ಗುಣಮಟ್ಟದ ಶಿಕ್ಷಣದ ಜತೆಗೆ ಕೌಶಲ ತರಬೇತಿ: ಡಾ| ಸಿ.ಎನ್‌. ಅಶ್ವತ್ಥನಾರಾಯಣ


Team Udayavani, Mar 4, 2022, 6:38 AM IST

Untitled-1

ಮಂಗಳೂರು: ಗುಣಮಟ್ಟದ ಶಿಕ್ಷಣದ ಜತೆಗೆ ಕೌಶಲ ತರಬೇತಿ ದೊರೆತಾಗ ಉದ್ಯೋಗವೂ ಲಭಿಸಿ ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆ ಬಲವರ್ಧನೆಯಾಗುತ್ತದೆ ಎಂದು ಉನ್ನತ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.

ಅವರು ಗುರುವಾರ ಇಲ್ಲಿನ ಕೊಟ್ಟಾರ ಚೌಕಿ ಬಳಿಯ ಎ.ಜೆ.ಎಂಜಿನಿಯರಿಂಗ್‌ ಕಾಲೇಜಿನ ಆವರಣದಲ್ಲಿ ರಾಜ್ಯ ಕೌಶಲಾಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಲಾಗಿದ್ದ ಉದ್ಯೋಗ ಮೇಳ ಮತ್ತು ಅಂತಾರಾಷ್ಟ್ರೀಯ ವಲಸೆ ಕೇಂದ್ರದ ಮಂಗಳೂರು ಪ್ರಾದೇಶಿಕ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ವಿಶ್ವದ ಜತೆ ಸ್ಪರ್ಧಿಸುತ್ತಿರುವ ನಾವು ಯಶಸ್ಸು ಕಾಣಬೇಕಾದರೆ ಶಿಕ್ಷಣವನ್ನು ಕೌಶಲಭರಿತವಾಗಿ ನೀಡಬೇಕಾಗಿದೆ. ಪ್ರತಿಯೊಬ್ಬರನ್ನೂ ಉತ್ಪಾದಕರನ್ನಾಗಿಸ ಬೇಕು. ಉದ್ಯೋಗಕ್ಕೆ ಪೂರಕವಾಗಿ ವಿದ್ಯಾರ್ಥಿಗಳನ್ನು ರೂಪಿಸ ಬೇಕಾದರೆ ಕೌಶಲ ಅಭಿವೃದ್ಧಿ ತರಬೇತಿ ಶಾಲಾ ಕಾಲೇಜು ಹಂತದಲ್ಲೇ ನೀಡುವ ಪ್ರಯತ್ನ ಆಗಬೇಕಾಗಿದೆ; ರಾಷ್ಟ್ರೀಯ ಶಿಕ್ಷಣ ನೀತಿ ಇದಕ್ಕೆ ಪೂರಕವಾಗಿದೆ ಎಂದರು.

ಬೆಳಗಾವಿ ಮತ್ತು ಕಲಬುರಗಿಯಲ್ಲಿ ಇಂತಹ ಉದ್ಯೋಗ ಮೇಳಗಳು ನಡೆದಿದ್ದು, ಈ ಮೂಲಕ ಈಗಾಗಲೇ 10,000ಕ್ಕೂ ಹೆಚ್ಚು ಯುವಜನರಿಗೆ ಉದ್ಯೋಗ ದೊರಕಿಸಲಾಗಿದೆ. ಸೂಕ್ತ ವಿದ್ಯಾರ್ಹತೆ ಇದ್ದರೂ ಉದ್ಯೋಗ ದೊರೆಯದೆ ಇದ್ದರೆ ಅಂಥವ ರಲ್ಲಿ ಇರುವ ಕೊರತೆ ಏನೆಂಬುದನ್ನು ತಿಳಿದು  ಅವರಿಗೆ ಅಗತ್ಯ ತರಬೇತಿ ನೀಡಿ ಸಂದರ್ಶನಕ್ಕೆ ಅವಕಾಶ ಕಲ್ಪಿಸುವ ವ್ಯವಸ್ಥೆಯನ್ನೂ ಮಾಡ ಲಾಗುವುದು ಎಂದು ತಿಳಿಸಿದರು.

ಸ್ಕಿಲ್‌ ಹಬ್‌ :

ಯುವಜನರಿಗೆ ಉದ್ಯೋಗಾವಕಾಶಕ್ಕೆ ಸಂಬಂಧಪಟ್ಟ ಎಲ್ಲ ಮಾಹಿತಿಗಳೂ ಸುಲಭ ವಾಗಿ ಸಿಗಬೇಕೆನ್ನುವ ಉದ್ದೇಶದಿಂದ ರಾಮನಗರದಲ್ಲಿ “ಸ್ಕಿಲ್‌ ಹಬ್‌’ ಪ್ರಾರಂಭಿಸಲಾಗುತ್ತಿದೆ. ಅಲ್ಲಿ ಕೌನ್ಸೆಲಿಂಗ್‌ ಮೂಲಕ ಕೌಶಲ ತರಬೇತಿ ಮತ್ತು ಉದ್ಯಮಶೀಲತೆಗೆ ಸಂಬಂಧಿಸಿದ ಮಾರ್ಗದರ್ಶನ ಹಾಗೂ ಸಾಫ್ಟ್ ಸ್ಕಿಲ್ಸ್‌ ಗಳನ್ನು ಕೂಡ ಕಲಿಸಲಾಗುವುದು ಎಂದು ಸಚಿವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ| ಭರತ್‌ ಶೆಟ್ಟಿ ವೈ. ಮಾತನಾಡಿ, ಅತ್ಯುತ್ತಮ ಶೈಕ್ಷಣಿಕ ಸಂಸ್ಕೃತಿ ಮತ್ತು ಸಂಪರ್ಕ ವ್ಯವಸ್ಥೆ ಹೊಂದಿರುವ ಮಂಗಳೂರಿನಲ್ಲಿ ಸುಸಜ್ಜಿತ ಐಟಿ ಪಾರ್ಕ್‌ ಸ್ಥಾಪನೆ ಅಗತ್ಯವಿದ್ದು,  ಭೂಮಿ ಮತ್ತಿತರ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನಾವು ಸಿದ್ಧ ಎಂದರು.

ಎ.ಜೆ. ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಾ| ಎ.ಜೆ. ಶೆಟ್ಟಿ ಅವರು, ಉದ್ಯೋಗ ಮೇಳ ಆಗಾಗ ನಡೆಯುತ್ತಿರಬೇಕು ಎಂದರು.

ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ವೇದವ್ಯಾಸ ಕಾಮತ್‌, ಮೇಯರ್‌ ಪ್ರೇಮಾನಂದ ಶೆಟ್ಟಿ, ಉಪಮೇಯರ್‌ ಸುಮಂಗಲಾ ರಾವ್‌, ವಿವಿಧ ನಿಗಮಗಳ ಅಧ್ಯಕ್ಷರಾದ ನಿತಿನ್‌ ಕುಮಾರ್‌, ಹರಿಕೃಷ್ಣ ಬಂಟ್ವಾಳ, ಸಂತೋಷ್‌ ಕುಮಾರ್‌ ರೈ ಬೋಳಿಯಾರು, ರವೀಂದ್ರ ಶೆಟ್ಟಿ, ಕೌಶಲಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿ‌ನ್‌ ಗೌಡ, ಸಂದೀಪ್‌ ಮೈನಿ, ರೋಬೊಸಾಫ್ಟ್‌ ಸಂಸ್ಥೆಯ ಮುಖ್ಯಸ್ಥ ರೋಹಿತ್‌ ಭಟ್‌, ಸುಧಾಕರ ಗುಡಿಪಾಟಿ ಉಪಸ್ಥಿತರಿದ್ದರು. ಕೌಶಲಾಭಿವೃದ್ಧಿ ನಿಗಮದ ಸಿಇಒ ಸಂಜೀಬ್‌ ಗುಪ್ತಾ ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಅಂತಾರಾಷ್ಟ್ರೀಯ ವಲಸೆ ಕೇಂದ್ರ,  ಇಂಗ್ಲಿಷ್‌ ಕಲಿಕಾ ಲ್ಯಾಬ್‌ ಉದ್ಘಾಟನೆ :

ಅಂತಾರಾಷ್ಟ್ರೀಯ ವಲಸೆ ಕೇಂದ್ರದ ಮಂಗಳೂರು ಪ್ರಾದೇಶಿಕ ಕಚೇರಿಗೆ ಸಚಿವ   ಡಾ| ಅಶ್ವತ್ಥನಾರಾಯಣ ಚಾಲನೆ ನೀಡಿದರು. ಮೇಕ್‌ ಇಂಡಿಯಾ ಕೇಪಬಲ್ ಕಾರ್ಯಕ್ರಮದಡಿ ಇಂಗ್ಲಿಷ್‌ ಕಲಿಕಾ ಲ್ಯಾಬ್‌ ಅನ್ನು ಲೋಕಾರ್ಪಣೆಗೊಳಿಸಿದ ಅವರು, ಈ ಲ್ಯಾಬ್‌ನಲ್ಲಿ ಪ್ರತೀ 3 ತಿಂಗಳಿಗೊಮ್ಮೆ ತಲಾ 300 ಜನರಿಗೆ ಉದ್ಯೋಗಕ್ಕೆ ಅಗತ್ಯವಾಗಿರುವ ಇಂಗ್ಲಿಷ್‌ ಭಾಷಾ ಕೌಶಲವನ್ನು ಕಲಿಸಲಾಗುವುದು ಎಂದು ಹೇಳಿದರು.

ಮೀನುಗಾರಿಕಾ ಕ್ಷೇತ್ರದಲ್ಲಿ  ಹೊಸ ಉದ್ಯೋಗ: ಒಪ್ಪಂದ :

ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಉದ್ಯೋಗ ಸೃಷ್ಟಿಗೆ ಸಂಬಂಧಿಸಿ ಕರ್ನಾಟಕ ರಾಜ್ಯ ಕೌಶಲಾಭಿವೃದ್ಧಿ ನಿಗಮ ಮತ್ತು ಮಂಗಳೂರಿನ ಮೀನುಗಾರಿಕೆ ಕಾಲೇಜು ಒಪ್ಪಂದ ಮಾಡಿ ಕೊಂಡಿದ್ದು, ಸಚಿವ ಡಾ| ಅಶ್ವತ್ಥನಾರಾಯಣ ಮತ್ತು ಮೀನುಗಾರಿಕೆ ಕಾಲೇಜಿನ ಫಿಶರೀಸ್‌ ಎಕನಾಮಿಕ್ಸ್‌ ವಿಭಾಗದ ಮಖ್ಯಸ್ಥ ಡಾ| ಎಸ್‌.ಆರ್‌. ಸೋಮಶೇಖರ್‌ ಸಹಿ ಹಾಕಿದರು.

ಟಾಪ್ ನ್ಯೂಸ್

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

10

Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ

9

Udupi: ಬಿಎಸ್ಸೆನ್ನೆಲ್‌ ಟವರ್‌ ನಿರ್ವಹಣೆ ಹೊಣೆ ಪಂಚಾಯತ್‌ ಹೆಗಲಿಗೆ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.