ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ
ಗ್ರಾಮಸ್ಥರಿಂದ ಹಲವು ಬೇಡಿಕೆ ಪಟ್ಟಿ ಸಲ್ಲಿಕೆ
Team Udayavani, Jan 6, 2020, 7:17 AM IST
ಸುಳ್ಯ: ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ದ.ಕ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಮತ್ತು ಮಡಪ್ಪಾಡಿ ಗ್ರಾ. ಪಂ. ಸಹಭಾಗಿತ್ವದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ರವಿವಾರ ಮಡಪ್ಪಾಡಿಯಲ್ಲಿ ನಡೆಯಿತು.
ಎ.ಜೆ. ವೈದ್ಯಕೀಯ ಮಹಾವಿದ್ಯಾ ಲಯ ಮತ್ತು ಸಂಶೋಧನ ಕೇಂದ್ರ ವತಿಯಿಂದ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ ಮತ್ತು ಇಂಡಿಯನ್ ರೆಡ್ ಕ್ರಾಸ್‌ನ ಜಿಲ್ಲಾಘಟಕದ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು. ವೈದ್ಯಕೀಯ ಶಿಬಿರದಲ್ಲಿ 138 ಮತ್ತು ರಕ್ತದಾನ ಶಿಬಿರದಲ್ಲಿ 35ಕ್ಕೂ ಅಧಿಕ ಮಂದಿ ಪಾಲ್ಗೊಂಡರು. ಈ ವೇಳೆ ನಡೆದ ಆಧಾರ್ ತಿದ್ದುಪಡಿಯಲ್ಲಿ 75ಕ್ಕೂ ಅಧಿಕ ಮಂದಿ ಪ್ರಯೋಜನ ಪಡೆದರು. ಮತದಾರರ ಪಟ್ಟಿ ತಿದ್ದುಪಡಿ, ಸೇರ್ಪಡೆಯ ಮಿಂಚಿನ ನೋಂದಣಿ ಪ್ರಕ್ರಿಯೆ ನಡೆಯಿತು. ವಿವಿಧ ಇಲಾಖೆಗಳ ಸೌಲಭ್ಯಗಳ ಮಾಹಿತಿಯನ್ನು ಸ್ಟಾಲ್‌ಗಳಲ್ಲಿ ಪ್ರದರ್ಶಿಸಲಾಯಿತು.
ಗ್ರಾಮಸ್ಥರ ಜತೆಗಿನ ಸಂವಾದದಲ್ಲಿ ದೂರವಾಣಿ ನೆಟ್‌ವರ್ಕ್, ಅಡಿಕೆ ಎಲೆ ಹಳದಿ ರೋಗ, ಅರಣ್ಯ ಭೂಮಿ ಕಾರಣ ರಸ್ತೆ, ಹಕ್ಕುಪತ್ರ ದೊರೆಯದಿರುವುದು, ಸರಕಾರಿ ಶಾಲೆಗೆ ಸಂಪರ್ಕಕ್ಕೆ ವಾಹನ ಸಮಸ್ಯೆ, ಹದಗೆಟ್ಟ ಸಂಪರ್ಕ ರಸ್ತೆ ಸಹಿತ 23ಕ್ಕೂ ಅಧಿಕ ಮಂದಿ ಬೇಡಿಕೆ ಪಟ್ಟಿ ಮುಂದಿರಿಸಿದರು. ಇದಕ್ಕೆ ಅಧಿಕಾರಿಗಳು ಉತ್ತರಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಗ್ರಾಮಸ್ಥರು ಮತ್ತು ಜನಪ್ರತಿನಿಧಿಗಳೊಂದಿಗೆ ಸಂವಾದ ನಡೆಯಿತು. ಗ್ರಾಮಸ್ಥರ ಬೇಡಿಕೆಯಂತೆ ಮಡಪ್ಪಾಡಿ ಗ್ರಾಮಕ್ಕೆ ಸರಕಾರದಿಂದ ವಿಶೇಷ ಪ್ಯಾಕೇಜ್ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮತ್ತು ಜ.15ರೊಳಗೆ ಜಿಲ್ಲಾ ಮಟ್ಟದಲ್ಲಿ ಸಭೆ ಆಯೋಜಿಸುವ ಭರವಸೆ ನೀಡಿದರು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಉದ್ಘಾಟಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು.
40 ವರ್ಷ ಬಳಿಕ ಗ್ರಾಮಕ್ಕೆ ಡಿಸಿ !
ಮಡಪ್ಪಾಡಿ ಗ್ರಾಮಕ್ಕೆ 40 ವರ್ಷದ ಬಳಿಕ ಡಿಸಿ ಬಂದಿದ್ದಾರೆ. ಇಷ್ಟೊಂದು ಅಧಿಕಾರಿಗಳನ್ನು ಈ ಗ್ರಾಮದಲ್ಲಿ ಕಂಡದ್ದೆ ಇದು ಮೊದಲ ಬಾರಿ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
Sulya: ನಿಲ್ಲಿಸಿದ್ದ ಕಾರಿಗೆ ಬಸ್ ಢಿಕ್ಕಿ; ಜಖಂ
Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್ ಕೇಬಲ್ ಕಳವು
Sulya: ಆರಂತೋಡು: ಚಿಕನ್ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.