‘ಜಪ್ಪಿನಮೊಗರಿನಿಂದ ಎನ್‌ಎಂಪಿಟಿಗೆ ರಸ್ತೆ’
Team Udayavani, Dec 22, 2017, 11:09 AM IST
ಮಲ್ಲಿಕಟ್ಟೆ: ಜಪ್ಪಿನಮೊಗರಿನ ನೇತ್ರಾವತಿ ಸೇತುವೆಯಿಂದ ನದಿ ಬದಿಯಲ್ಲಿ ಮಂಗಳೂರು ಹಳೆ ಬಂದರು, ಸುಲ್ತಾನ್ ಬತ್ತೇರಿ, ತಣ್ಣೀರುಬಾವಿಯಾಗಿ ನವಮಂಗಳೂರು ಬಂದರಿಗೆ ಪರ್ಯಾಯ ಹೆದ್ದಾರಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಜೆ.ಆರ್.ಲೋಬೋ ತಿಳಿಸಿದರು. ಅವರು ಮಲ್ಲಿಕಟ್ಟೆಯ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಈ ಯೋಜನೆಗೆ ಸುಮಾರು 1000 ಕೋ. ರೂಪಾಯಿ ಹೂಡಿಕೆಯಾಗಲಿದೆ ಎಂದು ಹೇಳಿದರು.
ಸುಲ್ತಾನ್ ಬತ್ತೇರಿಯಲ್ಲಿ ಸೇತುವೆಯನ್ನು ನಿರ್ಮಿಸಿ ತೂಗುಸೇತುವೆ ನಿರ್ಮಾಣವನ್ನು ಕೈಬಿಡಲು ಉದ್ದೇಶಿಸಲಾಗಿದೆ. ಸೇತುವೆ ನಿರ್ಮಾಣವಾದರೆ ತೂಗುಸೇತುವೆಯ ಅಗತ್ಯವಿರುವುದಿಲ್ಲ ಎಂದ ಅವರು ಈ ರಸ್ತೆಯನ್ನು ಬಹೂ ಪಯೋಗಿಸುವ ಉದ್ದೇಶವಿದೆ ಎಂದರು. ಇಲ್ಲಿ ರಸ್ತೆಯಾದರೆ ಮಂಗಳೂರು ಹಳೆ ಬಂದರಿನಲ್ಲಿ ಮೀನುಗಾರಿಕೆ ಪ್ರಗತಿ ಸಾಧ್ಯವಿದೆ, ಪ್ರವಾಸೋದ್ಯಮವೂ ಬೆಳೆಯಲು ಅವಕಾಶವಾಗುವುದು, ಜತೆಗೆ ವಾಹನಗಳ ದಟ್ಟಣೆಯೂ ಕಡಿಮೆಯಾಗಲಿದೆ ಎಂದು ಅವರು ವಿವರಿಸಿದರು.
ಈ ರಸ್ತೆಯ ಬಗ್ಗೆ ಸರ್ವೆ, ಅಂದಾಜು ಪಟ್ಟಿ ತಯಾರಿಸಲು ಕನ್ಸಲ್ಟೆಂಟ್ ನೇಮಕಮಾಡಿ 2.5 ಕೋಟಿ ರೂಪಾಯಿಯನ್ನು ಒದಗಿಸಲಾಗಿದ್ದು, ಆ ಕೆಲಸವನ್ನು ಕನ್ಸಲ್ಟೆನ್ಸಿಗೆ ಒಪ್ಪಿಸಲಾಗಿದೆ ಎಂದರು. ಇದೇ ರೀತಿಯಲ್ಲಿ ನೇತ್ರಾವತಿ ಸೇತುವೆಯಿಂದ ನದಿ ತೀರದಲ್ಲಿ ಕಣ್ಣೂರು ಮಸೀದಿವರೆಗೆ ಪರ್ಯಾಯ ರಸ್ತೆ ನಿರ್ಮಿಸಿ ಈ ಎರಡೂ ರಸ್ತೆಗಳೂ ಮಂಗಳೂರಿನ ಚಿತ್ರಣವನ್ನೇ ಬದಲಾಯಿಸುತ್ತವೆ ಎಂದು ಅವರು ಹೇಳಿದರು.
ಮಹಾನಗರಪಾಲಿಕೆಯ ಉಪ ಆಯುಕ್ತ (ಅಭಿವೃದ್ಧಿ) ಕೆ.ಎಸ್. ಲಿಂಗೇಗೌಡ, ಲೋಕೋಪಯೋಗಿ ಇಲಾಖೆ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.