಂದ ಷರತ್ತಿನೊಂದಿಗೆ ಮರಳುಗಾರಿಕೆಗೆ ಎನ್‌ಜಿಟಿಯಿಂದ ಆದೇಶವಾಗಿದೆ. ಆದರೆ ವಿತರಣೆ ಮತ್ತು ವ್ಯಾಪಾರಕ್ಕೆ ಗಣಿ ಇಲಾಖೆಯಿಂದ ಸ್ಪಷ್ಟನೆ ನೀಡಬೇಕಾಗಿದೆ. ಅದಕ್ಕಾಗಿ 7 ಸದಸ್ಯರ ಸಮಿತಿ ಸಭೆ ಮಾಡಿ ನಿರ್ಧರಿಸಬೇಕಾಗಿದೆ. ಎಂದರು.
ಬೆಳ್ತಂಗಡಿ ವ್ಯಾಪ್ತಿಯಲ್ಲಿ ಸರಕಾರಿ ಕಾಮಗಾರಿ ಸೇರಿದಂತೆ ಸಾರ್ವಜನಿಕವಾಗಿ ಒಂದು ಹಿಡಿ ಮರಳು ಸಿಗುತ್ತಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯರಾದ ಹರೀಶ್‌ ಕುಮಾರ್‌, ಮಂಜುನಾಥ ಭಂಡಾರಿ ಆಕ್ಷೇಪಿಸಿದರೆ, ದುಪ್ಪಟ್ಟು ಬೆಲೆಗೆ ಅಕ್ರಮ ಮರಳು ಸಿಗುತ್ತದೆ ಎಂದು ವೇದವ್ಯಾಸ ಕಾಮತ್‌ ಆರೋಪಿಸಿದರು.

ಡ್ಯಾಂಗೆ ಹಲಗೆ ಇಲ್ಲ
ಈ ಬಾರಿ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇರುವ ನಡುವೆಯೇ ಕಿಂಡಿ ಅಣೆಕಟ್ಟುಗಳಲ್ಲಿ ಇನ್ನೂ ಸರಿಯಾಗಿ ಹಲಗೆ ಇಳಿಸುವ ಕೆಲಸ ನಡೆಯದಿರುವ ಬಗ್ಗೆ ಆಕ್ಷೇಪ ವ್ಯಕ್ತವಾಯಿತು. ಜಿಲ್ಲೆಯಲ್ಲಿ 447 ಕಿಂಡಿ ಅಣೆಕಟ್ಟುಗಳ ನಿರ್ಮಾಣವಾಗಿದ್ದು, 292ರ ನಿರ್ವಹಣೆಗೆ 3 ಕೋಟಿ ರೂ. ವೆಚ್ಚದ ಅಂದಾಜುಪಟ್ಟಿ ತಯಾರಿಸಿ ಸಲ್ಲಿಸಲಾಗಿದೆ ಎಂದು ಅಧಿಕಾರಿ ಉತ್ತರಿಸಿದರು.

ಮಂಗಳೂರು, ಧರ್ಮಸ್ಥಳ ಪ್ಲಾಸ್ಟಿಕ್‌ ಮುಕ್ತ
ನಗರಗಳನ್ನು ಪ್ಲಾಸ್ಟಿಕ್‌ ಮುಕ್ತವಾಗಿಸುವ ಪೈಲಟ್‌ ಯೋಜನೆಗೆ ಮಂಗಳೂರು ಹಾಗೂ ಧರ್ಮಸ್ಥಳ ಆಯ್ಕೆಯಾಗಿವೆ. ಅವುಗಳನ್ನು ಮೊದಲು ಮಾದರಿಯಾಗಿಸಬೇಕು ಎಂದು ಸಚಿವ ದಿನೇಶ್‌ ಸೂಚಿಸಿದರು.

ಕೋಳಿ ಅಂಕ ವಿಚಾರ
ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕಗಳಿಗೆ ಅನುಮತಿಗಾಗಿ ಅಲೆದಾಡುವ ಸ್ಥಿತಿ ಇದೆ. ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಹರೀಶ್‌ ಪೂಂಜ ಆಗ್ರಹಿಸಿದರು. ಪ್ರತಿಕ್ರಿಯಿಸಿದ ಎಸ್‌ಪಿ ಸಿ.ಬಿ. ರಿಷ್ಯಂತ್‌ ಪ್ರತಿಕ್ರಿಯಿಸಿ, ಯಾವುದೇ ರೀತಿಯ ಕೋಳಿ ಅಂಕಕ್ಕೆ ಅನುಮತಿ ನೀಡುವ ಅಧಿಕಾರ ಪೊಲೀಸ್‌ ಇಲಾಖೆಗೆ ಇಲ್ಲ. ಆ ರೀತಿ ಅನುಮತಿಗಾಗಿ ಅಲೆದಾಡಿರುವ ದಾಖಲೆಗಳಿದ್ದರೆ ನನ್ನ ಗಮನಕ್ಕೆ ತನ್ನಿ ಎಂದರು.
ಶಾಸಕ ಹರೀಶ್‌ ಪೂಂಜ, ವಿಧಾನ ಪರಿಷತ್‌ ಸದಸ್ಯರಾದ ಪ್ರತಾಪ್‌ ಸಿಂಹ ನಾಯಕ್‌, ಎಸ್‌.ಎಲ್‌. ಭೋಜೇಗೌಡ ವಿವಿಧ ವಿಚಾರಗಳ ಕುರಿತು ಮಾತನಾಡಿದರು. ಕೆಡಿಪಿ ನಾಮ ನಿರ್ದೇಶಿತ ಸದಸ್ಯರಾದ ಹಮೀದ್‌ ಕಿನ್ಯ, ಸುಜಯ ಕೃಷ್ಣ, ರಾಜಶೇಖರ ಜೈನ್‌ ಉಪಸ್ಥಿತರಿದ್ದರು.

ಶಾಸಕರ ವಾಗ್ವಾದ
ಹೊಸ ಸರಕಾರ ಬಂದ ಮೇಲೆ ಜಿಲ್ಲೆಯಲ್ಲಿ ಡಯಾಲಿಸಿಸ್‌ ಯಂತ್ರಗಳ ವ್ಯವಸ್ಥೆ ಉತ್ತಮವಾಗಿದೆ ಎಂದು ಶಾಸಕ ಅಶೋಕ್‌ ರೈ ಹೇಳಿದಾಗ ಕೆರಳಿದ ವೇದವ್ಯಾಸ ಕಾಮತ್‌, 8 ತಿಂಗಳಿನಿಂದ ರಾಜ್ಯದಲ್ಲೆಡೆ ಡಯಾಲಿಸಿಸ್‌ ಯಂತ್ರಗಳ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. 75 ವರ್ಷಗಳಲ್ಲಿ ವೆನಾÉಕ್‌ನಲ್ಲಿ ಸಮರ್ಪಕ ಬೆಡ್‌ ವ್ಯವಸ್ಥೆಯೇ ಇರಲಿಲ್ಲ. ಕಳೆದ ನಮ್ಮ ಅವಧಿಯಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದರು. ಶಾಸಕರ ನಡುವೆ ಮಾತಿನ ಚಕಮಕಿ ತಾರಕಕ್ಕೇರುತ್ತಿದ್ದಂತೆಯೇ ಸಚಿವರು ಮಧ್ಯಪ್ರವೇಶಿಸಿ, ಕೊರೊನಾ ಅವಧಿಯಲ್ಲಿ ಎಲ್ಲ ಕಡೆ ಆರೋಗ್ಯ ಇಲಾಖೆಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಡಯಾಲಿಸಿಸ್‌ ಯಂತ್ರಗಳಲ್ಲಿ ಹಿಂದಿನ ವ್ಯವಸ್ಥೆಯಲ್ಲಿ ಹಲವು ಕಾರಣಗಳಿಂದ ತೊಂದರೆ ಆಗಿದ್ದನ್ನು ಸರಿಪಡಿಸಿ ಹೊಸ ವ್ಯವಸ್ಥೆ ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.