ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೆಯ ಸ್ತಂಭ: ಡಾ| ಮೌಲ್ಯಾ
Team Udayavani, Jul 17, 2017, 2:15 AM IST
ದರ್ಬೆ: ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದೊಂದಿಗೆ ಪತ್ರಿಕೋದ್ಯಮವನ್ನು ನಾಲ್ಕನೆಯ ಸ್ತಂಭವನ್ನಾಗಿ ಪರಿಗಣಿಸಲಾಗಿದೆ ಎಂದು ಮೂಡಬಿದ್ರಿ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ| ಮೌಲ್ಯಾ ಜೀವನ್ ರಾಮ್ ಹೇಳಿದರು. ಸಂತ ಫಿಲೋಮಿನಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳು ಹೊರ ತಂದಿರುವ ಫಿಲೋ-ಸಂದರ್ಶನವನ್ನು ಅನಾವರಣಗೊಳಿಸಿದರು.
ಪ್ರಚಲಿತ ಸನ್ನಿವೇಶದಲ್ಲಿ ಪತ್ರಿಕೋದ್ಯಮವನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶಗಳಿವೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಸಾಮರ್ಥ್ಯವನ್ನು ಅರಿತುಕೊಂಡು ಅವಕಾಶಗಳ ಕಡೆಗೆ ಮುನ್ನುಗ್ಗಬೇಕು. ಉತ್ತಮ ಪತ್ರಕರ್ತರೆನಿಸಿಕೊಳ್ಳಬೇಕಾದರೆ ಕೆಲಸದಲ್ಲಿ ದೃಢವಿಶ್ವಾಸ, ಓದುವ ಅಭ್ಯಾಸ, ಭಾಷೆಯಲ್ಲಿ ಹಿಡಿತ, ಸಂವಹನ ಕಲೆ, ನಿಷ್ಪಕ್ಷಪಾತ ಧೋರಣೆ, ತಾಳ್ಮೆ ಮುಂತಾದವುಗಳು ಇರಲೇಕು. ಮಾಧ್ಯಮಗಳಲ್ಲಿ ಕರ್ತವ್ಯ ನಿರ್ವಹಿಸುವವರು ಮಾಹಿತಿಗಳನ್ನು ಸರಿಯಾಗಿ ವಿಶ್ಲೇಷಿಸುವುದು ಬಹಳ ಅಗತ್ಯವಾಗಿದೆ ಎಂದು ಹೇಳಿದರು.
ವ್ಯವಸ್ಥಿತ ನಿರ್ವಹಣೆ ಅಗತ್ಯ
ಗೌರವ ಅತಿಥಿಗಳಾಗಿ ಭಾಗವಹಿಸಿದ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರೊ| ದಿನಕರ ರಾವ್ ಮಾತನಾಡಿ, ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ವೈಜ್ಞಾನಿಕ ಹಾಗೂ ಪ್ರಚಲಿತ ಸನ್ನಿವೇಶಗಳ ಕುರಿತು ಸಾಕಷ್ಟು ಜ್ಞಾನವನ್ನು ಹೊಂದಿರಬೇಕು. ಪತ್ರಕರ್ತರಾದವರು ಮಾಹಿತಿ ಸಂಗ್ರಹ, ಸಂಗ್ರಹಿಸಿದ ಮಾಹಿತಿಯ ವಿಶ್ಲೇಷಣೆ, ವರದಿ ತಯಾರಿ ಮುಂತಾದವುಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಿಯೊ ನೊರೊನ್ಹ ಮಾತನಾಡಿ, ಪತ್ರಿಕೋದ್ಯಮವು ಒಂದು ವಿಶೇಷ ಸ್ಥಾನಮಾನವುಳ್ಳ ಕ್ಷೇತ್ರವಾಗಿದೆ. ಕಾಲೇಜಿನಲ್ಲಿ ರಾಷ್ಟ್ರೀಯ, ವಿಶ್ವವಿದ್ಯಾನಿಲಯ ಮಟ್ಟದ ನಾನಾ ರೀತಿಯ ಚಟುವಟಿಕೆಗಳನ್ನು ಏರ್ಪಡಿಸಲಾಗುತ್ತದೆ. ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಕುರಿತು ವರದಿಯನ್ನು ತಯಾರಿಸಿ, ಇತರರಿಗೆ ತಲುಪಿಸುವಂತಹ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಹೇಳಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ತಾರಾ ಸ್ವಾಗತಿಸಿ, ಫಾತಿಮತ್ ನಿಶಾನ ವಂದಿಸಿದರು. ಫಾತಿಮತ್ ಶೈಮಾ ಅಫ್ರಿನ್ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.