ಜ.27: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಮಂಗಳೂರಿಗೆ
Team Udayavani, Jan 21, 2020, 7:15 AM IST
ಮಂಗಳೂರು: ಸಿಎಎ ಮತ್ತು ಎನ್ಆರ್ಸಿ ಪರವಾಗಿ ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜ. 27ರ ಮಧ್ಯಾಹ್ನ ಮಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮರ್ಥನಾ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾಗವಹಿಸುವ ನಿರೀಕ್ಷೆಯಿದೆ.
ಕೂಳೂರಿನ ಗೋಲ್ಡ್ಪಿಂಚ್ ಮೈದಾನದಲ್ಲಿ ಮಧ್ಯಾಹ್ನ 3ರ ಸುಮಾರಿಗೆ ಸಮಾವೇಶ ನಡೆಸಲು ಸಿದ್ಧತೆ ನಡೆಸಲಾಗಿದ್ದು, ಈ ಕುರಿತ ಅಂತಿಮ ತಯಾರಿ ಮಾಡಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಥವಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸಿ ಸಮಾವೇಶ ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸಿದ್ದು, ಈ ಪೈಕಿ ರಕ್ಷಣಾ ಸಚಿವರು ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ನೇತೃತ್ವದಲ್ಲಿ ಸಮರ್ಥನಾ ಸಮಾವೇಶವನ್ನು ಜ.19ರಂದು ಮಂಗಳೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿತ್ತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿತ್ತು. ಆದರೆ, ಗೃಹ ಸಚಿವರು ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ಮಂಗಳೂರು ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.