ಜು. 22: ಮಂಗಳೂರಿನಲ್ಲಿ ಶಾಂತಿಯಾತ್ರೆ ದೇವೇಗೌಡ ನೇತೃತ್ವ
Team Udayavani, Jul 15, 2017, 10:37 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ನಡೆಯುತ್ತಿರುವ ಕೋಮು ಸಂಘರ್ಷದ ಹಿನ್ನೆಲೆಯಲ್ಲಿ ಶಾಂತಿ ಸಾಮರಸ್ಯದ ಆಶಯ ದೊಂದಿಗೆ ಜು. 22ರಂದು ಧಾರ್ಮಿಕ ಗುರುಗಳು, ಮಠಾಧೀಶರು, ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಭಾಗವಹಿಸುವಿಕೆಯೊಂದಿಗೆ ಮಂಗಳೂರಿನಲ್ಲಿ ಶಾಂತಿಯಾತ್ರೆ ನಡೆಯಲಿದೆ ಎಂದು ದ.ಕ. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಞಿ ತಿಳಿಸಿದರು.
ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಅವರ ಆಶಯದಂತೆ ಅವರ ಭಾಗವಹಿಸುವಿಕೆಯೊಂದಿಗೆ ನಡೆಯುವ ಶಾಂತಿಯಾತ್ರೆಯಲ್ಲಿ ಕಾಂಗ್ರೆಸ್, ಬಿಜೆಪಿ, ಎಸ್‌ಡಿಪಿಐ ಹೊರತು ಪಡಿಸಿ ಇತರ ಎಲ್ಲ ರಾಜಕೀಯ ಪಕ್ಷಗಳು, ಮುಖಂಡರು ಭಾಗವಹಿಸುವರು. ಯಾವುದೇ ಪಕ್ಷದ, ಸಂಘಟನೆಯ ಧ್ವಜ ಬಳಕೆಗೆ ಅವಕಾಶವಿಲ್ಲ. ಶಾಂತಿಯ ಸಂಕೇತವಾದ ಬಿಳಿ ಧ್ವಜ ಮಾತ್ರ ಇರುತ್ತದೆ. ಶಾಂತಿಯಾತ್ರೆ ಬಾವುಟಗುಡ್ಡೆಯಿಂದ ಪ್ರಾರಂಭವಾಗಲಿದೆ. ಗಾಂಧಿ ಪ್ರತಿಮೆಗೆ ಹಾರಾರ್ಪಣೆಗೈದ ಬಳಿಕ ನಗರದ ಪುರ ಭವನದವರೆಗೆ ಸಾಗಿ ಸಭೆ ನಡೆಯಲಿರುವುದು ಎಂದರು.
ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ರಾಂಗಣೇಶ್, ನಗರಾಧ್ಯಕ್ಷ ವಸಂತ ಪೂಜಾರಿ, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಕಾರ್ಪೊರೇಟರ್ ರಮೀಜಾ, ರಾಮಕೃಷ್ಣ ಶೆಟ್ಟಿ, ಗೋಪಾಲಕೃಷ್ಣ, ಶ್ರೀನಾಥ್ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
MUST WATCH
ಹೊಸ ಸೇರ್ಪಡೆ
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.