ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿಗೆ ಜು. 29 ಕೊನೆಯ ದಿನ
Team Udayavani, Jun 23, 2018, 3:30 AM IST
ಮಂಗಳೂರು: ಕಡಿಮೆ ವೆಚ್ಚದಲ್ಲಿ ಆರೋಗ್ಯ ಸೇವೆ ಪಡೆಯುವಂತಾಗಲು ನಗರದ ಕೆಎಂಸಿ ಆಸ್ಪತ್ರೆ ‘ಮಣಿಪಾಲ ಆರೋಗ್ಯ ಕಾರ್ಡ್’ ಪಡೆದುಕೊಳ್ಳುವ ಅವಕಾಶ ಕಲ್ಪಿಸುತ್ತಿದ್ದು, ನೋಂದಣಿಗೆ ಜು.29 ಕೊನೆಯ ದಿನವಾಗಿರುತ್ತದೆ. ಜೂ.11ರಿಂದಲೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಖಾಂತರವೂ ನೋಂದಣಿ ಮಾಡಿಕೊಳ್ಳಬಹುದು. ವಾರ್ಷಿಕ 250 ರೂ. ನೀಡಿ 2019 ಜು. 31ವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಕಾರ್ಡ್ ಪಡೆದವರು ಅತ್ತಾವರ ಹಾಗೂ ಬಲ್ಮಠದ ಕೆಎಂಸಿ ಆಸ್ಪತ್ರೆ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ, ಟಿಎಂಎ ಪೈ ಆಸ್ಪತ್ರೆ ಉಡುಪಿ ಹಾಗೂ ಕಾರ್ಕಳದ ಟಿಎಂಎ ಪೈ ರೋಟರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಪಡೆದುಕೊಳ್ಳಬಹುದು. ಮಂಗಳೂರು ಹಾಗೂ ಮಣಿಪಾಲದಲ್ಲಿರುವ ಡೆಂಟಲ್ ಆಸ್ಪತ್ರೆಗಳಲ್ಲೂ ಸೇವೆ ಲಭ್ಯ.
ಸೇವೆಗಳು ಯಾವುವು?
ಕಾರ್ಡ್‌ನ ಅವಧಿ ಒಂದು ವರ್ಷ ಇದ್ದು, ಈ ಅವಧಿಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದರೆ ತೆರಬೇಕಾದ ಶುಲ್ಕದಲ್ಲಿ 50 ಶೇ. ಕಡಿತವಿದೆ ಲ್ಯಾಬ್, ಸ್ಕ್ಯಾನಿಂಗ್ ಇತ್ಯಾದಿಗಳ ಪರೀಕ್ಷಾ ಶುಲ್ಕದಲ್ಲಿ ಶೇ. 20 ಕಡಿತ ಇರಲಿದೆ. ಒಳರೋಗಿಯಾಗಿ ಸಾಮಾನ್ಯ ವಾರ್ಡ್‌ನಲ್ಲಿ ದಾಖಲಾಗಿ ಶಸ್ತ್ರಕ್ರಿಯೆ ಅಥವಾ ಸಹಜ ಹೆರಿಗೆಯಾದಲ್ಲಿ ಶುಲ್ಕದಲ್ಲಿ ಶೇ. 50 ಕಡಿತ ಇರಲಿದೆ. ಒಳರೋಗಿಯಾಗಿ ಸೆಮಿಪ್ರೈವೇಟ್ ವಾರ್ಡ್ ಅಥವಾ ಸ್ಪೆಷಲ್ ವಾರ್ಡ್‌ನಲ್ಲಿ ದಾಖಲಾಗಿದ್ದರೆ ಸೇವಾ ಶುಲ್ಕದಲ್ಲಿ ಶೇ. 20 ರಷ್ಟು ಕಡಿತ ಹಾಗೂ ಶಸ್ತ್ರಕ್ರಿಯೆಗೆ ಶೇ.10ರಷ್ಟು ಕಡಿತ ಇರಲಿದೆ ಹೆಚ್ಚಿನ ಮಾಹಿತಿಗೆ 0824-2430555 ಸಂಪರ್ಕಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.