ಜೂ. 21: ದಕ್ಷಿಣ ಕನ್ನಡದ 3 ಕಡೆ ಯೋಗ ದಿನಾಚರಣೆ
Team Udayavani, Jun 16, 2022, 6:40 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಸಂಘ-ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಯೋಗ ದಿನಾಚರಣೆ ಜೂ. 21ರಂದು ನಡೆಯಲಿದ್ದು, ಈ ಪೈಕಿ ಮೂರು ಕಡೆಗಳಲ್ಲಿ ಜಿಲ್ಲಾ ಮಟ್ಟದ ಯೋಗ ದಿನಾಚರಣೆಯನ್ನು ಆಯೋಜಿಸಲು ನಿರ್ಧರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಮಹಾವಿದ್ಯಾಲಯ, ಎನ್‌ಎಸ್‌ಎಸ್, ಎನ್‌ಸಿಸಿ ಕೋ ಆರ್ಡಿನೇಟರ್, ವಿವಿಧ ಯೋಗ ಸಂಘಟನೆಗಳ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಪ್ರಧಾನ ಕಾರ್ಯಕ್ರಮ ಮಂಗಳೂರು ಪುರಭವನದಲ್ಲಿ ಜೂ. 21ರಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ. ಜತೆಗೆ ಆಳ್ವಾಸ್ ನುಡಿಸಿರಿ ವೇದಿಕೆ ಮೂಡುಬಿದಿರೆ ಹಾಗೂ ಸುಳ್ಯದ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ನಡೆಯಲಿದೆ. ಉಳಿದಂತೆ ಎಲ್ಲ ಆಯುಷ್ ಮಹಾವಿದ್ಯಾಲಯ, ಸಂಘ-ಸಂಸ್ಥೆಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಆಯೋಜಿಸಲಾಗಿದೆ. ಸುಮಾರು 1 ಲಕ್ಷ ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಜಿಲ್ಲೆಯಾದ್ಯಂತ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಸುಮಾರು 50 ಸಾವಿರ ಜನರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ವಿವಿಧ ಯೋಗ ಸಂಘಟನೆಗಳು, ಕಾಲೇಜುಗಳ ಸಹಕಾರದೊಂದಿಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.