ಕಿನ್ನಿಗೋಳಿಯಲ್ಲಿ ಜನಪರ ಉತ್ಸವ
Team Udayavani, Dec 29, 2017, 12:38 PM IST
ಕಿನ್ನಿಗೋಳಿ: ಗ್ರಾಮೀಣ ಪ್ರದೇಶಗಳಲ್ಲಿ ಇರುವ ಜನಪದ ಕಲಾವಿದರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಅನೇಕ ಯೋಜನೆಗಳಿಂದ ಪ್ರೋತ್ಸಾಹಿಸುತ್ತಿದೆ. ಈ ಹಿನ್ನಲೆಯಲ್ಲಿ ಜನಪರ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಭಯಚಂದ್ರ ಜೈನ್ ಹೇಳಿದರು. ಅವರು. ಡಿ. 28 ರಂದು ಕಿನ್ನಿಗೋಳಿಯ ನೇಕಾರ ಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯ ಕಲಾವಿದರು ಸಂಘಟನೆಯ ಸಹಯೋಗದಲ್ಲಿ ವಿಶೇಷ ಘಟಕ ಯೋಜನೆಯಡಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ‘ಜನಪರ ಉತ್ಸವ’ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ರಾಜಕೀಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿದ್ದು, ತನ್ನ ಕ್ಷೇತ್ರದಲ್ಲಿ ವಿಧಾನ ಸಭೆಗೆ ಮಹಿಳಾ ಮೀಸಲಾತಿ ಬಂದರೆ ಸ್ವಾಗತಿಸುವುದಾಗಿ ಶಾಸಕರು ತಿಳಿಸಿದರು. ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಹಾಸ ರೈ, ಮಾತನಾಡಿ, 60ವರ್ಷ ಮೀರಿದ ಕಲಾವಿದರ ಆರೋಗ್ಯಕ್ಕೆ ಇಲಾಖೆ ಸಹಾಯ ಹಸ್ತ ನೀಡುತ್ತಿದ್ದು, ಅದನ್ನು ಸದುಪಯೋಗಿಸಿಕೊಳ್ಳಬೇಕೆಂದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿದರು. ಜಿ.ಪಂ. ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ತಾ.ಪಂ. ಸದಸ್ಯ ದಿವಾಕರ ಕರ್ಕೇರ, ರೋಟರಿ ಅಧ್ಯಕ್ಷೆ ಸೆವ್ರಿನ್ ಲೋಬೋ, ಕಿನ್ನಿಗೋಳಿ ಗ್ರಾ.ಪಂ. ಉಪಾಧ್ಯಕ್ಷೆ ಸುಜಾತಾ ಪೂಜಾರಿ, ಲಯನ್ಸ್ ಕ್ಲಬ್ ಅಧ್ಯಕ್ಷೆ ಶಾಂಭವಿ ಶೆಟ್ಟಿ, ತಾಳಿಪಾಡಿ ಪ್ರಾಥಮಿಕ ನೇಕಾರರ ಸಹಕಾರಿ ಸಂಘದ ಆನಂದ ಶೆಟ್ಟಿಗಾರ್, ರಾಜೇಶ್ ಕೆಂಚನಕೆರೆ ಮತ್ತಿತರರಿದ್ದರು. ಮಂಜುಳಾ ಶೆಟ್ಟಿ ನಿರೂಪಿಸಿದರು. ಇನ್ನೂರಕ್ಕೂ ಹೆಚ್ಚು ಕಲಾವಿದರು ಹಿಂದೂಸ್ತಾನಿ ಸಂಗೀತ, ಭರತನಾಟ್ಯ, ನಾಟಕ, ಸುಗಮ ಸಂಗೀತ, ಮಾದಿರ ಕುಣಿತ, ವೀರಗಾಸೆ, ತಿತ್ತಿರಿ ತಿರಿ ಮಜಲು ಜಾನಪದ ನೃತ್ಯ, ದಾಸರ ಪದಗಳು ಹೀಗೆ ಸಾಂಸ್ಕೃತಿಕ ವೈಭವವನ್ನು ಸಾರಿದರು.
ಮಹಿಳೆಯರಿಗೂ ಅವಕಾಶ ಸಿಗಲಿ
ಗ್ರಾಮೀಣ ಮಟ್ಟದಲ್ಲಿ ತೆರೆ, ಮರೆಯಲ್ಲಿ ಹಲವಾರು ಜನಪದ – ಜನಪರ ಕಲಾವಿದರಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರಿಗೂ ಇಲಾಖೆಯ ಮೂಲಕ ಅವಕಾಶ ಸಿಗಬೇಕು.
– ಕಸ್ತೂರಿ ಪಂಜ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.