ಜಯ- ವಿಜಯ ಜೋಡುಕರೆ ಕಂಬಳ 


Team Udayavani, Feb 12, 2018, 9:35 AM IST

12-Feb-1.jpg

ಮಹಾನಗರ: ಕೃಷಿ ಪ್ರಧಾನ ತುಳುನಾಡಿನಲ್ಲಿ ಕಂಬಳ ಅನ್ನುವುದು ಜಾನಪದ ಕ್ರೀಡೆ. ಆಧುನಿಕ ಯುಗದಲ್ಲಿ
ಜಾನಪದ ಕ್ರೀಡೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಅಧ್ಯಕ್ಷ ಗಣೇಶ್‌ ರಾವ್‌ ಎಸ್‌. ಹೇಳಿದರು.

ಮನ್ಕುತೋಟ ಗುತ್ತು ದಿ| ಜೆ. ಜಯ ಗಂಗಾಧರ ಶೆಟ್ಟಿ ಅವರ ಸ್ಮಾರಕಾರ್ಥ ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ ರವಿವಾರ ಆಯೋಜಿಸಿದ್ದ ಹೊನಲು ಬೆಳಕಿನ ಜಯ- ವಿಜಯ ಜೋಡುಕರೆ ಕಂಬಳದ ಉದ್ಘಾಟನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾನಪದ ಕ್ರೀಡೆ, ಸಂಸ್ಕೃತಿಗೆ ಅನೇಕ ವರ್ಷಗಳ ಇತಿಹಾಸವಿದೆ. ಕಂಬಳದಲ್ಲಿ ಕೋಣಗಳನ್ನು ಹಿಂಸಿಸುತ್ತಾರೆ ಎಂಬುವುದು ತಪ್ಪು ಭಾವನೆ. ಮಾಲಕರು ಕೋಣಗಳನ್ನು ಸ್ವಂತ ಮಕ್ಕಳಿಗಿಂತಲೂ ಹೆಚ್ಚಿನ ಪ್ರೀತಿಯಿಂದ ಸಾಕುತ್ತಾರೆ ಎಂದು ಅವರು ಹೇಳಿದರು.

ಆರನೇ ವರ್ಷದ ಕಂಬಳ
ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕಾರ್ಯದರ್ಶಿ ಎಂ. ಸುಂದರ ಶೆಟ್ಟಿ ಮಾತನಾಡಿ, ದಿ| ಜಯ ಗಂಗಾಧರ ಶೆಟ್ಟಿ ಅವರು ಕಂರ್ಬಿಸ್ಥಾನ ವೈದ್ಯನಾಥ ದೈವಸ್ಥಾನದ ಆಡಳಿತ ಮೊಕ್ತೇಸರರಾಗಿ 40 ವರ್ಷ ಸೇವೆ ಸಲ್ಲಿಸುವ ಮೂಲಕ ಕಂರ್ಬಿಸ್ಥಾನ ವೈದ್ಯನಾಥ ದೈವಸ್ಥಾನದ ಜೀರ್ಣೋದ್ಧಾರದ ರೂವಾರಿಯಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು. ಜಾತಿ, ಮತ, ಧರ್ಮ ಮರೆತು ಎಲ್ಲರೊಂದಿಗೆ ಒಡನಾಟ ಹೊಂದಿದ್ದ ಜಯ ಗಂಗಾಧರ ಶೆಟ್ಟಿ ಅವರ ಸ್ಮರಣಾರ್ಥ ಆರನೇ ವರ್ಷದ ಕಂಬಳ ಆಯೋಜಿಸಿದ್ದೇವೆ ಎಂದರು.

ಉದ್ಘಾಟನೆ
ಕಾರ್ಯಕ್ರಮವನ್ನು ದೇರೆಬೈಲ್‌ ವಿಟ್ಠಲ ದಾಸ್‌ ತಂತ್ರಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್‌, ಬಿಜೆಪಿ ಮುಖಂಡ ಬದ್ರಿನಾಥ ಕಾಮತ್‌, ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕಾರ್ಯದರ್ಶಿ ಎಂ. ಸುಂದರ ಶೆಟ್ಟಿ, ಕಂಕನಾಡಿ ಶ್ರೀ ಬೈದರ್ಕಳ ಕ್ಷೇತ್ರ ಗರೋಡಿ ಅಧ್ಯಕ್ಷ ಚಿತ್ತರಂಜನ್‌ ಗರೋಡಿ, ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಮಾಜಿ ಆಡಳಿತ ಮೊಕ್ತೇಸರ ಬಾಲಕೃಷ್ಣ ಕೊಟ್ಟಾರಿ, ಹರಿಯಪ್ಪ ಶೆಟ್ಟಿ, ರಾಮಕೃಷ್ಣ ಕಡೆಕಾರ್‌, ಭುಜಂಗ ಶೆಟ್ಟಿ, ಟಿ. ಪ್ರವೀಣ್‌ ಚಂದ್ರ ಆಳ್ವ, ಪಿ.ಆರ್‌. ಶೆಟ್ಟಿ ಸಹಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಮಕ್ಕಳಲ್ಲಿ ಉತ್ಸಾಹ
ಕಂಬಳವನ್ನು ವೀಕ್ಷಿಸಲು ಈ ಬಾರಿ ಸುತ್ತಮುತ್ತಲಿನ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ರವಿವಾರ ಶಾಲಾ ಕಾಲೇಜುಗಳಿಗೆ ರಜಾ ದಿನವಾದ್ದರಿಂದ ಮಕ್ಕಳ ಸಂಖ್ಯೆ ಹೆಚ್ಚಾಗಿತ್ತು. 

90 ಜೋಡಿ ಕೋಣಗಳು ಭಾಗಿ
ಜಪ್ಪಿನಮೊಗರಿನಲ್ಲಿ ನಡೆದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳದಲ್ಲಿ 90 ಜೋಡಿ ಕೋಣಗಳು ಭಾಗವಹಿಸಿದ್ದವು.

ಟಾಪ್ ನ್ಯೂಸ್

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

2

Mulki: ವ್ಯಕ್ತಿ ನಾಪತ್ತೆ; ಸೂಚನೆ; ದೂರು ದಾಖಲು

missing

Mangaluru: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನಾಪತ್ತೆ

15

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.