![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 2, 2022, 8:00 AM IST
ಮಂಗಳೂರು: ಪೋಕ್ಸೋ ಪ್ರಕರಣದಲ್ಲಿ ನಿಜವಾದ ಆರೋಪಿಯನ್ನು ಬಂಧಿಸದೆ ಅದೇ ಹೆಸರಿನ ಬೇರೆ ವ್ಯಕ್ತಿಯನ್ನು ಬಂಧಿಸಿ ಸುಮಾರು ಒಂದು ವರ್ಷ ಕಾಲ ನ್ಯಾಯಾಂಗ ಬಂಧನದಲ್ಲಿರುವಂತೆ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿಗಳಿಬ್ಬರು ತಮ್ಮ ಜೇಬಿನಿಂದಲೇ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಇಲ್ಲಿನ ಎರಡನೇ ಹೆಚ್ಚುವರಿ ಎಫ್‌ಟಿಎಸ್‌ಸಿ ಪೋಕ್ಸೋ ನ್ಯಾಯಾಲಯ ಆದೇಶವಿತ್ತಿದೆ.
ಮಂಗಳೂರು ಮಹಿಳಾ ಪೊಲೀಸ್ ಠಾಣಾ ನಿರೀಕ್ಷಕರಾದ ರೇವತಿ ಮತ್ತು ಉಪನಿರೀಕ್ಷಕರಾದ ರೋಸಮ್ಮ ಪಿ ಪಿ ಅವರು ಆರೋಪಿ ನವೀನ್ ಸಿಕ್ವೇರ ಅವರಿಗೆ 5,00,000 ರೂ. ಪರಿಹಾರವನ್ನು ನೀಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರದ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೂ ಆದೇಶಿಸಿದ್ದಾರೆ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕೊÕ ನವೀನ್ ಎನ್ನುವ ವ್ಯಕ್ತಿ ಆರೋಪಿಯಾಗಿದ್ದನು. ಬಾಲಕಿ ನೀಡಿದ ಹೇಳಿಕೆಯನ್ವಯ ಎಸ್.ಐ ರೋಸಮ್ಮ ಪಿ.ಪಿ ಅವರು ನವೀನ್ ಮೇಲೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಪೊಲೀಸ್ ನಿರೀಕ್ಷಕಿ ರೇವತಿಯವರಿಗೆ ಹಸ್ತಾಂತರಿಸಿದ್ದರು. ತನಿಖಾ ಸಮಯ ನವೀನ್ ಸಿಕ್ವೇರ ಎಂಬವರನ್ನು ಬಂಧಿಸಲಾಗಿತ್ತು. ನೊಂದ ಬಾಲಕಿ ತನ್ನ ಫಿರ್ಯಾದಿಯಲ್ಲಿ ಮತ್ತು ನ್ಯಾಯಾಧೀಶರ ಮುಂದೆ ನೀಡಿದ ಹೇಳಿಕೆಯಲ್ಲಿ, ಕೇವಲ ನವೀನ್ ಎಂಬ ಆರೋಪಿಯ ಹೆಸರನ್ನು ಉಲ್ಲೇಖೀಸಿದ್ದಳು.ನವೀನ್ ಸಿಕ್ವೇರನನ್ನೇ ಆರೋಪಿಯನ್ನಾಗಿಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಆರೋಪಿ ಪರ ವಕೀಲರಾದ ರಾಜೇಶ್‌ಕುಮಾರ್ ಅಮಾrಡಿ ಮತ್ತು ಗಿರೀಶ್ ಶೆಟ್ಟಿ ಅವರು ವಾದ ಮಂಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಯು.ರಾಧಾಕೃಷ್ಣ ಅವರು, ನವೀನ್ ಸಿಕ್ವೇರ ನಿರಪರಾಧಿ ಎಂದು ಖುಲಾಸೆ ಗೊಳಿಸಿದ್ದಾರೆ. ಅಲ್ಲದೆ ಪೊಲೀಸ್ ಅಧಿಕಾರಿಗಳು ನಿಜವಾದ ವ್ಯಕ್ತಿಯನ್ನು ಬಂಧಿಸದೆ, ನವೀನ್ ಸಿಕ್ವೇರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಕ್ಕೆ 5 ಲ.ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.