Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ
Team Udayavani, Jan 11, 2025, 11:05 AM IST
ಮಂಗಳೂರು: ಹಿಂದಿ ಭಾಷೆ ರಾಷ್ಟ್ರೀಯ ಭಾಷೆಯೇ ಅಲ್ಲ ಎಂದು ಮಾಜಿ ಕ್ರಿಕೆಟಿಗ ಅಶ್ವಿನ್ ಹೇಳಿಕೆ ನೀಡಿರುವ ವಿಚಾರಕ್ಕೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಶನಿವಾರ(ಜ.11) ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಿಂದಿ ಭಾಷೆಯ ಕುರಿತು ಆರ್. ಅಷ್ವಿನ್ ಒಂದು ದೃಷ್ಟಿಕೋನ ಇಟ್ಟುಕೊಂಡು ಹೇಳಿಕೆ ನೀಡಿದ್ದಾರೆ, ಹಿಂದಿ ಒಂದು ಅಫಿಶಿಯಲ್ ಲ್ಯಾಂಗ್ವೇಜ್, ಪ್ರಧಾನ ಮಂತ್ರಿ ತುಂಬಾ ಕಡೆ ಇದನ್ನೇ ಹೇಳಿದ್ದು, ಕೇವಲ ಹಿಂದಿ ಮಾತ್ರ ರಾಷ್ಟ್ರೀಯ ಭಾಷೆ ಅಂತಲ್ಲ, ಎಲ್ಲಾ ಭಾಷೆಯೂ ರಾಷ್ಟ್ರೀಯ ಭಾಷೆ ಅಂತನೇ ಹೇಳಿದ್ದಾರೆ, ಅಲ್ಲದೆ ಪ್ರಧಾನಿ ಅವರು ಕನ್ನಡ ಭಾಷೆಗೆ ತುಂಬಾ ಮರ್ಯಾದೆ ಕೊಡುತ್ತಾರೆ ಅದೇ ರೀತಿ ತಮಿಳುಗೂ ತುಂಬಾ ಮರ್ಯಾದಿ ಕೊಡುತ್ತಾರೆ,
ಅಶ್ವಿನ್ ಒಂದು ದೃಷ್ಟಿಕೋನದಲ್ಲಿ ಹೇಳಿದ್ದಾರೆ, ಕೇವಲ ಹಿಂದಿ ಮಾತ್ರವಲ್ಲ ಎಲ್ಲಾ ಭಾಷೆಯು ರಾಷ್ಟ್ರೀಯ ಭಾಷೆ ಎಂಬ ಅರ್ಥದಲ್ಲಿ ಅಶ್ವಿನಿ ಹೇಳಿದ್ದಾರೆ ಅಷ್ಟೇ ಬೇರೆ ಏನು ವಿಚಾರ ಇಲ್ಲ ಎಂದು ಹೇಳಿದ್ದಾರೆ.
ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ:
ಎರಡು ದಿನಗಳ ಹಿಂದೆ 6 ಮಂದಿ ನಕ್ಸಲರ ಶರಣಾಗತಿಯ ಕುರಿತು ಸರಕಾರ ನಡೆದು ಕೊಂಡ ರೀತಿ ಸಂಶಯ ಮೂಡಿಸುತ್ತಿದೆ ಎಂದ ಅವರು ಈ ಹಿಂದೆ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ ಕೂಡ ಸಂಶಯ ಮೂಡಿಸುತ್ತಿದೆ ಎಂದು ಹೇಳಿದರು.
View this post on Instagram
ಈ ಹಿಂದೆ ನಾನು ಚಿಕ್ಕಮಂಗಳೂರು ಎಸ್ಪಿ ಆಗಿದ್ದ ಸಂದರ್ಭದಲ್ಲಿ ನಕ್ಸಲರು ಶರಣಾಗಿದ್ದರು, ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿದ್ದೆ, ನಿಯಮಗಳ ಪ್ರಕಾರ ಜಿಲ್ಲಾಧಿಕಾರಿ ಮತ್ತು ಎಸ್ಪಿ ಎದುರು ನಕ್ಸಲರು ಶರಣಾಗಬೇಕು ಆನಂತರ ಬೇರೆ ಪ್ರಕ್ರಿಯೆಗಳು ನಡೆಯುತ್ತೆ ಆದರೆ ಇಲ್ಲಿ ರಾಜಕೀಯ ಮೈಲೇಜ್ ಗೋಸ್ಕರ ಶರಣಾಗತಿ ಪ್ರಕ್ರಿಯೆ ನಡೆಸಲಾಗಿದೆ ನಕ್ಸಲ್ ಬೆಂಬಲಿಗರು ಸರ್ಕಾರದ ಮೇಲೆ ಪ್ರಭಾವ ಬೀರಿದ್ದಾರೆ, ಇವರು ನಾಗರಿಕ ಸಮಾಜದ ಮೇಲೆ ಇವರು ಪ್ರಭಾವ ಬೀರಲಿದ್ದಾರೆ, ನಕ್ಸಲರು ಶರಣಾದಾಗ ಜನರಿಗೆ ವಿಶ್ವಾಸ ಬರಬೇಕು ಆದರೆ ಮೊನ್ನೆ ನಡೆದ ನಕ್ಸಲರ ಶರಣಾಗತಿಯ ಬಗ್ಗೆ ಜನರಲ್ಲಿ ವಿಶ್ವಾಸವಿಲ್ಲ ಅಷ್ಟು ಮಾತ್ರವಲ್ಲದೆ ಶರಣಾಗತಿಯ ಬಗ್ಗೆ ಗೃಹ ಸಚಿವರಿಗೆ ಮಾಹಿತಿಯ ಕೊರತೆ ಇದ್ದ ಹಾಗೆ ಕಾಣುತ್ತಿದ್ದು, ಶರಣಾದ ನಕ್ಸಲರು ನಾಗರಿಕ ಸಮಾಜದ ಮೇಲೆ ಪ್ರಭಾವ ಬೀರುವ ಅಪಾಯವಿದೆ ಎಂದು ಹೇಳಿದರು.
ಇದನ್ನೂ ಓದಿ: AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.